ರೇಷ್ಮೆ ಬೆಳೆಗಾರರ ಸಮಸ್ಯೆ ಬಗೆಹರಿಸಲಾಗುವುದು: ರಾಜ್ಯದ ಸಂಸದರ ನಿಯೋಗಕ್ಕೆ ಚಿದು ಭರವಸೆ |
ಪ್ರಕಟಿಸಿದ ದಿನಾಂಕ : 2012-09-04
ನವದೆಹಲಿ: ರಾಜ್ಯದ ರೇಷ್ಮೆ ಬೆಳೆಗಾರರ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಮಂಗಳವಾರ ತಮ್ಮನ್ನು ಭೇಟಿ ಮಾಡಿದ ರಾಜ್ಯದ ಸಂಸದರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಕೇಂದ್ರ ಸಚಿವರಾಗಿರುವ ಎಂ.ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕೆ.ಎಚ್ ಮುನಿಯಪ್ಪ ಸೇರಿದಂತೆ ರಾಜ್ಯದ ಹಲವು ಸಂಸದರು ಇಂದು ಚಿದಂಬರಂ ಅವರನ್ನು ಭೇಟಿ ಮಾಡಿ, ಬರ ಪರಿಹಾರ, ಅಡಿಕೆ, ರೇಷ್ಮೆ ಹಾಗೂ ಕಾಫಿ ಬೆಳೆಗಾರರ ಸಮಸ್ಯೆ ಸೇರಿದಂತೆ ಆರು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದರು.
ಬರ ಪರಿಹಾರ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ದೂರುತ್ತಿದೆ. ಹೀಗಾಗಿ ಬರ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಸಂಸದರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಚಿದು, ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಹಣದಲ್ಲಿ ಶೇ.೭೫ರಷ್ಟು ಹಣವನ್ನು ಕೇಂದ್ರ ಯೋಜನಾ ಆಯೋಗದಿಂದ ಬಿಡುಗಡೆ ಮಾಡಲಾಗಿದೆ. ಮೊದಲ ಆ ಹಣವನ್ನು ರಾಜ್ಯ ಖರ್ಚು ಮಾಡಲಿ. ನಂತರ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ವರದಿಯ ವಿವರಗಳು |
 |
ಕೃಪೆ : ಕನ್ನಡಪ್ರಭ ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-04
|
|
|