ಮಂಗಳವಾರ, 10-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item 

 
ಅಧ್ಯಕ್ಷ ಹುದ್ದೆಗೆ ಬಿಎಸ್‌ವೈ ದಿಲ್ಲಿಯಲ್ಲಿ ಲಾಬಿ; ಇಲ್ಲದಿದ್ದರೆ ಬಿಜೆಪಿಯಿಂದ ಹೊರಗೆ?

ಬೆಂಗಳೂರು: ರಾಜ್ಯಾಧ್ಯಕ್ಷ ಹುದ್ದೆ ಗಿಟ್ಟಿಸಲು ಮಾಜಿ ಸಿ‌ಎಂ ಯಡಿಯೂರಪ್ಪ ದಿಲ್ಲಿಯಲ್ಲಿ ಲಾಬಿ ನಡೆಸುತ್ತಿದ್ದು, ಅದನ್ನು ತಡೆಯಲು ಅನಂತಕುಮಾರ್ ಮತ್ತು ಸದಾನಂದ ಗೌಡ ಜಂಟಿಯಾಗಿ ಪ್ರತಿತಂತ್ರ ರೂಪಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿ ನಡೆಸಿದ ಸಮೀಕ್ಷೆ ತಮ್ಮ ಪರವಾಗಿರುವುದನ್ನು ಮುಂದಿಟ್ಟುಕೊಂಡಿರುವ ಯಡಿಯೂರಪ್ಪ, ತಮಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕು, ಇಲ್ಲದಿದ್ದರೆ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ವರಿಷ್ಠರ ಮುಂದೆ ಪ್ರತಿಪಾದಿಸಲು ದಿಲ್ಲಿಗೆ ತೆರಳಿದ್ದಾರೆ. ಅರುಣ್ ಜೇಟ್ಲಿ ಹೊರತುಪಡಿಸಿ ಉಳಿದ ನಾಯಕರ ಭೇಟಿ ಸಾಧ್ಯವಾಗಿಲ್ಲ. ಹೀಗಾಗಿ ದಿಲ್ಲಿಯಲ್ಲೇ ಠಿಕಾಣಿ ಹೂಡಿದ್ದಾರೆ.

ಗಡ್ಕರಿ ವಿದೇಶ ಪ್ರವಾಸ:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ವಿದೇಶ ಪ್ರವಾಸದಿಂದ ಹಿಂತಿರುಗಲು ಮೂರ‌್ನಾಲ್ಕು ದಿನ ಆಗಲಿದೆ. ಉಳಿದ ನಾಯಕರು ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ದು, ಭೇಟಿಗೆ ಅವಕಾಶ ಸಿಕ್ಕಿಲ್ಲ. ಮೊದಲಿನಿಂದಲೂ ತಮ್ಮ ಪರ ಇರುವ ಜೇಟ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ.

ಗಣಿ ಅಕ್ರಮ ಸೇರಿದಂತೆ ಹಲವು ಭ್ರಷ್ಟಾಚಾರ ಹಗರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ಯಡಿಯೂರಪ್ಪಗೆ ಉನ್ನತ ಹುದ್ದೆ ನೀಡಬಾರದು ಎಂದು ರಾಜ್ಯ ನಾಯಕರಿಂದ ಬಹಳ ಹಿಂದೆಯೇ ಸಂದೇಶ ರವಾನೆಯಾಗಿದೆ. ದಿಲ್ಲಿ ವರಿಷ್ಠರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ಬೇಡಿಕೆಯ ನ್ನು ಹಲವು ಬಾರಿ ತಿರಸ್ಕರಿಸಿದ್ದಾರೆ. ಹೀಗಿದ್ದರೂ ವಿಚಲಿತರಾಗದ ಯಡಿಯೂರಪ್ಪ ಮರಳಿ ಪ್ರಯತ್ನ ನಡೆಸುತ್ತಲೇ ಇದ್ದಾರೆ.

ಚುನಾವಣೆ ನೇತೃತ್ವದ ಹಂಬಲ:

ಈಗ ರಾಜ್ಯಾಧ್ಯಕ್ಷ ಹುದ್ದೆ ಅಲಂಕರಿಸಿದರೆ ವಿಧಾನಸಭೆ ಚುನಾವಣೆಯನ್ನು ತಮ್ಮ ನೇತೃತ್ವದಲ್ಲೇ ಎದುರಿಸಬಹುದು ಎಂಬುದು ಮಾಜಿ ಸಿ‌ಎಂ ಆಲೋ ಚನೆ. ಮತ್ತೊಬ್ಬ ಮಾಜಿ ಸಿ‌ಎಂ ಸದಾನಂದ ಗೌಡರೂ ರೇಸ್‌ನಲ್ಲಿ ಇರುವುದರಿಂದ ವರಿಷ್ಠರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಡಿವಿ‌ಎಸ್‌ಗೆ ಆಡ್ವಾಣಿ ಮತ್ತು ಯಡಿಯೂರಪ್ಪ ಬೆಂಬಲಕ್ಕೆ ಜೇಟ್ಲಿ ಹಾಗೂ ಗಡ್ಕರಿ ನಿಂತಿದ್ದಾರೆ.

ಇಬ್ಬರಿಗೂ ರಾಜ್ಯಾಧ್ಯಕ್ಷ ಹುದ್ದೆ ಕೊಡುವುದು ಬೇಡ. ಹೊಸಬರನ್ನು ಆಯ್ಕೆ ಮಾಡುವಂತೆ ರಾಜ್ಯದ ಇತರ ನಾಯಕರು ಅಭಿಪ್ರಾಯ ತಿಳಿಸಿದ್ದಾರೆ. ಸಂಘ ಪರಿವಾರದ ಹಿನ್ನೆಲೆ ಇರುವವರಿಗೆ ಹುದ್ದೆ ಕೊಡಬೇಕು ಎಂದು ಆರ್‌ಎಸ್‌ಎಸ್ ಹಕ್ಕೊತ್ತಾಯ ಮಂಡಿಸಿದೆ. ಒಂದು ವೇಳೆ ತಮಗೆ ಹುದ್ದೆ ನೀಡದಿದ್ದರೆ, ತಾವು ಸೂಚಿಸುವವರಿಗೆ (ಸಚಿವೆ ಶೋಭಾ ಕರಂದ್ಲಾಜೆ) ಹುದ್ದೆ ಕೊಡಬೇಕೆಂದು ಯಡಿಯೂರಪ್ಪ ಕೇಳುವ ಸಾಧ್ಯತೆ ಇದೆ. ದಿಲ್ಲಿಯಲ್ಲೇ ಇರುವ ಇಂಧನ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಕಲ್ಲಿದ್ದಲು ಸಚಿವ ಹಾಗೂ ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಮಂಗಳವಾರ ಭೇಟಿ ಮಾಡಿದ್ದರು.

ಹಿರಿಯರ ವಿರೋಧ:

ಗಂಭೀರ ಆರೋಪ ಎದುರಿಸುತ್ತಿರುವ ಯಡಿಯೂರಪ್ಪಗೆ ಯಾವುದೇ ಹುದ್ದೆ ನೀಡಬಾರದು ಎಂದು ಬಿಜೆಪಿ ಹಿರಿಯರ ವೇದಿಕೆ ಅಧ್ಯಕ್ಷ ಬಿ.ಬಿ.ಶಿವಪ್ಪ ಹೇಳಿದ್ದಾರೆ. ಈ ಸಂಬಂಧ ಅವರು ಇಷ್ಟರಲ್ಲೇ ದಿಲ್ಲಿಗೆ ತೆರಳಿ ವರಿಷ್ಠರಿಗೆ ಮನವಿ ಸಲ್ಲಿಸಲಿದ್ದಾರೆ. ವಿದೇಶ ಪ್ರವಾಸದಿಂದ ಗಡ್ಕರಿ ಹಿಂತಿರುಗಿದ ಬಳಿಕ ಸದಾನಂದ ಗೌಡರು ದಿಲ್ಲಿಗೆ ತೆರಳಲಿದ್ದಾರೆ. ವರಿಷ್ಠರೇ ತಮಗೆ ಬುಲಾವ್ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಭಾರಿ ಕುತೂಹಲ ಮೂಡಿಸಿದೆ.

ಬಿಜೆಪಿಯಿಂದ ಹೊರಗೆ ಬಿಎಸ್‌ವೈ ಚಿತ್ತ

ಬೆಂಗಳೂರು : ಬಹಿರಂಗದಲ್ಲಿ ಇಲ್ಲ ಇಲ್ಲ ಎನ್ನುತ್ತಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ತೊರೆಯುವ ದಿಕ್ಕಿನಲ್ಲಿ ತೆರೆಮರೆಯ ಸಿದ್ಧತೆ ಹಾಗೂ ಪ್ರಯತ್ನಗಳನ್ನು ನಡೆಸುತ್ತಿರುವುದು ನಿಧಾನವಾಗಿ ನಿಚ್ಚಳವಾಗುತ್ತಿದೆ.

ಯಡಿಯೂರಪ್ಪ ಅವರ ಈ ನಡೆಯಿಂದ ಸಹಜವಾಗಿಯೇ ಆತಂಕಕ್ಕೆ ಒಳಗಾಗಿರುವ ಆಡಳಿತಾರೂಢ ಬಿಜೆಪಿ ನಾಯಕರು, ಪಕ್ಷಕ್ಕೆ ಹೆಚ್ಚು 'ಡ್ಯಾಮೇಜ್‌' ಉಂಟಾಗುವ ಮೊದಲು ಡಿಸೆಂಬರ್‌ನಲ್ಲೇ ಚುನಾವಣೆ ಎದುರಿಸುವ ಬಗ್ಗೆ ಗಂಭೀರ ಚಿಂತನೆ ಆರಂಭಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಗಣಿಕಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಯಡಿಯೂರಪ್ಪ ಅವರು ಸದ್ಯಕ್ಕೆ ಅಕ್ಷರಶಃ ಅಡಕತ್ತರಿಯಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಬಿಜೆಪಿ ತೊರೆಯುವ ಪೂರ್ಣ ಮನಸ್ಸಿಲ್ಲದಿದ್ದರೂ ಅನಿವಾರ್ಯವಾಗಿ ಅತ್ತ ಹೆಜ್ಜೆ ಹಾಕಬೇಕಾದ ಸಂದರ್ಭ ನಿರ್ಮಾಣವಾಗುತ್ತಿದೆ. ಅಥವಾ ಅಂಥದೊಂದು ಸಂದರ್ಭವನ್ನು ಅವರೇ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ.

ಹೀಗಾಗಿ ಶೀಘ್ರದಲ್ಲೇ ತಾವೊಂದು ಸೂಕ್ತ ನಿರ್ಧಾರಕ್ಕೆ ಬರುವುದಾಗಿ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಸಂದೇಶವನ್ನೂ ರವಾನಿಸಿದ್ದಾರೆ.

ಮುಂದಿನ ಚುನಾವಣೆ ತಮ್ಮ ನೇತೃತ್ವದಲ್ಲೇ ನಡೆಯಬೇಕು ಎಂಬ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ತಮಗೇ ನೀಡಬೇಕು ಎಂಬ ನಿಲವು ಯಡಿಯೂರಪ್ಪ ಮತ್ತವರ ಬೆಂಬಲಿಗರದ್ದು. ಆದರೆ, ಸಿಬಿಐ ತನಿಖೆಯಿಂದ ಮುಕ್ತರಾಗದ ಹೊರತು ಅಧ್ಯಕ್ಷ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್‌ ಒಪ್ಪುತ್ತಿಲ್ಲ. ಒಂದು ವೇಳೆ ಬಿಜೆಪಿ ಅಂತಿಮವಾಗಿ ಯಡಿಯೂರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರೂ ಕೇಂದ್ರದ ಯುಪಿಎ ಸರ್ಕಾರ ಸಿಬಿಐ ಬಳಸಿಕೊಂಡು ಯಡಿಯೂರಪ್ಪ ಅವರನ್ನು ಬಂಧಿಸಬಹುದು ಎಂಬ ಆತಂಕ ಬಲವಾಗಿ ಕಾಡುತ್ತಿದೆ.

ರಾಜ್ಯಾಧ್ಯಕ್ಷ ಸ್ಥಾನವನ್ನು ಯಾರಿಗಾದರೂ ಕೊಡಲಿ ಎಂಬ ನಿರ್ಲಿಪ್ತ ಭಾವನೆಯಿಂದ ಚುನಾವಣೆಯಲ್ಲಿ ಶಕ್ತಿಮೀರಿ ದುಡಿದು ಮತ್ತೆ ಅಧಿಕಾರಕ್ಕೆ ತಂದರೆ ಆಗಲೂ ಇದೇ ಸಿಬಿಐ ತನಿಖೆಯ ನೆಪವೊಡ್ಡಿ ಮುಖ್ಯಮಂತ್ರಿ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್‌ ಹಿಂದೇಟು ಹಾಕುವುದು ಸ್ಪಷ್ಟ. ಅದರ ಬದಲು ಬಿಜೆಪಿಯನ್ನು ದುರ್ಬಲಗೊಳಿಸುವ ತಂತ್ರ ಹೆಣೆಯುತ್ತಿರುವ ಕಾಂಗ್ರೆಸ್ಸಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನೆರವಾದರೆ ತಮ್ಮ ವಿರುದ್ಧದ ಸಿಬಿಐ ಕುಣಿಕೆಯಿಂದಲಾದರೂ ಹೊರಬರಬಹುದು ಎಂಬ ಆಲೋಚನೆ ಯಡಿಯೂರಪ್ಪ ಅವರಿಗೆ ಬಂದಿದೆ ಎನ್ನಲಾಗಿದೆ.

ಈ ಕಾರಣಕ್ಕಾಗಿಯೇ ಯಡಿಯೂರಪ್ಪ ಅವರು ಇತ್ತೀಚಿನ ದಿನಗಳಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿದ್ದರೂ ಪ್ರತಿಪಕ್ಷದ ನಾಯಕನ ಸ್ಥಾನವನ್ನೂ ನಿಭಾಯಿಸುತ್ತಿದ್ದಾರೆ. ತಾವೊಬ್ಬರೇ ಏಕಾಂಗಿಯಾಗಿ ಬರ ಪ್ರವಾಸ ಹಮ್ಮಿಕೊಳ್ಳಲು ರೂಪಿಸಿದ್ದ ತಂತ್ರವನ್ನು ಬಿಜೆಪಿ ನಾಯಕರು ವ್ಯವಸ್ಥಿತವಾಗಿ ವಿಫ‌ಲಗೊಳಿಸಿದ್ದರಿಂದ ಇದೀಗ ಮತ್ತೆ ಪ್ರವಾಸ ಕೈಗೊಳ್ಳುವ ಪ್ರಯತ್ನದಲ್ಲಿದ್ದಾರೆ. ಆ ಮೂಲಕ ತಮ್ಮ ಜನಪ್ರಿಯತೆಯನ್ನು ಒರೆಗೆ ಹಚ್ಚುವ ಉದ್ದೇಶವನ್ನೂ ಅವರು ಹೊಂದಿದ್ದಾರೆ.

ಮುಂದಿನ ರಾಜಕೀಯ ನಿರ್ಧಾರಕ್ಕೆ ಧಾವಂತ

ಮೊದಲ ಹಂತದ ಬರ ಪ್ರವಾಸದಲ್ಲಿ ಜನರಿಂದ ಲಭಿಸಿದ ಪ್ರತಿಕ್ರಿಯೆ ಹಾಗೂ ಇತ್ತೀಚಿನ ಎನ್‌ಡಿಟಿವಿ ಸುದ್ದಿವಾಹಿನಿಯ ಸಮೀಕ್ಷೆ ಪ್ರಕಟಗೊಂಡ ನಂತರ ಯಡಿಯೂರಪ್ಪ ಅವರಿಗೆ ಅಕ್ಷರಶಃ ಆನೆಬಲ ಬಂದಂತಾಗಿದೆ. ಇದನ್ನು ಬಳಸಿಕೊಂಡು ತಮ್ಮ ಮುಂದಿನ ರಾಜಕೀಯ ನಡೆ ನಿರ್ಧರಿಸಬೇಕು ಎಂಬ ಧಾವಂತದಲ್ಲಿದ್ದಾರೆ.

ಬಿಜೆಪಿಯನ್ನು ತೊರೆಯುವುದಾದರೆ ಪ್ರತ್ಯೇಕ ಪ್ರಾದೇಶಿಕ ಪಕ್ಷ ಸ್ಥಾಪಿಸಬೇಕೊ ಅಥವಾ ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕೊ ಎಂಬುದರ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಆದರೆ, ಬಿಜೆಪಿ ತೊರೆಯುವ ನಿಟ್ಟಿನಲ್ಲಿ ಮಾತ್ರ ಯಡಿಯೂರಪ್ಪ ಗಂಭೀರ ಹೆಜ್ಜೆ ಹಾಕುತ್ತಿದ್ದಾರೆ. ಕಾಂಗ್ರೆಸ್‌ ಜತೆ ಪ್ರತ್ಯಕ್ಷ ಅಥವಾ ಪರೋಕ್ಷ ಒಪ್ಪಂದ ಮಾಡಿಕೊಳ್ಳುವ ಉಮ್ಮೇದಿನಲ್ಲಿದ್ದಾರೆ ಎಂದು ಅವರ ಆಪ್ತರಿಂದ ತಿಳಿದು ಬಂದಿದೆ.

ಇದರ ಒಂದು ಭಾಗವಾಗಿಯೇ ಯಡಿಯೂರಪ್ಪ ಅವರು ಭಾನುವಾರ ಮಧ್ಯರಾತ್ರಿ ಗೌಪ್ಯವಾಗಿ ದೆಹಲಿಗೆ ದೌಡಾಯಿಸಿದ್ದರು. ಎರಡು ದಿನಗಳ ಕಾಲ ಅಲ್ಲಿ ವಾಸ್ತವ್ಯ ಹೂಡಿದ ಯಡಿಯೂರಪ್ಪ ಅವರು ತಮ್ಮ ದೆಹಲಿ ಭೇಟಿಯ ಬಗ್ಗೆ ಮಂಗಳವಾರ ಸುದ್ದಿಗಾರರಿಗೆ ನೀಡಿದ ಸಮಜಾಯಿಷಿ- 'ನನ್ನ ವಿರುದ್ಧದ ಪ್ರಕರಣಗಳ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲು ದೆಹಲಿಗೆ ಬಂದಿದ್ದೆ' ಎಂದು.

ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದು ತಮ್ಮ ಆಪ್ತರಾದ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿಧಾನರಿಷತ್‌ ಸದಸ್ಯ ಲೆಹರ್‌ ಸಿಂಗ್‌ ಅವರೊಂದಿಗೆ. ಭಾನುವಾರ ಮಧ್ಯರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೆ ದೆಹಲಿಯಲ್ಲಿ ಸುದ್ದಿಗಾರರ ಕಣ್ಣಿಗೆ ಬೀಳದ ಯಡಿಯೂರಪ್ಪ ಅವರು ಮಂಗಳವಾರ ಮಧ್ಯಾಹ್ನ ಸಂಸತ್‌ ಭವನಕ್ಕೆ ಆಗಮಿಸಿ ತಮ್ಮ ಬೆಂಬಲಿಗ ಸಂಸದರೊಂದಿಗೆ ಮಾತ್ರ ಮಾತುಕತೆ ನಡೆಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ಗಡ್ಕರಿ ವಿದೇಶ ಪ್ರವಾಸದಲ್ಲಿರುವುದರಿಂದ ಇನ್ನೋರ್ವ ಹಿರಿಯ ನಾಯಕ ಅರುಣ್‌ ಜೇತ್ಲಿ ಅವರನ್ನು ಭೇಟಿ ಮಾಡಿರುವ ಸಾಧ್ಯತೆಯಿದೆ. ಆದರೆ, ಇದು ಖಚಿತವಾಗಿಲ್ಲ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : vk | ಉದಯವಾಣಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri