ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಹೋಂ ಸ್ಟೇ ದಾಳಿ - ಯುವಕರ ಮೇಲೆ ನೈತಿಕ ಪೊಲೀಸರ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು,ಸೆಪ್ಟಂಬರ್.04:ಪಡೀಲ್ ಹೋಂ ಸ್ಟೇಯಲ್ಲಿ ಇತ್ತೀಚಿಗೆ ಯುವಕ- ಯುವತಿಯರ ಮೇಲೆ ನೈತಿಕ ಪೊಲೀಸರು  ನಡೆಸಿದ ದೌರ್ಜನ್ಯವನ್ನು ಖಂಡಿಸಿ, ಕರಾವಳಿ ಸೌಹಾರ್ದ ಸಂಘರ್ಷ ಸಮಿತಿಯ ವತಿಯಿಂದ ಜೆಡಿ(ಎಸ್), ಸಿಪಿಐ(ಎಂ) ಹಾಗೂ ಕಾಂಗ್ರೆಸ್ ಪಕ್ಷದ ಸಂಯುಕ್ತ ಅಶ್ರಯದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮೊದಲಿಗೆ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಕಾರರು ಬಳಿಕ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇಯಲ್ಲಿ ಬರ್ತ್ ಡೇ ಆಚರಿಸುತ್ತಿದ್ದ ಯುವಕ -ಯುವತಿಯರ ಮೇಲೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಡೀಲ್‌ನಲ್ಲಿ ಯುವತಿಯರ ಮೇಲೆ ಹಲ್ಲೆ ನಡೆಸಿದ ಪುಂಡರ ಮೇಲೆ ಗೂಂಡಾ ಕಾಯಿದೆಯಡಿಯಲ್ಲಿ ತತ್‌ಕ್ಷಣ ಮೊಕದ್ದಮೆ ಹೂಡಬೇಕು, ಕಳೆದ 7 ವರ್ಷಗಳಿಂದ ದ.ಕ.ಜಿಲ್ಲೆಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿಯಲ್ಲಿ ಭಾಗವಹಿಸಿದ ಎಲ್ಲಾ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು, ನೈತಿಕ ಪೊಲೀಸ್‌ಗಿರಿ ಇನ್ನೆಂದೂ ನಡೆಯದಂತೆ ಸರಕಾರ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಈ ಸಂದರ್ಭದಲ್ಲಿ  ಆಗ್ರಹಿಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ  ಸಮಿತಿ ಅಧ್ಯಕ್ಷ , ಶಾಸಕ ಬಿ. ರಮಾನಾಥ ರೈ ಅವರು, ನೈತಿಕ ಪೊಲೀಸ್‌ಗಿರಿ ದ.ಕ. ಜಿಲ್ಲೆಯ ಶಾಂತಿ, ಸೌಹಾರ್ದತೆಗೆ ತೀವ್ರತರವಾದ ದಕ್ಕೆಯುಂಟು ಮಾಡಿದೆ. ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಶಕ್ತಿಗಳನ್ನು ಬುಡಸಮೇತ ಕಿತ್ತೂಗೆಯುವ ಕಾಲ ಸನ್ನಿಹಿತವಾಗಿದ್ದು ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ ಈ ನಿಟ್ಟನಲ್ಲಿ ಕಾರ್ಯೋನುಮುಖವಾಗಲಿದೆ ಎಂದು  ಹೇಳಿದರು.

ಜಿಲ್ಲೆಯಲ್ಲಿ ಕೋಮುಸಂಘರ್ಷವನ್ನು ಉಂಟುಮಾಡುವ ಕೃತ್ಯಗಳು ನಿರಂತರವಾಗಿ ನಡೆದುಕೊಂಡು ಬರುತ್ತಿದ್ದು ಇದರ ಹಿಂದಿರುವ ಸೂತ್ರಧಾರಿಗಳ ವಿರುದ್ದ ಕಾನೂನು ಕ್ರಮಗಳು ಆಗುವ ಮೂಲಕ ಸಾಮಾಜಿಕ ಸೌಹಾರ್ದತೆಯನ್ನು ಕಾಯ್ದುಕೊಳ್ಳುವ ಕೆಲಸವಾಗಬೇಕಾಗಿದೆ ಎಂದರು.

ಉಪಾಧ್ಯಕ್ಷ , ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರು ಮಾತನಾಡಿ, ಪಡೀಲ್‌ನಲ್ಲಿ ಹುಟ್ಟು ಹಬ್ಬ ಆಚರಿಸುತ್ತಿದ್ದವರ ಮೇಲೆ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಪುಂಡರು ದಾಳಿ ನಡೆಸಿ ಹೀನಾಯ ಕೃತ್ಯಗಳನ್ನು ಎಸಗಿದ್ದಾರೆ. ಇಂತಹ ಕೃತ್ಯಗಳು ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದು ಇದನ್ನು ಎಲ್ಲರೂ ಖಂಡಿಸಬೇಕು ಎಂದರು.

ಸಮಿತಿ ಕಾರ್ಯದರ್ಶಿ ಬಿ. ಮಾಧವ ಪ್ರಸ್ತಾವನೆಗೈದರು.ಕಾರ್ಮಿಕ ಮುಖಂಡ ಪಿ. ಸಂಜೀವ, ಸಾಹಿತಿ, ಕಾರ್ಯದರ್ಶಿ ಚಂದ್ರಕಲಾ ನಂದಾವರ, ಜೆಡಿ ಎಸ್ ಮುಖಂಡ ಎಂ. ಜಿ. ಹೆಗಡೆ ಮುಂತಾದವರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಸಾಹಿತಿ ಸಾರಾ ಅಬೂಬಕ್ಕರ್‌, ಸಮಿತಿ ಉಪಾಧ್ಯಕ್ಷರಾದ ಕೆ.ಆರ್‌. ಶ್ರೀಯಾನ್‌, ಐವನ್‌ ಡಿಸೋಜ, ಕಾರ್ಯದರ್ಶಿಗಳಾದ ಪಿ.ವಿ.ಮೋಹನ್‌, ರೀಟಾ ನೊರೊನ್ನಾ, ಶಶಿರಾಜ ಶೆಟ್ಟಿ, ಎಚ್‌.ವಿ.ರಾವ್‌, ಸುಶೀಲ್‌ ನೊರೊನ್ನಾ ಉಪಸ್ಥಿತರಿದ್ದರು. ಕೋಶಾಧಿಕಾರಿ ಕೆ.ಯಾದವ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒಪ್ಪಿಸಲು ರೈ ಆಗ್ರಹ.

ಮಾರ್ನಿಂಗ್‌ ಮಿಸ್ಟ್‌ ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರ ಅನುಸರಿಸುತ್ತಿರುವ ಧೋರಣೆ ಸಂಶಯಗಳಿಗೆ ಎಡೆ ಮಾಡಿದೆ. ಒಟ್ಟು ಪ್ರಕರಣದ ಬಗ್ಗೆ ವಿಶ್ವಾಸ ಹುಟ್ಟಿಸುವ ತನಿಖೆ ಅಗತ್ಯವಿದೆ . ಈ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒಳಪಡಿಸಬೇಕು . ದಾಳಿಯ ಹಿಂದಿರುವ ಸೂತ್ರದಾರಿಗಳಿಗೆ ಶಿಕ್ಷೆಯಾಗುವ ಮೂಲಕ ಜಿಲ್ಲೆಯಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ರಕ್ಷಿಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸತೀಶ್ ಕಾಪಿಕಾಡ್
ಪ್ರಕಟಿಸಿದ ದಿನಾಂಕ : 2012-09-04

Tell a Friend

ಪ್ರತಿಸ್ಪಂದನ
ಪ್ರಶಾ೦ತ್ ಅಮೀನ್,, , ಮೂಡಬಿದ್ರೆ
2012-09-05
ಮಾನ್ಯರೇ,,,ಮೊದಲು ನಿಮ್ಮ ಹುಡುಗಿಯಾರನ್ನ ಅರ್ದಂಬರ್ದ ಉಡುಗೆ ಹಾಕಿ ಕೊಂಡು ರಸ್ತೆಯಾಲ್ಲಿ ಬರ್ಲಿಕೆ ಬಿಡಿ ನೋಡುವ, ಇದು ಶುದ್ದ ಹಿ೦ದು ರಾಷ್ತ್ರ ,,,,,ಇದು ಭರತ ದೇಶ ,ಇದು ಕೃಷ್ನ ,ರಾಮರು ಆಳಿದ ದೇಶ , ಈ ದೇಶಕ್ಕೆ ಮಾರಕ ಆಗಬೇಡಿ
Monappa, Hampanakatte
2012-09-05
ವಿಶ್ವಾಸ್ ಅವರೇ.. ಭಯೋತ್ಪಾದನೆಯಲ್ಲಿ ಸಿಕ್ಕಿ ಬಿದ್ದವರು ಮುಸ್ಲಿಂ ಉಗ್ರರು...ಅವರ ವಿರುದ್ಧ ಮಾತನಾಡಿದರೆ..ಅವರ ಓಟುಗಳು ಸಿಗಲಾರದು...ಮೊದಲೇ ಅವರಿಗೆ ಬರವು..ಕಡಿಮೆ..ಮಾರಾಯರೇ..ಅಷ್ಟೂ ಸಾಮಾನ್ಯ ಜ್ಞಾನ ಇಲ್ಲವೇ..?ನಿಮಗೆ..ಹೇ...ನಿಮಗೆ ಏನೂ ನಮ್ಮ ಕಷ್ಟ ನಮಗೆ ಗೊತ್ತು..
vishwas, dubai
2012-09-05
ಕರಾವಳಿ ಸೌಹಾರ್ದ ಸಂಘರ್ಷ ಸಮಿತಿಯವರೇ ಬರ್ತ್ಡೇ ಬಾಯ್ಸ್ ಮೇಲೆ ಅಷ್ಟೊಂದು ಪ್ರೀತಿ ಇದ್ದರೆ ನಿಮ್ಮ ಮನೆಯ ಹುಡುಗಿಯರನ್ನು ಕಳುಹಿಸಿ ಅವರು ಇನ್ನೊಮೆ ಬರ್ತ್ಡೇ ಆಚರಿಸಲಿ .ಈ ಭಾರತ ದೇಶ ಭಯ್ಯೋದ್ಪ್ದಕರಿಂದ ಹತ್ತಿ ಉರಿಯುತಿದೆ ,ಇದರ ಬಗ್ಗೆ ಯಾವನು ಮಾತನಾಡುತ್ತಿಲ್ಲ .ಈ ನಿಮ್ಮ ಪ್ರತಿಭಟನೆಗೆ ಧಿಕ್ಕಾರವಿರಲಿ .
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri