ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಹೋರಾಟ .. -ಅನಿತಾ ನರೇಶ್ ಮಂಚಿ ಅವರ ಬರಹ

ಕುದಿಯುತ್ತಿರುವ ಸಾರಿಗೆ ಏನೋ ಕಡಿಮೆಯಾದಂತನಿಸಿತು. ಕೊತ್ತಂಬರಿ ಸೊಪ್ಪೇ ಹಾಕಿರಲಿಲ್ಲ. ಅದನ್ನು ತರಲು ಅಂಗಳದ ಮೂಲೆಯ ಕೈತೋಟದ ಕಡೆಗೆ ಹೆಜ್ಜೆ ಹಾಕುತ್ತಿದ್ದೆ. ಪಕ್ಕನೇ ಎರಡು ದೊಡ್ಡ ಜಾತಿಯ ಕಡು ಕಪ್ಪು ಬಣ್ಣದ ಇರುವೆಗಳು ಕಣ್ಣು ಸೆಳೆದವು.ಇರುವೆಗಳ ಸಹಕಾರೀ ಗುಣ, ಶಿಸ್ತು,ಕಾರ್ಯ ಚಟುವಟಿಕೆಗಳ ಬಗ್ಗೆ ಮಾತ್ರ ತಿಳಿದಿದ್ದ ನನಗೆ ಇವುಗಳು ಕಾಳಗಕ್ಕೆ ಸಿದ್ಧರಾದಂತೆ ಎದುರು ಬದುರು ನಿಂತಿರುವ ರೀತಿ ಹೊಸದಾಗಿ ತೋರಿತು.


ಹೊರಟ ಕೆಲಸ ಮರೆತು ಅವುಗಳತ್ತಲೇ ನೋಡುತ್ತಾ ನಿಂತೆ. ನಾನು ಅಂದುಕೊಂಡಿದ್ದು ನಿಜವಾಗಿತ್ತು.ಅವು ಹತ್ತಿರ ಬಂದು ಬಲಾಬಲಗಳ ಪರೀಕ್ಷೆ ಮಾಡುವಂತೆ ಕೈಯಿಂದ ಕಾಲಿನಿಂದ ಪರಸ್ಪರ ದೂಡಿಕೊಳ್ಳುತ್ತಿದ್ದವು. ಇದ್ದಕ್ಕಿದ್ದಂತೆ ಒಂದು ಇರುವೆ ಪಕ್ಕದ ಗೋಡೆಯ ಮೇಲೆ ಹತ್ತಿ ಅಲ್ಲಿಂದ ಕೆಳಗಿದ್ದ ಇರುವೆಯ ಮೇಲೆ ನೆಗೆದು ಅದನ್ನು ಕೆಡವಿತು. ಬಲವಾಗಿ ಒಂದನ್ನೊಂದು ಗಟ್ಟಿ ಹಿಡಿದುಕೊಂಡು ಉಂಡೆಯಾಕಾರದಂತೆ ಅತ್ತಿಂದಿತ್ತ ಇತ್ತಿಂದತ್ತ ಉರುಳಿ ತಮ್ಮ ಚೂಪಾದ ಕೊಂಡಿಗಳಲ್ಲಿ ಚುಚ್ಚಿಕೊಳ್ಳುತ್ತಿದ್ದವು.


ಬೀದಿ ನಾಯಿಗಳ ಜಗಳ ನೋಡಿ ಅಭ್ಯಾಸವಿದ್ದ ನನಗೆ, ಅವುಗಳಂತೆ ಇವು ಕೂಡಾ ಒಂದು ಶರಣಾಗತಿಯನ್ನು ಸೂಚಿಸುತ್ತಾ ನಿಂತರೆ ಇನ್ನೊಂದು ಅದನ್ನು ಬಿಟ್ಟು ಹೋಗಬಹುದು ಎಂದುಕೊಂಡು, ಮಾಡಬೇಕಿದ್ದ ಕೆಲಸ ನೆನಪಿಸಿಕೊಂಡು ಅಲ್ಲಿಂದ ಕಾಲ್ತೆಗೆದೆ.


ಸ್ವಲ್ಪ ಹೊತ್ತು ಕಳೆದು ಪುನಃ ಕುತೂಹಲದಿಂದ ಆ ಜಾಗಕ್ಕೆ ಬಂದು ಪರೀಕ್ಷಿಸಿದೆ. ಎರಡೂ ಇರುವೆಗಳು ಅತ್ಯಂತ  ಪ್ರೀತಿಪಾತ್ರರಂತೆ  ಒಂದನ್ನೊಂದು ಅಪ್ಪಿಕೊಂಡು ಸತ್ತು ಬಿದ್ದಿದ್ದವು.

ಸಾಲಾಗಿ ಬರುತ್ತಿದ್ದ ಇನ್ನೊಂದು ಜಾತಿಯ  ಚಿಕ್ಕ ಇರುವೆಗಳ ಸಾಲು ಅವುಗಳನ್ನು ತಮ್ಮ ಆಹಾರವೆಂಬಂತೆ  ಗೂಡಿಗೆ ಹೂತ್ತೊಯ್ಯಲು ಪ್ರಯತ್ನಿಸುತ್ತಿರುವುದು ಯಾಕೋ ಶವ ಮೆರವಣಿಗೆಯಂತೆ ತೋರಿತು.

ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬ ಮಾತೆಷ್ಟು ನಿಜ .. !!


-ಅನಿತಾ ನರೇಶ್ ಮಂಚಿ

ತೋಟ ಮತ್ತು ಮನೆಗೆಲಸದ ನಡುವೆ ಅಲ್ಲಲ್ಲಿ ಮಿಂಚಿ  ಮರೆಯಾಗುವ ವಿಶಿಷ್ಟ ಭಾವಗಳನ್ನು  ಅಕ್ಷರ ರೂಪದಲ್ಲಿ ಸೆರೆ ಹಿಡಿಯುವ ಹವ್ಯಾಸದ ಗೃಹಿಣಿ  ಶ್ರೀಮತಿ  ಅನಿತಾ ನರೇಶ  ಮಂಚಿ  ಅವರ  ಬರಹಗಳು   ಕೆಲವೊಮ್ಮೆ ಕವನಗಳಾಗಿ, ಇಲ್ಲ ಕಥೆ  ಅಥವಾ ನಗು ಬರಹವೋ ಆಗಿ ಕಾಣಿಸಿಕೊಳ್ಳುತ್ತವೆ.

ಶ್ರೀಮತಿ ಅನಿತಾ ಅವರ  ಅಂತರ್ಜಾಲ ತಾಣ    www.kadalu.blogspot.com   

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ :ರಾಮ್ ನರೇಶ್ ಮಂಚಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-12

Tell a Friend

ಪ್ರತಿಸ್ಪಂದನ
salam, mangalore
2012-08-12
ಬರಹಕ್ಕೆ ಭಾವನೆಯೇ ಪ್ರಥಮ ಬಲ ಎಂಬುದನ್ನು ಅನಿತಾರವರು ತಮ್ಮ ಬರಹದ ಮೂಲಕ ತೋರಿಸಿರುವುದು ತುಂಬಾ ಸಂತೋಷ ತಂದಿದೆ. ಇನ್ನೂ ಇಂತಹ ಬರಹಗಳು ಬಹಿರಂಗವಾಗಲಿ...
ವಿಜಯ್ ಬಾರಕೂರು , ಕತಾರ್
2012-08-12
ಧನ್ಯವಾದಗಳು ಅನಿತಾ ನರೇಶ್ ಮಂಚಿಯವರೇ...ಓದುಗರನ್ನು ಸನ್ನಿವೇಶದ ಸ್ಥಳಕ್ಕೆ ಸದ್ದಿಲ್ಲದೇ ಕೊಂಡೊಯ್ಯುವ ತಮ್ಮ ಬರಹದ ಶೈಲಿ ಅದ್ಭುತ. ಮಾತೆ ಸರಸ್ವತಿಯ ಅನುಗ್ರಹ ಸದಾ ತಮ್ಮ ಮೇಲಿದ್ದು ಬರಹದ ನಲ್ಮೆಯ ಕಾರ್ಯ ಸದಾ ಮುಂದುವರಿಯುತ್ತಿರಲಿ...
Subhashini, Kasaragod
2012-08-12
ಒಂದು ಚಿಕ್ಕ ವಿಷಯ ಚೊಕ್ಕ ಚಿತ್ರ ಬರಹವಾಗಿ ಮಾರ್ಪಾಡಾಗಿದೆಯಲ್ಲ , ಅದೇ ಒಂದು ವಿಷ್ಮಯ !
ಡಾ.ವಸಂತಕುಮಾರ ಪೆರ್ಲ, ಮಂಗಳೂರು
2012-08-12
ಸಣ್ಣ ವಿಷಯಗಳನ್ನು ನೋಡುವ ಕುತೂಹಲ, ಅವನ್ನು ಭಾಷೆಯಲ್ಲಿ ಹಿಡಿದಿಡುವ ಪ್ರಯತ್ನ ಮೆಚ್ಚತಕ್ಕದ್ದು. ಅಭಿವ್ಯಕ್ತಿ ಹೀಗೆ ಆರಂಭಗೊಂಡು ದೊಡ್ಡದರತ್ತ ಸಾಗಿ ಅಗಾಧವಾಗಿ ಹೊಮ್ಮಬೇಕು. ಹಾಗಾಗಲಿ ಎಂದು ಹಾರೈಕೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಶಿಕ್ಷಕರ ದಿನಾಚರಣೆ ಮತ್ತು ಡಾ. ಎಸ್ ರಾಧಾಕೃಷ್ಣನ್
» ಕುಡಿದದ್ದು ಶರಬತ್ತು, ತಂದಿತ್ತು ಆಪತ್ತು !
»ಹಣೆಬರಹಕ್ಕೆ ಹೆದರಲಿಲ್ಲ, ಅದಕ್ಕೇ ಎತ್ತಿದಳು ಮಂಗಳಾರತಿ!
» ಊಹಾಪೋಹ ಮಹಾಪೂರದಲ್ಲಿ ಕೊಚ್ಚಿಹೋಗುವ ಮುನ್ನ...
»ಅಳುವಿನ ಕಾರಣ...
»ಕುಟ್ಟ ಬ್ಯಾರಿಯ ಪಂಜ ಪೇಟೆ...
» ವರ್ಣ ವ್ಯವಸ್ಥೆ: ಸಂಪೂರ್ಣ ಅವ್ಯವಸ್ಥೆ...
» ನಮ್ಮತಾರೆಯರಿಗೆ ಮೇಲ್ಮನೆಯಲ್ಲಿ ಏನು ಕೆಲಸ?...
»ವಧುವಿನ ದಕ್ಷಿಣೆ - 'ವರದಕ್ಷಿಣೆ'....
» ಗರುಡನ ಮಾರ್ಗ...
» ಹೃದಯದಾಳದ ಮಾತು....
»ಹೆಗಡೆ 86, ನೆನಪು ನೂರಾರು: ಜಾತಿ-ಹಣ ಮುಖ ನೋಡದೆ, ರಾಜಕೀಯ ಮಾಡಿದ್ರು...
» ನ್ಯಾಯಾಂಗದ ಗಾಜಿನ ಮನೆಗೆ ಕಲ್ಲು ಹೊಡೆದ ಮಮತಾ
» ಬೇರು ಒಣಗಿದ ಮರ ಗಟ್ಟಿಯಾಗಿ ನಿಂತೀತೇ?....
»ಜೆಪಿ ಹಾದಿಯಲ್ಲಿ ಅಣ್ಣಾ ನಡಿಗೆ ಸಾಧ್ಯವೇ? ...
»ಜಯಕಿರಣ ಪತ್ರಿಕೆಯಲ್ಲಿ ಬ೦ದತಹ ಯುವತಿಯೊಬ್ಬಳ ಮನದಾಳದ ಮಾತು...
»ಅಂತರಂಗದ ದನಿಗೆ ಕಿವುಡಾದವರ ನಡುವೆ...
»ದೇಶಪ್ರೇಮಕ್ಕಿಂತ ದೊಡ್ಡದೇ ಧರ್ಮಪ್ರೇಮ?...
»ಕತ್ತು ಕತ್ತರಿಸುವ ಸಿನಿಮಾಗಳ ಸಂದೇಶವೇನು?...
» ಪಾತ್ರೆಯೊಳಗಿನ ಮೀನು....
»ಸಮಾನತೆ...
» ಹರ್ಷದ ದಾರಿ
»ವೈಧವ್ಯವೆಂಬ ವಿಷವರ್ತುಲದಿಂದ ಇವರಿಗೆ ಬಿಡುಗಡೆ ಎಂದು?
»ಅಂಗಡಿಯಲ್ಲಿ ದೊರಕಿದ ಪವಾಡ...
»ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri