ಶನಿವಾರ, 14-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಉನ್ನತ ಶಿಕ್ಷಣದಲ್ಲಿ ಅಧ್ಯಾತ್ಮ ಬೆರೆಸಬೇಡಿ: ಭಾರದ್ವಾಜ್

ಬೆಂಗಳೂರು, ಸೆ. 4: ಉನ್ನತ ಶಿಕ್ಷಣದಲ್ಲಿ ಆಧ್ಯಾತ್ಮಿಕ ಶಿಕ್ಷಣವನ್ನು ಬೆರೆಸುವ ಅಗತ್ಯವಿಲ್ಲ ಎಂದು ರಾಜ್ಯಪಾಲ ಡಾ.ಹಂಸರಾಜ್ ಭಾರ ದ್ವಾಜ್ ಕಟುವಾಗಿ ನುಡಿದಿದ್ದಾರೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹೊರತಂದ ‘ಕರ್ನಾಟಕ ಉನ್ನತ ಶಿಕ್ಷಣ ವಿಷನ್ 20-20’ ಎಂಬ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಎಸ್.ಶರ್ಮಾರವರು ಎತ್ತಿದ ಪ್ರಶ್ನೆಗೆ ರಾಜ್ಯಪಾಲರು ಮೇಲಿನಂತೆ ಕಟುವಾಗಿ ಉತ್ತರಿಸಿದರು.

ಉನ್ನತ ಶಿಕ್ಷಣದಲ್ಲಿ ಆಧ್ಯಾತ್ಮ ಶಿಕ್ಷಣದ ಅಗತ್ಯವಿಲ್ಲ. ‘ಗುರುದೇವೋಭವ’ ಎಂಬ ಮೂಲ ಮಂತ್ರವನ್ನು ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಮೊದ ಲಿನಿಂದಲೂ ಪಾಲಿಸಿಕೊಂಡು ಬರಲಾಗಿದೆ. ಪಾಶ್ಚಿಮಾತ್ಯರು ಸದಾ ಯಾಂತ್ರಿಕವಾಗಿ ಯೋಚಿಸಿದರೆ, ನಾವು ಆಧ್ಯಾತ್ಮಕದ ಬಗ್ಗೆ ಚಿಂತಿಸುತ್ತೇವೆ. ದೇಶದ ಬಡತನ, ಹಸಿವನ್ನು ನೀಗಿಸಲು ತಾಂತ್ರಿಕ ಶಿಕ್ಷಣದ ಅಗತ್ಯವಿದ್ದು, ಆಧ್ಯಾತ್ಮ ಶಿಕ್ಷಣದಿಂದ ಇದು ಸಾಧ್ಯವಿಲ್ಲ. ವಿಜ್ಞಾನಿಗಳಿಗೆ ಆಧ್ಯಾತ್ಮಿಕತೆಯ ಅಗತ್ಯ ಸಹ ಇಲ್ಲ. ಆದುದರಿಂದ ನಮ್ಮ ವಿಶ್ವವಿದ್ಯಾಲಯಗಳು ತಾಂತ್ರಿಕ ಹಾಗೂ ಬೌದ್ಧಿಕ ಜ್ಞಾನದ ದೇಗುಲಗಳಾಗಬೇಕು ಎಂದು ಹಂಸರಾಜ್ ಭಾರದ್ವಾಜ್ ಅಭಿಪ್ರಾಯಪಟ್ಟರು.

ದೇಶದ ಅಭಿವೃದ್ಧಿ ಉನ್ನತ ಶಿಕ್ಷಣದಿಂದ ಮಾತ್ರ ಸಾಧ್ಯ. ಆದರೆ ಉತ್ತಮ ಬೋಧಕರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಮ್ಮ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ. ಇದರಿಂದ ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಆದುದರಿಂದ ನಮ್ಮ ವಿಶ್ವವಿದ್ಯಾಲಯಗಳನ್ನು ವಿದೇಶಿ ವಿಶ್ವವಿದ್ಯಾಲಯಗಳಂತೆ ಉತ್ತಮ ಕಾಲೇಜು ವಾತಾವರಣ, ಗ್ರಂಥಾಲಯ, ವಸತಿ ಸೌಲಭ್ಯ, ಸಿಬ್ಬಂದಿ, ಉತ್ತಮ ಕೌಶಲ್ಯವುಳ್ಳ ಬೋಧಕರು, ಹಾಗೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಉನ್ನತೀಕರಿಸಬೇಕಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲೇ ಮೈಸೂರು ವಿಶ್ವವಿದ್ಯಾಲಯ ಅತ್ಯುತ್ತಮ ವಿಶ್ವವಿದ್ಯಾಲಯವಾಗಿದೆ. ಐಐಎಸ್ಸಿ, ಇಸ್ರೋ, ಐಐಎಂ, ರಾಷ್ಟ್ರೀಯ ಕಾನೂನು ಶಾಲೆ ಹಾಗೂ ಕೃಷಿ ವಿಶ್ವವಿದ್ಯಾಲಯಗಳೂ ಸೇರಿದಂತೆ ರಾಜ್ಯ ಅತ್ಯುನ್ನತ ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ. ಆದರೂ ಸಹ ಶಿಕ್ಷಣದ ಗುಣಮಟ್ಟದಲ್ಲಿ ಸುಧಾರಿಸಬೇಕಿದೆ.

ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣದಲ್ಲಿ ಕೇವಲ ಗುರಿಗಳನ್ನಿಟ್ಟುಕ್ಕೊಂಡರೆ ಸಾಧ್ಯವಿಲ್ಲ. ಆ ಗುರಿಗಳನ್ನು ಮುಟ್ಟಿ ಯಶಸ್ಸು ಸಾಧಿಸುವುದು ಅತಿ ಮುಖ್ಯ. ಆದುದರಿಂದ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಆಡಳಿತ ಮಂಡಳಿ ತಮ್ಮಲ್ಲಿರುವ ಒಳಜಗಳಗಳನ್ನು ಬಿಟ್ಟು ಉನ್ನತ ಶಿಕ್ಷಣಕ್ಕೆ ಯೋಜನೆ ರೂಪಿಸಬೇಕು ಎಂದು ರಾಜ್ಯಪಾಲರು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ, ಶಿಕ್ಷಣವು ಸಮಾಜಕ್ಕೆ ಅರಿವನ್ನು ಮೂಡಿಸುವ ದಾರಿದೀಪವಾಗಬೇಕು. ಉನ್ನತ ಶಿಕ್ಷಣ ನಾಗರಿಕರಿಗೆ ಸ್ವಾವಲಂಬಿ ಬದುಕು ಮೂಡಿಸುವಂತಿರಬೇಕು. ಶಿಕ್ಷಣವೊಂದೇ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ಸಾಧನವಾಗಿದ್ದು, ನಮ್ಮ ವಿಶ್ವವಿದ್ಯಾಲಯಗಳು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಾವೇರಪ್ಪ, ಉನ್ನತ ಶಿಕ್ಷಣ ಇಲಾಖೆಯ ಆಯುಕ್ತ ಸಿದ್ದಯ್ಯ, ತುಮಕೂರು ವಿಶ್ವವಿದ್ಯಾ ಲಯದ ಕುಲಪತಿ ಡಾ.ಎಚ್.ಎಸ್.ಶರ್ಮಾ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಭಾಗವಹಿಸಿದ್ದರು.

ಸಹಿ ಹಾಕಿದ್ದರೆ ಭೂಗಳ್ಳತನಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತಿತ್ತು: ಭಾರದ್ವಾಜ್
ಕಂದಾಯ ಭೂಮಿ ತಿದ್ದುಪಡಿ ವಿಧೇಯಕಕ್ಕೆ ಸಹಿ ಹಾಕಿದ್ದರೆ ಮತ್ತಷ್ಟು ಸರಕಾರಿ ಭೂಮಿ ಭೂಗಳ್ಳರ ಪಾಲಾಗಲು ಅವಕಾಶ ಮಾಡಿಕೊಟ್ಟಂತಾಗುತ್ತಿತ್ತು ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ತಿಳಿಸಿದ್ದಾರೆ.ರಾಜ್ಯದಲ್ಲಿ ಒತ್ತುವರಿಯಾಗಿರುವ ಸರಕಾರಿ ಭೂಮಿಯ ಬಗ್ಗೆ 2 ಅಧ್ಯಯನ ವರದಿಗಳು ನನ್ನ ಬಳಿ ಇವೆ. ಬಾಲಸುಬ್ರಹ್ಮಣ್ಯಂರವರು ತಮ್ಮ ವರದಿಯಲ್ಲಿ ಸುಮಾರು 11 ಲಕ್ಷ ಎಕರೆ ಸರಕಾರಿ ಭೂಮಿ ರಾಜ್ಯದಲ್ಲಿ ಒತ್ತುವರಿಯಾಗಿದೆ ಎಂದು ತಿಳಿಸಿದ್ದಾರೆ.

ಈ ಸರಕಾರಿ ಭೂಮಿಯನ್ನು ಕಬಳಿಸಿರುವುದರಲ್ಲಿ ಪ್ರಭಾವಿಗಳ ಪಾತ್ರವಿರುವುದು ನನ್ನ ಗಮನಕ್ಕೆ ಬಂದಿದೆ. ಒಂದು ಪಕ್ಷ ಈ ವಿಧೇಯಕಕ್ಕೆ ನಾನು ಸಹಿ ಮಾಡಿದ್ದರೆ ಮತ್ತಷ್ಟು ಸರಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿತ್ತು. ಆದುದರಿಂದ ಈ ವಿಧೇಯಕವನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯಪಾಲರು ವಿವರಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri