ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ

ಮಂಡ್ಯ, ಆ.21: ಕನ್ನಡ ಸಾಹಿತ್ಯದ ಉತ್ತಮ ಕೃತಿಗಳ ಜೊತೆ ಯುವ ಸಾಹಿತಿಗಳು ಅನುಸಂಧಾನಗೊಂಡು ಬದುಕಿನ ಅನುಭವಗಳನ್ನು ತೀವ್ರವಾಗಿ ಸಂವೇದಿಸಿ ಕಾವ್ಯರಚನೆ ಮಾಡಲು ಮುಂದಾಗಬೇಕು ಎಂದು ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ.ಸಿ.ಪಿ. ಕೃಷ್ಣಕುಮಾರ್ ಸಲಹೆ ನೀಡಿದ್ದಾರೆ.

ಜಿಲ್ಲಾ ಯುವ ಬರಹಗಾರರ ಬಳಗ ಹಾಗೂ ಶ್ರೀರಂಗಪಟ್ಟಣ ತಾಲೂಕು ಯುವ ಬರಹಗಾರರ ಬಳಗದ ವತಿ ಯಿಂದ ಶ್ರೀರಂಗಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗ ಣದಲ್ಲಿ ನಡೆದ ‘ಕಾವ್ಯ ರಚನೆ ಒಂದು ಚಿಂತನೆ’ ಎಂಬ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಪಾರ ಅನುಭವ ಮತ್ತು ಶಕ್ತ ಭಾವನೆ ಇರುವ ಕಾವ್ಯಕ್ಕೆ ಸಹೃದಯ ಓದುಗರನ್ನು ವಶಪಡಿಸಿಕೊಳ್ಳುವ ಗುಣ ಇದೆ. ಆದ್ದರಿಂದ ಯುವಕವಿಗಳು ಉತ್ಕ ಟತೆ, ತೀವ್ರತೆ ಹಾಗೂ ಸಾಂಧ್ರವಾದ ಭಾವಾರ್ಥವುಳ್ಳ ಕತೆಗಳ ಮೂಲಕ ಓದು ಗರ ಭಾವಕೋಶವನ್ನು ಶ್ರೀಮಂತಗೊಳಿ ಸಬೇಕು ಎಂದು ಅವರು ಹೇಳಿದರು.

ಕವಿಗೆ ಒಳಗಣ್ಣು ಇರುವುದು ಅವಶ್ಯ. ಆಗ ಈ ಒಳಗಣ್ಣಿಗೆ ಹೊಳೆದುದನ್ನು ಸಮರ್ಥವಾಗಿ ನಿರೂಪಿಸಬಹುದು. ಜೊತೆಗೆ ಬದುಕಿನ ಜೀವಾಳ ಮತ್ತು ಅಂತರಾಳವನ್ನು ಕಾವ್ಯದ ಮೂಲಕ ಮೊಗೆದುಕೊಡಲು ಸಾಧ್ಯವಾಗುತ್ತದೆ. ಇದಕ್ಕೆ ಕವಿ ನಿರಂತರ ಕಾವ್ಯದ ಅಭ್ಯಾಸ ಮತ್ತು ಓದಿಗೆ ತನ್ನನ್ನು ತೊಡಗಿಸಿಕೊ ಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಜ್ಞಾನ ಭಾವವಾಗಿ ಮಾರ್ಪಟ್ಟಾಗ ಶ್ರೇಷ್ಠ ಕಾವ್ಯ ಹುಟ್ಟುತ್ತದೆ. ಆದ್ದರಿಂದ ಕವಿಗಳಿಗೆ ಎಲ್ಲ ವಿಷಯಗಳ ಪರಿಜ್ಞಾನ ಇರಬೇಕು. ರೂಪಕ, ಪ್ರತಿಮೆ, ಅಲಂಕಾ ರಗಳನ್ನು ಬಳಸಿ ಉತ್ತಮ ವಸ್ತುವನ್ನು ಕಾವ್ಯವಾಗಿಸಬೇಕು. ಇದಕ್ಕಾಗಿ ಕವಿ ಪ್ರತಿಭಾಶಾಲಿಯಾಗಿ ಬೆಳೆಯ ಬೇಕಾ ಗಿದೆ. ಹೊಸತನ್ನು ಸೃಷ್ಟಿಸುವ ಶಕ್ತಿ ಇರುವ ಕಾವ್ಯದ ಕರ್ತೃವಾದ ಕವಿಗೆ ಸಹಜ ಪ್ರತಿಭೆ ಇರುವುದು ಅವಶ್ಯ ಎಂದು ಸಿಪಿಕೆ ವಿಶ್ಲೇಷಿಸಿದರು.

ಇಂದು ಸಾಹಿತ್ಯದಲ್ಲೂ ರಾಜಕಾರಣ ಶುರುವಾಗಿದ್ದು, ವಿಮರ್ಶಕರು ಉತ್ತಮ ಕೃತಿಗಳನ್ನು ಗುರುತಿಸುವ ಜವಾಬ್ದಾರಿ ಯನ್ನು ತೋರದೆ ಗುಂಪುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ವಿಷಾದಿಸಿದ ಅವರು, ಇದು ಸಾಹಿತ್ಯದ ಬೆಳೆವಣಿಗೆಗೆ ಪೂರಕವಲ್ಲ. ಉತ್ತಮ ವಿಮರ್ಶಕರು ಹುಟ್ಟಿ ಬರುವುದಕ್ಕೆ ಇದು ಸಕಾಲ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ.ಮಳಲಿ ವಸಂತ ಕುಮಾರ್ ಮಾತನಾಡಿ, ರಮ ಣೀಯವಾದ ಅರ್ಥವನ್ನು ಪ್ರತಿಪಾದಿಸುವ ಕಾವ್ಯ ಯಾವತ್ತಿಗೂ ಸ್ಥಾವರವಾಗಿ ಉಳಿಯುವುದಿಲ್ಲ. ಅದು ತನ್ನ ಜಂಗಮಶೀಲ ಗುಣದಿಂದ ಓದುಗರನ್ನು ಸೆಳೆಯಬಲ್ಲದು. ಆದ್ದರಿಂದ ಕಾವ್ಯಕ್ಕೆ ಚಲನಶೀಲತೆಯನ್ನು ತುಂಬುವುದು ಕವಿಯ ಆದ್ಯ ಕರ್ತವ್ಯ ಎಂದು ನುಡಿದರು.

ವಿಶ್ವವಿದ್ಯಾನಿಲಯ, ಅಕಾಡಮಿ, ಸಾಹಿತ್ಯ ಪರಿಷತ್‌ನಂತಹ ಸಂಸ್ಥೆಗಳು ಮಾಡಬೇಕಾದ ಸಂಸ್ಕೃತಿ ಕೆಲಸವನ್ನು ಯುವ ಕವಿ ಟಿ.ಸತೀಶ್ ಜವರೇ ಗೌಡರ ನೇತೃತ್ವದ ಯುವ ಬರಹಗಾರರ ಬಳಗ ಕ್ರಿಯಾ ಶೀಲತೆಯಿಂದ ಅತ್ಯಂತ ಸಮರ್ಥವಾಗಿ ಮಾಡುತ್ತಿದೆ. ಇದು ಇತರ ಸಂಘ ಸಂಸ್ಥೆಗಳಿಗೆ ಮಾದರಿ ಯಾಗುವಂತಹ ಸೃಜನಶೀಲ ಕಾರ್ಯ ಎಂದವರು ಶ್ಲಾಘಿಸಿದರು.

ಗಾಂಧಿವಾದಿ ಡಾ.ಬಿ. ಸುಜಯ ಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಜಗ ದೀಶ್ ಸಮಾರಂಭದಲ್ಲಿ ಮಾತ ನಾಡಿದರು. ಜಿಲ್ಲಾ ಯುವಬರಹಗಾರರ ಅಧ್ಯಕ್ಷ ಟಿ.ಸತೀಶ್ ಜವರೇಗೌಡ, ತಾಲೂಕು ಅಧ್ಯಕ್ಷ ಅಪ್ಪಾಜಿ ಕೆ.ಶೆಟ್ಟಹಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-22

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಕನ್ನಡಕ್ಕೆ ಎಂದೂ ಸಾವಿಲ್ಲ: ಡಾ.ಹನುಮಂತಯ್ಯ ಅಭಿಮತ
» ಸಮಸ್ಯೆಯ ಗಂಟುಗಳು...
»ಗಂಗಾವತಿ: ಬಸ್ ನಿಲ್ದಾಣ ಗಳಲ್ಲಿ ಗೌರವಾರ್ಥವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅನಾವರಣ
»ಪಳಕಳ ಸೀತಾರಾಮ ಭಟ್ಟರಿಗೆ ಬಾಲ ಸಾಹಿತ್ಯ ಪುರಸ್ಕಾರ
»ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ: ಸಿದ್ದಣ್ಣ ಲಂಗೋಟಿ
»ಜಗದ, ಯುಗದ ಮಹಾಕವಿ ಕುವೆಂಪು: ದೇಜಗೌ
»ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕೂಗಿದರೂ”ದ್ವನಿ ಕೇಳಲಿಲ್ಲವೇ’ ನೃತ್ಯ ರೂಪಕ ಪ್ರದರ್ಶನ
»ನಿಘಂಟು ಬ್ರಹ್ಮ ಪ್ರೊ. ಜೀವಿಗೆ ಶತಕದ ಸಂಭ್ರಮ | ಸಂತನಂತೆ ಬದುಕು ಎಂಬ ತಂದೆ ಮಾತಿನಂತೆ ಸರಳ ಮಾರ್ಗದಲ್ಲೇ ಬದುಕಿದ್ದೇನೆ: ಪ್ರೊ. ಜಿ. ವೆಂಕಟಸುಬ್ಬಯ್ಯ
»ಕಾವ್ಯದಲ್ಲಿ ಬದುಕಿನ ಸಂವೇದನೆಯಿರಲಿ: ಸಿಪಿಕೆ
»ಬಾಬು ಕುಡ್ತಡ್ಕರಿಗೆ ಶೇಣಿ ಪ್ರಶಸ್ತಿ ಪ್ರದಾನ: ಯಕ್ಷಗಾನ ಶೈಕ್ಷಣಿಕ ಅಧ್ಯಯನ ಪಠ್ಯವಾಗಲಿ: ಡಾ| ಆಳ್ವ
»ಓರೆನೋಟ...
»ಮಾಲಿನಿ ಭಟ್ ಅವರ ಕವನ : ಅಪ್ಪಾ ನಿನ್ನ ಬರುವಿಕೆಯಲ್ಲಿ ಮತ್ತು ಅಮ್ಮ
»ಅಮೀನಗಡದ ’ರಾಗ ಕಲಾ ವೈಭವ ಸಾಂಸ್ಕೃತಿಕ ಪ್ರತಿಷ್ಠಾನ’ ದಿಂದ ಕವನಗಳಿಗೆ ಆಹ್ವಾನ
»ಸಂಸ್ಕೃತಿ, ಸಾಹಿತ್ಯ ಬೆಳಗಿಸಿದ ಮಹಾನುಭಾವರ ಸ್ಮರಣೆ ಆದ್ಯ ಕರ್ತವ್ಯ: ಹಾಲಂಬಿ
»ನೀ ಜೊತೆಯಿರಲು-ಅನಿತಾ ನರೇಶ್ ಮಂಚಿಯವರ ಕವನ
»ವಿದೇಶದಲ್ಲಿ ಸಂಸ್ಕೃತಿ ಬಿತ್ತನೆ
»ಮಣಿಪಾಲದ ವಿದ್ಯಾರ್ಥಿಗೆ ರಾ.ಚಿತ್ರಕಲಾ ಪ್ರಶಸ್ತಿ
»ಡಾ.ಪುಣಿಂಚಿತ್ತಾಯರಿಗೆ ಮರಣೋತ್ತರ ‘ತುಳು ಸಾಹಿತ್ಯ ರತ್ನ ಪ್ರಶಸ್ತಿ’
»ಒಂದಿಷ್ಟು ಹನಿಗಳು... - ಗುರುನಾಥ ಬೋರಗಿ, ಬೆಂಗಳೂರು
»ನನ ಕಂದಾ ನೀ ನನ್ನ ಉಸಿರು... -ಸವಿತಾ ಇನಾಮದಾರ
»ಅಮ್ಮನ ಕೆನ್ನೆಯಲ್ಲಿ ರಮಝಾನ್ ದಿನಗಳು : ಬಿ.ಎಂ.ಬಶೀರ್,ಮಂಗಳೂರು
»ಕೇಳ ಬಾರದಿತ್ತೆ ಈ ಪ್ರಶ್ನೆ…-ಸುನೀತ ಮಂಜುನಾಥ್, ಮೈಸೂರು
»ದಿನೇಶ್ ಕುಕ್ಕುಜಡ್ಕ "ಪಂಚ್"
»ಮುಕ್ಕಾಲು ಪಟ್ಟಣದೊಳಗೆ ಕಾಲು ಗದ್ದೆಗೆ ಬೇಕು : -ಈಶ್ವರ ಕಿರಣ ಭಟ್,ಕಾಸರಗೋಡು
»ಬ್ರಹ್ಮಾಂಡವೆಲ್ಲಾ ಅಲೆದ ಮನಕ್ಕೆ ಒಂದು ಹನಿ ಅಮೃತ: ಪ್ರವೀಣ್ ಕುಲಕರ್ಣಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri