ಮಂಗಳವಾರ, 10-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಜಂಟಿ ಸೇನಾ ತಾಲೀಮಿಗೆ ಭಾರತ-ಚೀನಾ ನಿರ್ಧಾರ

ಹೊಸದಿಲ್ಲಿ, ಸೆ.4: ಉಭಯ ರಾಷ್ಟ್ರಗಳ ರಕ್ಷಣಾ ಬಾಂಧವ್ಯಗಳಿಗೆ ಉತ್ತೇಜನ ಹಾಗೂ ಪರಸ್ಪರರ ನಡುವೆ ವಿಶ್ವಾಸ ನಿರ್ಮಾಣ ಯತ್ನಗಳ ಅಂಗವಾಗಿ, 2010ರಿಂದ ಸ್ಥಗಿತಗೊಂಡಿದ್ದ ದ್ವಿಪಕ್ಷೀಯ ಜಂಟಿ ಸೇನಾ ತಾಲೀಮುಗಳನ್ನು ಪುನಾರಂಭಿಸಲು ಭಾರತ ಹಾಗೂ ಚೀನಾ ನಿರ್ಧರಿಸಿವೆ.


ಕೇಂದ್ರ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ ಹಾಗೂ ಚೀನಾದ ರಕ್ಷಣಾ ಸಚಿವ ಜ. ಜೆನ್ ಲಿಯಾಂಗ್ ನಡುವೆ ಹೊಸದಿಲ್ಲಿಯಲ್ಲಿ ಮಂಗಳವಾರ ನಡೆದ ನಿಯೋಗಮಟ್ಟದ ಮಾತುಕತೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು. ಸುಮಾರು 90 ನಿಮಿಷಗಳ ಕಾಲ ನಡುವೆ ನಡೆದ ಮಾತುಕತೆಯಲ್ಲಿ ಇತ್ತಂಡಗಳೂ ಉನ್ನತ ಮಟ್ಟದ ಅಧಿಕಾರಿಗಳ ವಿನಿಮಯ,ಉಭಯದೇಶಗಳ ಸೇನಾನೆಲೆಗಳಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಗೆ ತರಬೇತಿ ಹಾಗೂ ಪರಸ್ಪರರ ನೌಕಾಪಡೆಗಳ ನಡುವೆ ನಾವಿಕ ಭದ್ರತಾ ಸಹಕಾರಗಳನ್ನು ಏರ್ಪಡಿಸುವ ಒಪ್ಪಂದಗಳಿಗೆ ಸಹಿ ಹಾಕಿದವು.


ಜಿನ್ ಲಿಯಾಂಗ್ ಕಳೆದ ಎಂಟು ವರ್ಷಗಳಲ್ಲಿ ಭಾರತಕ್ಕೆ ಭೇಟಿ ನೀಡಿದ ಚೀನದ ಪ್ರಪ್ರಥಮ ರಕ್ಷಣಾ ಸಚಿವರಾಗಿದ್ದಾರೆ. 2006ರಲ್ಲಿ ಭಾರತದ ರಕ್ಷಣಾ ಸಚಿವರು ಚೀನಕ್ಕೆ ಕೊನೆಯ ಬಾರಿ ಭೇಟಿ ನೀಡಿದ್ದರು.

 
ಇಂದು ನಡೆದ ನಿಯೋಗಮಟ್ಟದ ಮಾತುಕತೆಯು ಫಲಪ್ರದವಾಗಿತ್ತೆಂದು ಬಣ್ಣಿಸಿರುವ ಎ.ಕೆ.ಆ್ಯಂಟನಿ, ಉಭಯದೇಶಗಳು ಜಂಟಿಯಾಗಿ ಸೇನಾ ತಾಲೀಮು ಗಳನ್ನು ನಡೆಸಲು ನಿರ್ಧರಿಸಲಾಯಿತೆಂದು ಹೇಳಿದ್ದಾರೆ. ಮುಂದಿನ ವರ್ಷ ಚೀನಕ್ಕೆ ಭೇಟಿ ನೀಡುವಂತೆ ಜ. ಲಿಯಾಂಗ್ ನೀಡಿರುವ ಆಹ್ವಾನವನ್ನು ತಾನು ಸ್ವೀಕರಿಸಿರುವುದಾಗಿ ಅವರು ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾತುಕತೆಯ ವೇಳೆ ಗಡಿಪ್ರದೇಶಗಳ ಸಂಬಂಧಗಳ ಸುಧಾರಣೆ, ದಕ್ಷಿಣ ಆಫ್ರಿಕ ಹಾಗೂ ಏಶ್ಯ ಪೆಸಿಫಿಕ್ ಪ್ರಾಂತದ ಪರಿಸ್ಥಿತಿಯ ಕುರಿತು ಇತ್ತಂಡಗಳು ಚರ್ಚಿಸಿದವೆಂದು ಅವರು ಹೇಳಿದರು.


ಇಂದಿನ ಮಾತುಕತೆಯ ಬಳಿಕ ಎರಡೂ ರಾಷ್ಟ್ರಗಳು ಪರಸ್ಪರರ ಮಧ್ಯೆ ಸಹಕಾರ ಏರ್ಪಡಿಸುವ ಬಗ್ಗೆ ಸಹಮತಕ್ಕೆ ಬಂದಿವೆಯೆಂದು ಚೀನದ ರಕ್ಷಣಾ ಸಚಿವ ಜ.ಲಿಯಾಂಗ್ ತಿಳಿಸಿದ್ದಾರೆ. ಈವರೆಗೆ ಎರಡೂ ದೇಶಗಳ ಬಾಂಧವ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಆಗಿರುವ ಪ್ರಗತಿಯ ಬಗ್ಗೆಯೂ ಪರಾಮರ್ಶೆ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.


ಉಭಯ ರಾಷ್ಟ್ರಗಳ ಸೇನಾಪಡೆಗಳ ಪ್ರಪ್ರಥಮ ಜಂಟಿ ತಾಲೀಮು 2007ರಲ್ಲಿ ಚೀನಾದ ಕುನ್‌ಮಿಂಗ್‌ನಲ್ಲಿ ನಡೆದಿತ್ತು. 2008ರಲ್ಲಿ ಬೆಳಗಾವಿಯಲ್ಲಿ ದ್ವಿತೀಯ ತಾಲೀಮು ನಡೆದಿತ್ತು. ಮೂರನೆಯ ತಾಲೀಮು 2010ರಲ್ಲಿ ಚೀನಾದಲ್ಲಿ ನಡೆಯ ಬೇಕಿತ್ತಾದರೂ,ಕಾರಣಾಂತರಗಳಿಂದ ಅದು ಸ್ಥಗಿತಗೊಂಡಿದೆ. 2010ರಲ್ಲಿ ಭಾರತೀಯ ಸೇನಾಪಡೆಯ ಉತ್ತರ ವಲಯದ ಕಮಾಂಡರ್ ಲೆ.ಜ. ಬಿ.ಎಸ್.ಜಸ್ವಾಲ್‌ಗೆ ಚೀನಾ ವೀಸಾ ನಿರಾಕರಿಸಿದ ಹಿನ್ನೆಲೆಯಲ್ಲಿ ಹೊಸದಿಲ್ಲಿ ಯು ಬೀಜಿಂಗ್ ಜೊತೆ ಉಭಯದೇಶಗಳ ನಡುವಣ ಎಲ್ಲ ರಕ್ಷಣಾ ವಿನಿಮಯಗಳನ್ನು ಸ್ತಂಭನಗೊಳಿಸಿತ್ತು.


SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ: ಕಠಿಣ ಕ್ರಮ ತೆಗೆದುಕೊಳ್ಳಲು ಶಿಂಧೆ ಆಗ್ರಹ
»ನಾಳೆ ಏರ್ ಇಂಡಿಯಾಕ್ಕೆ ಡ್ರೀಮ್‌ಲೈನರ್
»ವಿಶ್ವದ ಅತ್ಯಂತ ದ್ವೇಷಿಸುವ ನಗರಗಳ ಸಾಲಿಗೆ ದಿಲ್ಲಿ
»ಮನಮೋಹನ್ ಸಿಂಗ್ ದುರಂತ ನಾಯಕ: ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನಿಗೆ ಪ್ರಧಾನಿ ಕಾರ್ಯಾಲಯ ತರಾಟೆ
»ಮಹಿಳಾ ಸಬಲೀಕರಣಕ್ಕೆ ಎನ್‌ಜಿಒದಿಂದ ‘ಉಮ್ಮೀದ್ ಕಿ ರಿಕ್ಷಾ’ ಯೋಜನೆಗೆ ಚಾಲನೆ
»ಸೊಹ್ರಾಬುದ್ದಿನ್ ನಕಲಿ ಎನ್‌ಕೌಂಟರ್ ಪ್ರಕರಣ: ಸಮಸ್ಯೆಯ ಸುಳಿಯಲ್ಲಿ ಮತ್ತಷ್ಟು ಪೊಲೀಸರು, ರಾಜಕಾರಣಿಗಳು
»ಪ.ಬಂಗಳಾದಲ್ಲಿ ದಿಢೀರ್ ಪ್ರವಾಹ: ಕೊಚ್ಚಿ ಹೋದ ಬಸ್, 100 ಮಂದಿ ನಾಪತ್ತೆ
»ಶಾಕಿಂಗ್ ರ್ಯಾಗಿಂಗ್‌ ವಿಡಿಯೋ: ಕೇಸ್‌ ದಾಖಲಿಸದ ಪೊಲೀಸ್‌
»ಸೆ 26ರಿಂದ ಯುಎಸ್ ವೀಸಾ ಶುಲ್ಕ ಪಾವತಿ ಸರಳ
»‘ಕೋಲ್’ಹಲ: ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ
»ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೂರು ಪ್ರತ್ಯೇಕ ತಂಡಗಳಿಂದ ತನಿಖೆ; ಆರು ಮಂದಿಯ ಬಂಧನ
»ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
»ಎಸ್ಸಿ-ಎಸ್ಟಿ ಭಡ್ತಿ ಮೀಸಲು ಮಸೂದೆ ಮಂಡನೆ:ರಣರಂಗವಾದ ರಾಜ್ಯಸಭೆ
»ಪ್ರಧಾನಿ ಸಿಂಗ್ ದುರಂತ ನಾಯಕ: ವರದಿಗೆ ಗಂಟುಬಿದ್ದ ವಾಷಿಂಗ್ಟನ್ ಪೋಸ್ಟ್
»ಹಿರಿಯರ ಕಿತ್ತಾಟ:ಸದಸ್ಯರಿಂದಲೇ ಮೇಲ್ಮನೆ ಗೌರವ ಮಣ್ಣುಪಾಲು| ಎಸ್‌ಪಿ-ಬಿ‌ಎಸ್‌ಪಿ ಸಂಸದರ ನಡುವೆ ಗುದ್ದಾಟ
»ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
»23 ಭಾರತೀಯ ನಾವಿಕರಿದ್ದ 'ಅಬುಧಾಬಿ ಸ್ಟಾರ್‌' ನೌಕೆ ಅಪಹರಣ: ನೈಜೀರಿಯಾ ನೌಕಾಪಡೆ ಕಾರ್ಯಾಚಾರಣೆ - ನಾವಿಕರ ಸುರಕ್ಷಿತ ಬಿಡುಗಡೆ
»ಶ್ರೀಲಂಕಾ ಪ್ರವಾಸಿಗರ ಮೇಲಿನ ದಾಳಿಗೆ ಜಯಾ ಹೊಣೆ: ಕರುಣಾನಿಧಿ
»ಬಳ್ಳಾರಿ ಲೋಕಸಭಾ ಕ್ಷೇತ್ರ: ಸೆ.15ರಂದು ಮರು ಮತ ಎಣಿಕೆ
»ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 52ಮಂದಿ ಬಲಿ, 70ಗಾಯಾಳು
»ಉದ್ಬವ್ ಹೇಳಿಕೆಯನ್ನು ತಳ್ಳಿ ಹಾಕಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ
»ರಾಜ್ಯಸಭೆಯಲ್ಲಿ ಕೈ ಕೈ ಮಿಲಾಯಿಸಿದ ಸಂಸದರು
»ತೆಲಂಗಾಣ ರಾಜ್ಯ ರಚನೆಗೆ ಬಿಜೆಪಿ ಬದ್ಧ: ಸುಷ್ಮಾ
»ಭಾರತದ 'ಮೌನ' ಪ್ರಧಾನಿ ದುರಂತ ವ್ಯಕ್ತಿ: ವಾಷಿಂಗ್ಟನ್ ಪೋಸ್ಟ್
»ಪ್ರಜಾಪತಿ ನಕಲಿ ಎನ್‌ಕೌಂಟರ್ : ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಆರೋಪ ಪಟ್ಟಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri