ಶುಕ್ರವಾರ, 15-11-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಎಸ್‌ಕೆಡಿಬಿ‌ಇ ಸೊಸೈಟಿಯ ಇ ಲರ್ನಿಂಗ್ ಸೆಂಟರ್ ಉದ್ಘಾಟನೆ

ಉಡುಪಿ: ಸೆ. 2. ಉಡುಪಿ ದ. ಕ. ಕಾಸರಗೋಡು ದ್ರಾವಿಡ ಬ್ರಾಹ್ಮಣ ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ಇಲ್ಲಿನ ಅದಮಾರು ಮಠ ಗೆಸ್ಟ್‌ಹೌಸ್‌ನ ಸೊಸೈಟಿ  ಕಚೇರಿಯಲ್ಲಿ ಭಾನುವಾರ ಇ ಲರ್ನಿಂಗ್ ಸೆಂಟರ್ ಉದ್ಘಾಟಿಸಲಾಯಿತು.

ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬ್ರಾಹ್ಮಣ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ತಮ್ಮ ಗುರುಗಳಾದ ಶ್ರೀ ವಿಬುಧೇಶತೀರ್ಥ ಸ್ವಾಮೀಜಿ ಆರಂಭಿಸಿದ ಯೋಜನೆಯ ಫಲ ಅನೇಕು ಪಡೆದಿದ್ದಾರೆ. ವಿದ್ಯಾರ್ಥಿ ಜೀವನ ಸಂದರ್ಭದಲ್ಲಿ ಸಾಲ ರೂಪದಿಂದ ಪಡೆದ ವಿದ್ಯಾರ್ಥಿ ವೇತನವನ್ನು ಉದ್ಯೋಗಸ್ಥರಾದ ಬಳಿಕ ಮರಳಿಸಬೇಕೆಂಬ ನಿಯಮವನ್ನು ಅಂದೇ ಶ್ರೀಗಳು ನಿರೂಪಿಸಿರುವುದು, ಋಣಮುಕ್ತ ಜೀವನ ನಮ್ಮದಾಗಬೇಕು ಎಂಬ ಉದ್ದೇಶದಿಂದ ಹಾಗೂ ಸಂಸ್ಥೆ ನಿರಾತಂಕವಾಗಿ ಮುಂದುವರಿದು, ಸಮಾಜದ ವಿದ್ಯಾರ್ಥಿಗಳಿಗೆ ಎಲ್ಲಾ ಕಾಲಕ್ಕೂ ಸಹಕಾರಿಯಾಗಬೇಕೆಂಬ ಆಶಯದಿಂದ ಎಂದರು.

ವಿದ್ಯಾರ್ಥಿಗಳು ತನ್ನ ಓರಗೆ ವಿದ್ಯಾರ್ಥಿಗಳು ಅಭ್ಯಸಿಸುವ ಕೋರ್ಸ್ ಕಲಿಯುವುದನ್ನು ಬಿಟ್ಟು, ತನ್ನ ಆಸಕ್ತಿ ಹಾಗೂ ಸಾಮಥ್ಯಕ್ಕನುಗುಣವಾದ ಶಿಕ್ಷಣ ಪಡೆಯಬೇಕು. ಆಧುನಿಕ ಶಿಕ್ಷಣ ಪಡೆಯುವುದರ ಜೊತಡೆಗೆ ನಮ್ಮ ಸಾಂಪ್ರದಾಯಿಕ ಪದ್ಧತಿಯಾದ ಪುರುಷರು ಸಂಧ್ಯಾವಂದನೆ ಹಾಗೂ ಸ್ತ್ರೀಯರು ಶ್ಲೋಕ ಪಠಣದಂತಹ ಸಂಪ್ರದಾಯ, ಸಂಸ್ಕೃತಿ ಉಳಿಸಿಕೊಳ್ಳಬೇಕು ಎಂದು ಹಿತ ನುಡಿದರು. ಬ್ರಾಹ್ಮಣ ವರ್ಗ, ಇತರ ಸಮಾಜದವರೆದುರು ತಲೆ ತಗ್ಗಿಸುವಂತಾಗದೇ, ಆತ್ಮಸ್ಥೈರ್‍ಯದಿಂದ ಮುನ್ನಡೆಯಬೇಕು ಎಂದು ಸ್ವಾಮೀಜಿ ಆಶಿಸಿದರು.

ಸೆಂಟರ್ ಉದ್ಘಾಟಿಸಿದ ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಪಿ. ಜಯರಾಮ ಭಟ್, ವಿದ್ಯಾರ್ಥಿಗಳ ಭವಿಷ್ಯದ ಕಾಳಜಿಯಿಂದ ಹಮ್ಮಿಕೊಂಡಿರುವ ಸೊಸೈಟಿ ಕಾರ್‍ಯ ಶ್ಲಾಘಿಸಿದರು. ಬ್ಯಾಂಕ್ ವತಿಯಿಂದ ೨ ಲಕ್ಷ ರೂ. ವೆಚ್ಚದ ಕಂಪ್ಯೂಟರ್ ಇತ್ಯಾದಿ ಸಲಕರಣೆ ನೀಡಿರುವುದನ್ನು ಸ್ಮರಿಸಿದರು. ಇನ್ನಷ್ಟು ಸಹಕಾರ ನೀಡುವ ಭರವಸೆ ನೀಡಿದರು. ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಖಾಸಗಿ ರಂಗದ ಅಗ್ರಣಿ ಬ್ಯಾಂಕ್ ಆಗಿರುವ ಕರ್ಣಾಟಕ ಬ್ಯಾಂಕ್, ಬ್ಯಾಂಕ್ ಅಧ್ಯಕ್ಷರಾಗಿದ್ದ ಅನಂತಕೃಷ್ಣ ಅವರ ನೇತೃತ್ವದಲ್ಲಿ ಕಂಪ್ಯೂಟರೀಕೃತವಾಗಿದ್ದು, ಈ ವ್ಯವಸ್ಥೆ ಅಳವಡಿಸಿಕೊಂಡ ಪ್ರಥಮ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸದ್ಯದಲ್ಲಿಯೇ ಮೊಬೈಲ್ ಬ್ಯಾಂಕಿಂಗ್ ವ್ಯವಹಾರವನ್ನು ಗ್ರಾಹಕರಿಗೆ ಪರಿಚಯಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನೀಡಲಾದ ವಿವಿಧ ವಿದ್ಯಾರ್ಥಿವೇತನವನ್ನು ಓ‌ಎನ್‌ಜಿಸಿ ಆಡಳಿತ ನಿರ್ದೇಶಕ ಪಿ. ಪ್ರಭಾಕರ ಉಪಾಧ್ಯಾಯ ವಿತರಿಸಿದರು. ಇ ಲರ್ನಿಂಗ್ ಪಠ್ಯ ಕುರಿತು ಸಂಪನ್ಮೂಲವ್ಯಕ್ತಿಗಳಾದ ಎಂಐಟಿ ವಿಶ್ರಾಂತ ಪ್ರಾಧ್ಯಾಪಕ ಕೆ. ಪಿ. ರಾವ್, ನಿಟ್ಟೆ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್‍ಯ ಡಾ. ನಿರಂಜನ ಚಿಪ್ಲೂಣ್‌ಕರ್, ಶ್ರೀಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಪ್ರಾಚಾರ್‍ಯ ಡಾ. ಮೋಹನದಾಸ ಭಟ್, ಎಂಸಿ‌ಎಸ್ ಮಣಿಪಾಲ ನಿರ್ದೇಶಕ ಹರಿಶ್ಚಂದ್ರ ಹೆಬ್ಬಾರ್, ಮಣಿಪಾಲ ಕೆ‌ಎಂಸಿ ಪ್ರಾಧ್ಯಾಪಕ ಡಾ. ರವಿರಾಜ ಆಚಾರ್‍ಯ ಮಾಹಿತಿ ನೀಡಿದರು.

ಸೊಸೈಟಿ ಉಪಾಧ್ಯಕ್ಷರಾದ ಪ್ರೊ. ರಾಧಾಕೃಷ್ಣ ಆಚಾರ್‍ಯ ಸ್ವಾಗತಿಸಿ, ಯು. ಕೆ. ರಾಘವೇಂದ್ರ ರಾವ್ ವಂದಿಸಿದರು. ಕಾರ್‍ಯದರ್ಶಿ ರಾಮಚಂದ್ರ ಉಪಾಧ್ಯಾಯ ಪ್ರಸ್ತಾವನೆಗೈದರು. ಸಹಕಾರ್‍ಯದರ್ಶಿ ಕೆ. ಎಸ್. ಸುಬ್ರಹ್ಮಣ್ಯ ಬಾಸ್ರಿ ನಿರೂಪಿಸಿದರು. ಬೈಕಾಡಿ ಶ್ರೀನಿವಾಸ ರಾವ್ ಮತ್ತು ಕಿಶೋರ್ ಬಾಗಲೋಡಿ ಪರಿಚಯಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-09-03

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri