ಶುಕ್ರವಾರ, 15-11-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಪಳ್ಳಿಗದ್ದೆ ಕಾಡಿನಲ್ಲಿ ನಕ್ಸಲ್‌ಗೆ ತೀವ್ರ ಶೋಧ: 5 ತಂಡಗಳಿಂದ ಕಾರ್ಯಾಚರಣೆ

ಸುಬ್ರಹ್ಮಣ್ಯ: ಕುಲ್ಕುಂದ ಪರಿಸರದ ಪಳ್ಳಿಗದ್ದೆ ಕಾಡಿನಲ್ಲಿ ರವಿವಾರ ಮುಸ್ಸಂಜೆ ಪೊಲೀಸರತ್ತ ಗುಂಡು ಹಾರಿಸಿ ಪರಾರಿಯಾಗಿರುವ ನಕ್ಸಲರ ಪತ್ತೆಗಾಗಿ ನಕ್ಸಲ್‌ ನಿಗ್ರಹ ಪಡೆ (ಎ‌ಎನ್‌ಎಫ್) ಬಿರುಸಿನ ಶೋಧ ಕಾರ್ಯ ಆರಂಭಿಸಿದೆ. ತಲಾ 15 ಸಿಬಂದಿ ಇರುವ 5 ತಂಡಗಳು ಕಾಡಿನಲ್ಲಿ ಶೋಧ ಕಾರ್ಯ ನಿರತವಾಗಿವೆ.


ನಕ್ಸಲ್‌ ನಿಗ್ರಹ ಪಡೆಯ ಐಜಿಪಿ ಆಲೋಕ್‌ ಕುಮಾರ್‌ ಅವರು ಸೋಮವಾರ ಇಲ್ಲಿಗಾಗಮಿಸಿ ಮಾರ್ಗದರ್ಶನ ನೀಡಿದ್ದಾರೆ.

ಕಳೆದ ಮೂರ‍್ನಾಲ್ಕು ದಿನಗಳಿಂದ ಕುಲ್ಕುಂದ ಪರಿಸರದಲ್ಲಿ ಕಾರ್ಯಾಚರಿಸುತ್ತಿದ್ದ ನಕ್ಸಲರ ತಂಡವನ್ನು ಮಟ್ಟ ಹಾಕಲು ನಕ್ಸಲ್‌ ನಿಗ್ರಹ ಪಡೆಯು ರವಿವಾರ ಆಗಮಿಸಿ ತೀವ್ರ ಕಾರ್ಯಾಚರಣೆ ಆರಂಭಿಸಿದೆ. ನಕ್ಸಲರು ಭೇಟಿ ನೀಡಿರುವ ಮನೆಗಳ ಸಮೀಪದ ಕಾಡಿನಲ್ಲಿ ರವಿವಾರ ಸಂಜೆ ವೇಳೆಗೆ ಐದಾರು ಮಂದಿ ಇದ್ದ ನಕ್ಸಲ ತಂಡ ಎ‌ಎನ್‌ಎಫ್ ಪಡೆಗೆ ಎದುರಾಗಿದ್ದು, ಪೊಲೀಸರತ್ತ ಗುಂಡು ಹಾರಿಸಿದ್ದಲ್ಲದೆ ಎರಡು ಗ್ರೆನೇಡ್‌ಗಳನ್ನು ಎಸೆದು ಹಳ್ಳಕ್ಕೆ ಇಳಿದು ಕಾಡಿನಲ್ಲಿ ಪರಾರಿಯಾಯಿತು ಎಂದು ನಕ್ಸಲ್‌ ನಿಗ್ರಹ ಪಡೆಯ ಐಜಿಪಿ ಆಲೋಕ್‌ ಕುಮಾರ್‌ ರವಿವಾರದ ಕಾರ್ಯಾಚರಣೆ ಬಗ್ಗೆ ಸೋಮವಾರ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.


ನಿಖರ ಮಾಹಿತಿ

ಕುಲ್ಕುಂದ ಪರಿಸರದಲ್ಲಿ ನಕ್ಸಲರ ಸಂಚಲನದ ಬಗ್ಗೆ ನಕ್ಸಲ್‌ ನಿಗ್ರಹ ಪಡೆಗೆ ಖಚಿತ ಮಾಹಿತಿ ಲಭಿಸಿತ್ತು. ಮಾಧ್ಯಮದವರೂ ಸಕಾಲದಲ್ಲಿ ಈ ಬಗ್ಗೆ ಮಾಹಿತಿ ಒದಗಿಸಿದ್ದರು ಎಂದು ಆಲೋಕ್‌ ಕುಮಾರ್‌ ಹೇಳಿದರು.

ಪೊಲೀಸರು ಮತ್ತು ನಕ್ಸಲರ ನಡುವೆ 60ಕ್ಕೂ ಹೆಚ್ಚು ಸುತ್ತು ಗುಂಡು ಹಾರಾಟ ನಡೆದಿದೆ. ಘಟನೆಯಲ್ಲಿ ನಕ್ಸಲ್‌ ತಂಡದ ಯಾರಿಗೂ ಗಾಯಗಳಾದ ಕುರುಹುಗಳು ಈವರೆಗೆ ಲಭಿಸಿಲ್ಲ. ಎ‌ಎನ್‌ಎಫ್ ಪಡೆಯು ಅತ್ಯಾಧುನಿಕ ಶಸ್ತ್ರಗಳನ್ನು ಹೊಂದಿದ್ದು, ಸೋಮವಾರದಿಂದ ಎ‌ಎನ್‌ಎಫ್ನ ಡೆಪ್ಯೂಟಿ ಕಮಾಂಡರ್‌ ಎಸ್‌.ಪಿ. ವಾಸುದೇವ ಮೂರ್ತಿ ಅವರ ಹಿರಿತನದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಒಂದು ತಂಡವು ಶಾಶ್ವತವಾಗಿ ಈ ಪ್ರದೇಶದಲ್ಲಿ ಕ್ಯಾಂಪ್‌ ಮಾಡಲಿದೆ ಎಂದರು.


ಹೆದರಿಕೆ ಬೇಡ

ನಕ್ಸಲರು ದಟ್ಟಾರಣ್ಯದಲ್ಲಿ ಟೆಂಟ್‌ ಹಾಕಿ ತಮ್ಮ ಚಟುವಟಿಕೆ ನಡೆಸುತ್ತಾರೆ. ಸಾಮಾನ್ಯವಾಗಿ ಒಂದು ಟೆಂಟ್‌ನಲ್ಲಿ ಏಳೆಂಟು ಮಂದಿ ಇರುತ್ತಾರೆ. ಈ ಹಿಂದೆ ಶೃಂಗೇರಿಯಲ್ಲಿ ದಾಳಿ ನಡೆಸಿದಾಗಲೂ ಎಂಟು ಮಂದಿ ನಕ್ಸಲರು ಇದ್ದರು. ಇಲ್ಲೂ ಕಾಡಿನಲ್ಲಿ ಐದರಿಂದ ಎಂಟು ಮಂದಿ ನಕ್ಸಲರಿರುವ ಸಾಧ್ಯತೆಗಳಿವೆ. ಈ ಹಿಂದೆ ಗುಂಡ್ಯ, ಕೊಂಬಾರು, ಚೇರು, ಭಾಗ್ಯ ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರೂ ಜನ ಭಯದಿಂದ ಯಾರಿಗೂ ಮಾಹಿತಿ ನೀಡಿರಲಿಲ್ಲ. ನಕ್ಸಲರು ಬಂದ ಮಾಹಿತಿಯನ್ನು ಯಾರಾದರೂ ನೀಡಿದರೆ ನಮ್ಮ ಪಡೆ ಜನರಿಗೆ ತೊಂದರೆಯಾಗದ ರೀತಿಯಲ್ಲಿ ತತ್‌ಕ್ಷಣ ಸ್ಪಂದಿಸುವುದು ಎಂದು ಆಲೋಕ್‌ ಭರವಸೆ ನೀಡಿದರು.

ಕಾರ್ಯಾಚರಣೆ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದಿರುವ ಕುರಿತು ಪ್ರಶ್ನಿಸಿದಾಗ, ಕಾರ್ಯಾಚರಣೆ ಮಾತ್ರ ನಮ್ಮ ಕೆಲಸ; ಮಾಹಿತಿ ಕಲೆ ಹಾಕಿ ಸ್ಪಂದಿಸುವುದು ಅವರ ಕೆಲಸ ಎಂದರು.

ನಕ್ಸಲ್‌ ಬಾಧಿತ ಕುಲ್ಕುಂದದ ಪಳ್ಳಿಗದ್ದೆ ಪರಿಸರಕ್ಕೆ ಕೇಂದ್ರ ಹಾಗೂ ರಾಜ್ಯದ ಗುಪ್ತಚರ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜನಪ್ರತಿನಿಧಿಗಳಿಗೆ ತರಾಟೆ

ಸುಬ್ರಹ್ಮಣ್ಯದ ಜನಪ್ರತಿನಿಧಿಗಳ ತಂಡವು ಸ್ಥಳ ಪರಿಶೀಲನೆಗಾಗಿ ಅಲ್ಲಿಗೆ ತೆರಳಿದಾಗ, ಕುಲ್ಕುಂದ ಪರಿಸರದಲ್ಲಿ ನಕ್ಸಲರ ಚಲನವಲನ ಆರಂಭವಾಗಿ ಹಲವು ದಿನಗಳು ಕಳೆದರೂ ವಿಳಂಬವಾಗಿ ಬಂದುದೇಕೆ? ಇಲ್ಲಿ ಸರಿಯಾದ ರಸ್ತೆ ಇಲ್ಲ, ದಾರಿದೀಪಗಳು ಉರಿಯುತ್ತಿಲ್ಲ ಎಂದು ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಭರವಸೆ ನೀಡಿ ಜನಪ್ರತಿನಿಧಿಗಳು ಹಿಂದಿರುಗಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-04

Tell a Friend
ಇತರ ಸಂಭಂದಪಟ್ಟ ವರದಿಗಳು
»ಸುಬ್ರಹ್ಮಣ್ಯ ಬಳಿ ನಕ್ಸಲರು‌ಎ‌ಎನ್‌ಎಫ್ ಗುಂಡಿನ ಚಕಮಕಿ: ನಕ್ಸಲರು ಪರಾರಿ

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri