ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ವಿದ್ಯಾರ್ಥಿಗಳಿಂದ ಜನಾಭಿಪ್ರಾಯ ರೂಪಣೆಯಾಗಲಿ; ಸಚಿವ ಕೋಟ

ಉಡುಪಿ:ವಿದ್ಯಾರ್ಥಿಗಳು ತಮ್ಮ ಮಿತಿಯೊಳಗೆ ಜನಾಭಿಪ್ರಾಯ ರೂಪಿಸುವುದು ತಪ್ಪಲ್ಲ. ಆದರೆ ಸ್ವೇಚ್ಛಾಚಾರದ ನಡೆ ಸಲ್ಲದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಸೆ.3ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರಮಂಟಪದಲ್ಲಿ ನಡೆದ 'ಶಿಕ್ಷಕರೊಂದಿಗಿನ ಮುಕ್ತ ಸಂವಾದ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

'ವಿದ್ಯಾರ್ಥಿ ಸಂಘಟನೆಗಳು ಯಾವುದಾದರೊಂದು ರಾಜಕೀಯ ಪಕ್ಷದ ನೆರಳಲ್ಲಿದ್ದು ತರಗತಿ ಬಹಿಷ್ಕಾರ,ಮುಷ್ಕರದಲ್ಲಿ ತೊಡಗಿದರೆ ಪಾಠ, ತರಗತಿಗಳು ನಡೆಯುವುದು ಹೇಗೆ?'ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,'ಕಾಲೇಜು ವಿದ್ಯಾರ್ಥಿಗಳಿಗೂ ಪರಿಶುದ್ಧ ರಾಜಕಾರಣ ತಿಳಿದು ಅವರು ಮುಂದೆ ಜನನಾಯಕರಾಗಬೇಕೆಂಬ ಉದ್ದೇಶದ ಜತೆಗೆ ರಾಜಕೀಯ ಪಕ್ಷಗಳ ಬಲವರ್ಧನೆ ಕೂಡ ಇಂತಹ ವಿದ್ಯಾರ್ಥಿ ಸಂಘಟನೆಗಳನ್ನು ಸಿದ್ಧಗೊಳಿಸುವುದರ ಹಿಂದಿನ ಉದ್ದೇಶ.ಅಂದು ಜಯಪ್ರಕಾಶ ನಾರಾಯಣ ಅವರು ತುರ್ತುಪರಿಸ್ಥಿತಿ ವಿರುದ್ಧ ಬೀದಿಗಿಳಿದಾಗ ಅವರಿಗೆ ವಿದ್ಯಾರ್ಥಿ ಸಮುದಾಯ ಬೆಂಬಲವಾಗಿ ನಿಂತಿತ್ತು.ಜನಾಭಿಪ್ರಾಯ ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಇದೆಯಾದರೂ ಅದು ಸ್ವೇಚ್ಛೆಯ ನಡೆಯಾಗಬಾರದು' ಎಂದು ಹೇಳಿದರು.

ಪರಿಸರ ಮಾಲಿನ್ಯ ತಡೆಗೆ ಕಟ್ಟುನಿಟ್ಟಿನ ಆದೇಶ

ಯುಪಿಸಿಎಲ್‌ ಸಮಸ್ಯೆಯ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು,'ವಿದ್ಯುತ್‌ ಬೇಕು.ಆದರೆ ಪರಿಸರ ಮಾಲಿನ್ಯವಾಗದಂತೆ,ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೂಡ ಅವಶ್ಯ.ಈ ಹಿನ್ನೆಲೆಯಲ್ಲಿ ತೀವ್ರ ತಪಾಸಣೆಗೆ ಯುಪಿಸಿಎಲ್‌ಗೆ ಈಗಾಗಲೇ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಆದರೆ ಅದು ಪೂರ್ಣ ಯಶಸ್ವಿಯಾಗಿಲ್ಲ. ಜನಜೀವನಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದರು.

ಕೆಲವು ಮಂದಿ ಹೆತ್ತವರ ಆಂಗ್ಲ ವ್ಯಾಮೋಹದಿಂದಾಗಿ ಸರಕಾರಿ ಶಾಲೆಗಳ ಮೇಲೆ ಹೊಡೆತ ಬಿದ್ದಿದೆ.ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿರುವ ಸರಕಾರವು ಶಾಲೆಯಲ್ಲಿ ಪ್ರತಿಯೊಂದು ಸೌಕರ್ಯಗಳನ್ನು ಕೂಡ ಒದಗಿಸಿಕೊಡುತ್ತಿದೆ.ಶಿಕ್ಷಕರ ನೇಮಕ ಕೂಡ ಅರ್ಹತೆ ಆಧಾರದಲ್ಲೇ ನಡೆಯುತ್ತಿದೆ ಎಂದರು.ಮೂಲಸೌಕರ್ಯ ಅನುಷ್ಠಾನದಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ,ದ.ಕ ಜಿಲ್ಲೆಗಳು ಉತ್ತಮವಾಗಿದೆಯಾದರೂ ನಂಜುಂಡಪ್ಪ ವರದಿಯಿಂದಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಈಗಾಗಲೇ ಸದನದಲ್ಲಿ ದನಿ ಎತ್ತಿದ್ದೇನೆ ಎಂದರು.

ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಪೈಕಿ ಎಲ್ಲಾ ಸಂಸ್ಥೆಗಳು ಕೂಡ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲ.ಕೆಲವೆಡೆ ಶೋಷಣೆಯಾಗುತ್ತಿದೆ. ಹಾಗಾಗಿ ಸರಕಾರಿ ಶಿಕ್ಷಣ ವ್ಯವಸ್ಥೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆಯಾದರೂ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೂ ಗಮನ ನೀಡಲಾಗುತ್ತಿದೆ.ಅನುದಾನಿತ ಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲು ಇರುವ ಅಡೆತಡೆಗಳ ಕುರಿತು ಉನ್ನತ ಶಿಕ್ಷಣ ಸಚಿವರ ಜತೆ ಚರ್ಚಿಸುತ್ತೇನೆ ಎಂದರು.

ಹಿರಿಯ ವಿದ್ವಾಂಸ ಡಾ|ಯು.ಪಿ.ಉಪಾಧ್ಯಾಯ,ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ|ವೆಂಕಟರಮಣ ಗೌಡ, ಪ.ಪೂ. ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಉಪನ್ಯಾಸಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-09-04

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri