ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಆಧುನಿಕ ಸ್ಪರ್ಶ ನೀಡಿ ಗ್ರಾಫಿಕ್ ಮತ್ತು ಆನಿಮೇಶನ್ (ಜೀವಚೇತನ) ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ ಯಕ್ಷಗಾನ ವಿ.ಸಿ.ಡಿ 'ಶ್ರೀ ಹರಿಮಾಯೆ' ಬಿಡುಗಡೆ

ಯಕ್ಷಗಾನಕ್ಕೆ ಆಧುನಿಕ ಸ್ಪರ್ಶ ನೀಡಿ ಗ್ರಾಫಿಕ್ ಮತ್ತು ಆನಿಮೇಶನ್ (ಜೀವಚೇತನ) ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ ಯಕ್ಷಗಾನ ವಿ.ಸಿ.ಡಿ "ಶ್ರೀ ಹರಿಮಾಯೆ" ಬಿಡುಗಡೆ ಮತ್ತು ಭಾಗ್ಯ ಟೆಲಿ ಚಿತ್ರದ ಪ್ರದರ್ಶನ ಜುಲೈ ೪ರಂದು ಅಮರಶ್ರೀ ಚಿತ್ರ ಮಂದಿರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ ಶೇಖರ ಅಜೆಕಾರು ತಿಳಿಸಿದ್ದಾರೆ.


ಪ್ರಕಾಶ್ ಕಾಬೆಟ್ಟು ಅವರ ಹಾರರ್ ಚಲನಚಿತ್ರ "ಭವ"ದ ಬಿಡುಗಡೆ ಪ್ರಯುಕ್ತ ಶ್ರೀ ವಿದ್ಯಾ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಈ ಎರಡೂ ಚಿತ್ರಗಳನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರದರ್ಶನ ಮಾಡಲಾಗುತ್ತಿದೆ.


ಮುಂಬಯಿಯ ಶ್ರೀ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯದ ಕಟೀಲು ಸದಾನಂದ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಸಂತೋಷ್ ಶೆಟ್ಟಿ ಕಟೀಲು ಅವರ ತಾಂತ್ರಿಕ ಸಂಯೋಜನೆಯಲ್ಲಿ ಹೊರಬಂದಿರುವ - ಈ ಸಿಡಿಯನ್ನು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಬಿಡುಗಡೆ ಮಾಡಲಿದ್ದಾರೆ. ಪಿಂಗಾರ ಪತ್ರಿಕೆಯ ಸಂಪಾದಕ ರೇಮಂಡ್ ಡಿ’ಕುನ್ಹ ತಾಕೋಡೆ, ಭವ ಚಿತ್ರದ ನಿರ್ಮಾಪಕ- ನಿರ್ದೇಶಕ ಪ್ರಕಾಶ್ ಕಾಬೆಟ್ಟು ಸಹಿತ ಅತಿಥಿಗಳು ಭಾಗವಹಿಸಲಿರುವರು.


"ಯಕ್ಷಗಾನದಲ್ಲಿ ಹೊಸ ಪ್ರಯೋಗ ಮಾಡಬೇಕು ಅದರ ಮೂಲ ಸ್ವರೂಪಕ್ಕೆ ದಕ್ಕೆ ಬಾರದ ರೀತಿಯಲ್ಲಿ ಹಿಮ್ಮೇಳ-ಮುಮ್ಮೇಳ ಉಳಿಸಿಕೊಂಡು ದೃಶ್ಯವನ್ನು ತಾಂತ್ರಿಕವಾಗಿ ಸಂಯೋಜನೆಗೊಳಿಸಿ ಮುಂದಿನ ಜನಾಂಗಕ್ಕೆ ನೀಡುವ ಆಶಯದೊಂದಿಗೆ ಈ ಸಿಡಿ(ದೃಶ್ಯ ತಟ್ಟೆ) ನಿರ್ಮಾಣಗೊಳಿಸಿದ್ದೇವೆ" ಎಂದು ಸದಾನಂದ ಶೆಟ್ಟಿ ಕಟೀಲು ಅಭಿಪ್ರಾಯ ಪಟ್ಟಿದ್ದಾರೆ.




ಮುಂಬಯಿಯಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯುತ್ತಿರುವ ೭ ಮಂದಿ ಮಕ್ಕಳು ಯಕ್ಷಗಾನ ಕಲಿತು ಇದರಲ್ಲಿ ಅಭಿನಯಿಸಿದ್ದಾರೆ.


ಮುಂಬಯಿಯ ಹಿರಿಯ ಕಲಾವಿದರು ಧ್ವನಿ ನೀಡಿದ್ದಾರೆ. ಪ್ರಸಿದ್ಧ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಹಾಡಿದ್ದಾರೆ. ವೇದಮೂರ್ತಿ, ಪೆರ್ಣಂಕಿಲ ಹರಿದಾಸ್ ಭಟ್, ಹರಿಕೃಷ್ಣ ಪುನರೂರು, ಶ್ರೀಮತಿ ಸುಶೀಲ ಶೆಟ್ಟಿ, ಕಳತ್ತೂರು ವಿಶ್ವನಾಥ ಜೆ.ಶೆಟ್ಟಿ, ಸುಧಾಕರ ಜಿ.ಪೂಜಾರಿ ಪೊವಾಯಿ, ಸುರೇಂದ್ರ ಕುಮಾರ್ ಹೆಗ್ಡೆ, ಸರಳ ಬಿ.ಶೆಟ್ಟಿ, ಶೇಖರ ಅಜೆಕಾರು ಮೊದಲಾದವರು ಈ ಯಕ್ಷಗಾನ ದೃಶ್ಯ ತಟ್ಟೆಯ ಬಿಡುಗಡೆಯಲ್ಲಿ ಸಹಾಯ ಮಾಡಿದ್ದಾರೆ ಎಂದು ಸದಾನಂದ ಶೆಟ್ಟಿ ಕಟೀಲು ಅವರು ಅಭಿಪ್ರಾಯ ಪಟ್ಟಿದ್ದಾರೆ. 

ಹೊಸತು : ಯಕ್ಷಗಾನದಲ್ಲಿ ದೇವಲೋಕ, ಹಿಮಾಲಯ ಯಾವುದೇ ದೃಶ್ಯವನ್ನು ಮಾತಿನ ಮೂಲಕ ಕಟ್ಟಿಕೊಡಲಾಗುತ್ತದೆ. ಆದರೆ ಈ ಹೊಚ್ಚ ಹೊಸ ಪ್ರಯೋಗದಲ್ಲಿ ದೃಶ್ಯಗಳು ನೈಜ ಸನ್ನವೇಶದಲ್ಲಿ ನಡೆಯುವಂತೆ ತಾಂತ್ರಿಕ ಸ್ಪರ್ಶ ನೀಡಲಾಗಿದೆ. ಬೆಳ್ಳಿಬೆಟ್ಟದಲ್ಲಿ ಕಾಣಿಸಿಕೊಳ್ಳುವ ಈಶ್ವರ-ಪಾರ್ವತಿ, ಭಸ್ಮಾಸುರನ ಜನನ, ಕಾನನದಲ್ಲಿ ಭಸ್ಮಾಸುರನ ನೃತ್ಯ, ಭಸ್ಮಾಸುರ ಭಸ್ಮವಾಗುವ ದೃಶ್ಯ, ಶೇಷ ಶಯನ ಶ್ರೀಹರಿ ಹೀಗೆ ನೈಜ
ಸನ್ನಿವೇಶಗಳನ್ನು  ಒಳಗೊಂಡು "ಶ್ರೀಹರಿ ಮಾಯೆ" ಈ ಪ್ರಸಂಗ ಮೂಡಿ ಬಂದಿದೆ. ಈಗಾಗಲೇ ಮಾಧ್ಯಮದ ಮತ್ತು ಯಕ್ಷ ಪ್ರೇಮಿಗಳ ಗಮನವನ್ನು ತನ್ನತ್ತ ಸೆಳೆದಿರುವ ಈ ಪ್ರಯೋಗ ಜನಸಾಮಾನ್ಯರಿಗೂ ದೊರೆಯುವಂತಾಗಿದೆ.
 ಯಕ್ಷಗಾನದ ಬೆಳವಣಿಗೆಯ ಹೊಸ ಆಯಾಮ ಇದು ಕೂಡ ಎಂದು ಯಕ್ಷ ವಿಮರ್ಶಕರು ಅಭಿಪ್ರಾಯ ಪಟ್ಟಿದ್ದು ಯಕ್ಷಾಭಿಮಾನಿಗಳ ಕಲಾವಿದರ ಸಲಹೆ ಸಹಕಾರದೊಂದಿಗೆ ಈ ಪ್ರಯೋಗದ ಮುಂದಿನ ಹೆಜ್ಜೆಯಾಗಿ ಇನ್ನೆರಡು ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ ಎಂದು ಸದಾನಂದ ಶೆಟ್ಟಿ ಕಟೀಲು ಅವರು ತಿಳಿಸಿದ್ದಾರೆ. 

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಶೇಖರ್ ಅಜೆಕಾರ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-07-03

Tell a Friend

ಪ್ರತಿಸ್ಪಂದನ
prajwal poojary, manglore
2012-08-11
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri