ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಉದ್ಯೋಗದಲ್ಲಿ ಪರಿಶಿಷ್ಟರಿಗೆ ಬಡ್ತಿ: ಕೇಂದ್ರ ಸಂಪುಟದಿಂದ ಸಾಂವಿಧಾನಿಕ ತಿದ್ದುಪಡಿಗೆ ಒಪ್ಪಿಗೆ

ನವದೆಹಲಿ:ಅಟಾರ್ನಿ ಜನರಲ್ ಅವರ ಎಚ್ಚರಿಕೆಯ ಹೊರತಾಗಿಯೂ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಬಡ್ತಿ ನೀಡುವ ಸಂವಿಧಾನಿಕ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಬುಧವಾರ ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗುವುದು.

ಸಮಾಜವಾದಿ ಪಕ್ಷ ಹೊರತುಪಡಿಸಿ ಉಳಿದ ಎಲ್ಲ ರಾಜಕೀಯ ಪಕ್ಷಗಳು ಕೇಂದ್ರದ ಪ್ರಸ್ತಾಪಕ್ಕೆ ಬೆಂಬಲ ಸೂಚಿಸಿವೆ. ಇದೇ ವೇಳೆ ಕಾಂಗ್ರೆಸ್‌ನಲ್ಲಿರುವ ಇತರ ಹಿಂದುಳಿದ ವರ್ಗ (ಒಬಿಸಿ) ನಾಯಕ ವಿ.ಹನುಮಂತರಾವ್ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಒಬಿಸಿ ವರ್ಗಕ್ಕೂ ಮೀಸಲು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಏನಾಗಲಿದೆ?: ಯುಪಿ‌ಎ ಸರ್ಕಾರದ ಮಹತ್ವಾಕಾಂಕ್ಷೆಯ ಮಸೂದೆ ಎಂದು ಬಣ್ಣಿಸಲಾಗುತ್ತಿರುವ ಈ ತಿದ್ದುಪಡಿ ಮಸೂದೆಯಿಂದ ಎಸ್‌ಸಿ ಮತ್ತು ಎಸ್‌ಟಿ ವರ್ಗದ ಉದ್ಯೋಗಿಗಳಿಗೆ ವಿವಿಧ ಸರ್ಕಾರಿ ಇಲಾಖೆಗಳ ಹುದ್ದೆಗಳಲ್ಲಿನ ಬಡ್ತಿಯಲ್ಲಿ ಮೀಸಲು ದೊರೆಯಲಿದೆ. ಇದಕ್ಕಾಗಿ ಸಂವಿಧಾನದ ೪ ವಿಧಿಗಳಿಗೆ ತಿದ್ದುಪಡಿ ತರಬೇಕಾಗುತ್ತದೆ.

ಸುಪ್ರೀಂಕೋರ್ಟ್ ತಡೆಯೊಡ್ಡಿತ್ತು: ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಬಿ‌ಎಸ್‌ಪಿ ಸರ್ಕಾರ ಸರ್ಕಾರಿ ಉದ್ಯೋಗದ ಉನ್ನತ ಹುದ್ದೆಯ ಬಡ್ತಿಯಲ್ಲಿ ಎಸ್‌ಸಿ, ಎಸ್‌ಟಿ ವರ್ಗಕ್ಕೆ ಮೀಸಲು ಕಲ್ಪಿಸಿತ್ತು. ಆದರೆ ಈ ವರ್ಷದ ಏಪ್ರಿಲ್‌ನಲ್ಲಿ ಮಾಯಾವತಿ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.

ಕೇಂದ್ರ ಸರ್ಕಾರದ ಪ್ರಸ್ತಾವಿತ ತಿದ್ದುಪಡಿಗೆ ಈಗಾಗಲೇ ಅಟಾರ್ನಿ ಜನರಲ್ ತೀವ್ರ ಅಸಂತೃಪ್ತಿ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಸುಪ್ರೀಂಕೋರ್ಟ್ ಈ ತೀರ್ಮಾನವನ್ನು ರದ್ದುಪಡಿಸಬಹುದೆನ್ನುವ ಎಚ್ಚರಿಕೆ ನೀಡಿದ್ದರು.

ಮೂರನೇ ಒಂದರಷ್ಟು ಬಹುಮತ ಬೇಕು: ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದೆ. ಬಡ್ತಿಯಲ್ಲಿ ಮೀಸಲು ನೀಡುವ ಬಗ್ಗೆ ಸಾಂವಿಧಾನಿಕ ತಿದ್ದುಪಡಿ ತರಬೇಕೆಂದು ವಿವಿಧ ರಾಜಕೀಯ ಪಕ್ಷಗಳು ಸರ್ಕಾರವನ್ನು ಒತ್ತಾಯಿಸಿವೆ. ಹೀಗಾಗಿ, ಆ.೯ರಂದೇ ಈ ಮಸೂದೆ ಮಂಡಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು.

ಕೇಂದ್ರದ ಉದ್ದೇಶಿತ ಮಸೂದೆ ಸಂಸತ್‌ನಲ್ಲಿ ಅನುಮೋದನೆ ಪಡೆಯಲು ಮೂರನೇ ಒಂದರಷ್ಟು ಮತಗಳು ಬೇಕು. ಆದರೆ, ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಹೊರತುಪಡಿಸಿ ಬಹುತೇಕ ಎಲ್ಲ ಪಕ್ಷಗಳು ಈ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಸರ್ಕಾರಕ್ಕೆ ಅನುಮೋದನೆ ಪಡೆಯುವುದು ಕಷ್ಟವೇನಲ್ಲ.

ಸ್ವಾಗತಾರ್ಹ: ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ಬಿ‌ಎಸ್‌ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. ಕೇಂದ್ರದ ಪ್ರಸ್ತಾಪಕ್ಕೆ ಬಿಜೆಪಿಯೂ ಬೆಂಬಲ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಯಾವತಿ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಜತೆ ಮಾತುಕತೆ ನಡೆಸಿದ್ದಾರೆ.

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ ಬಿಜೆಪಿ ನೇತೃತ್ವದ ಪ್ರತಿಪಕ್ಷ ಸಂಸತ್ ಕಲಾಪಕ್ಕೆ ಅಡ್ಡಿಯನ್ನುಂಟು ಮಾಡುತ್ತಿರುವುದರಿಂದ ಮಸೂದೆ ಹಾಲಿ ಅಧಿವೇಶನದಲ್ಲಿ ಅನುಮೋದನೆ ಸಿಗದು ಎಂದು ಮಾಯಾವತಿ ಆತಂಕ ವ್ಯಕ್ತಪಡಿಸಿದ್ದಾರೆ.
ಆದರೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಮಸೂದೆಯನ್ನು ಬೆಂಬಲಿಸುವ ಬಗ್ಗೆ ಯಾವುದೇ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಮಾತನಾಡಿ ಶೀಘ್ರವೇ ಮಸೂದೆಯನ್ನು ಅಂಗೀಕರಿಸುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಅಪಸ್ವರ

ಕಾಂಗ್ರೆಸ್‌ನಲ್ಲಿ ಕೇಂದ್ರದ ಮಹತ್ವಾಕಾಂಕ್ಷಿ ನಿರ್ಧಾರಕ್ಕೆ ಅಪಸ್ವರ ವ್ಯಕ್ತವಾಗಿದೆ. ಇದರಿಂದಾಗಿ ಮಧ್ಯಮ ವರ್ಗದ ಜನರ ಅವಕೃಪೆಗೆ ಪಕ್ಷ ಪಾತ್ರವಾದೀತು ಎಂದು ಹಿರಿಯ ಮುಖಂಡರೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಒಬಿಸಿಗೂ ನೀಡಿ ಮೀಸಲು

ಮತ್ತೊಂಡೆಡೆ ಇತರ ಹಿಂದುಳಿದ ವರ್ಗ (ಒಬಿಸಿ)ಕ್ಕೂ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲು ನೀಡಬೇಕೆಂದು ಇತರ ಹಿಂದುಳಿದ ವರ್ಗದ ಪ್ರಮುಖ ನಾಯಕ, ಕಾಂಗ್ರೆಸ್ ಸಂಸದ ವಿ.ಹನುಮಂತ ರಾವ್ ಒತ್ತಾಯಿಸಿದ್ದಾರೆ. ನಮ್ಮ ವರ್ಗಕ್ಕೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಅವರು ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ ಒಬಿಸಿ ವರ್ಗ ಪ್ರಧಾನಿಯವರನ್ನು ಭೇಟಿ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ: ಕಠಿಣ ಕ್ರಮ ತೆಗೆದುಕೊಳ್ಳಲು ಶಿಂಧೆ ಆಗ್ರಹ
»ನಾಳೆ ಏರ್ ಇಂಡಿಯಾಕ್ಕೆ ಡ್ರೀಮ್‌ಲೈನರ್
»ವಿಶ್ವದ ಅತ್ಯಂತ ದ್ವೇಷಿಸುವ ನಗರಗಳ ಸಾಲಿಗೆ ದಿಲ್ಲಿ
»ಮನಮೋಹನ್ ಸಿಂಗ್ ದುರಂತ ನಾಯಕ: ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನಿಗೆ ಪ್ರಧಾನಿ ಕಾರ್ಯಾಲಯ ತರಾಟೆ
»ಮಹಿಳಾ ಸಬಲೀಕರಣಕ್ಕೆ ಎನ್‌ಜಿಒದಿಂದ ‘ಉಮ್ಮೀದ್ ಕಿ ರಿಕ್ಷಾ’ ಯೋಜನೆಗೆ ಚಾಲನೆ
»ಸೊಹ್ರಾಬುದ್ದಿನ್ ನಕಲಿ ಎನ್‌ಕೌಂಟರ್ ಪ್ರಕರಣ: ಸಮಸ್ಯೆಯ ಸುಳಿಯಲ್ಲಿ ಮತ್ತಷ್ಟು ಪೊಲೀಸರು, ರಾಜಕಾರಣಿಗಳು
»ಪ.ಬಂಗಳಾದಲ್ಲಿ ದಿಢೀರ್ ಪ್ರವಾಹ: ಕೊಚ್ಚಿ ಹೋದ ಬಸ್, 100 ಮಂದಿ ನಾಪತ್ತೆ
»ಶಾಕಿಂಗ್ ರ್ಯಾಗಿಂಗ್‌ ವಿಡಿಯೋ: ಕೇಸ್‌ ದಾಖಲಿಸದ ಪೊಲೀಸ್‌
»ಸೆ 26ರಿಂದ ಯುಎಸ್ ವೀಸಾ ಶುಲ್ಕ ಪಾವತಿ ಸರಳ
»‘ಕೋಲ್’ಹಲ: ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ
»ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೂರು ಪ್ರತ್ಯೇಕ ತಂಡಗಳಿಂದ ತನಿಖೆ; ಆರು ಮಂದಿಯ ಬಂಧನ
»ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
»ಎಸ್ಸಿ-ಎಸ್ಟಿ ಭಡ್ತಿ ಮೀಸಲು ಮಸೂದೆ ಮಂಡನೆ:ರಣರಂಗವಾದ ರಾಜ್ಯಸಭೆ
»ಪ್ರಧಾನಿ ಸಿಂಗ್ ದುರಂತ ನಾಯಕ: ವರದಿಗೆ ಗಂಟುಬಿದ್ದ ವಾಷಿಂಗ್ಟನ್ ಪೋಸ್ಟ್
»ಹಿರಿಯರ ಕಿತ್ತಾಟ:ಸದಸ್ಯರಿಂದಲೇ ಮೇಲ್ಮನೆ ಗೌರವ ಮಣ್ಣುಪಾಲು| ಎಸ್‌ಪಿ-ಬಿ‌ಎಸ್‌ಪಿ ಸಂಸದರ ನಡುವೆ ಗುದ್ದಾಟ
»ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
»23 ಭಾರತೀಯ ನಾವಿಕರಿದ್ದ 'ಅಬುಧಾಬಿ ಸ್ಟಾರ್‌' ನೌಕೆ ಅಪಹರಣ: ನೈಜೀರಿಯಾ ನೌಕಾಪಡೆ ಕಾರ್ಯಾಚಾರಣೆ - ನಾವಿಕರ ಸುರಕ್ಷಿತ ಬಿಡುಗಡೆ
»ಶ್ರೀಲಂಕಾ ಪ್ರವಾಸಿಗರ ಮೇಲಿನ ದಾಳಿಗೆ ಜಯಾ ಹೊಣೆ: ಕರುಣಾನಿಧಿ
»ಬಳ್ಳಾರಿ ಲೋಕಸಭಾ ಕ್ಷೇತ್ರ: ಸೆ.15ರಂದು ಮರು ಮತ ಎಣಿಕೆ
»ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 52ಮಂದಿ ಬಲಿ, 70ಗಾಯಾಳು
»ಉದ್ಬವ್ ಹೇಳಿಕೆಯನ್ನು ತಳ್ಳಿ ಹಾಕಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ
»ರಾಜ್ಯಸಭೆಯಲ್ಲಿ ಕೈ ಕೈ ಮಿಲಾಯಿಸಿದ ಸಂಸದರು
»ತೆಲಂಗಾಣ ರಾಜ್ಯ ರಚನೆಗೆ ಬಿಜೆಪಿ ಬದ್ಧ: ಸುಷ್ಮಾ
»ಭಾರತದ 'ಮೌನ' ಪ್ರಧಾನಿ ದುರಂತ ವ್ಯಕ್ತಿ: ವಾಷಿಂಗ್ಟನ್ ಪೋಸ್ಟ್
»ಪ್ರಜಾಪತಿ ನಕಲಿ ಎನ್‌ಕೌಂಟರ್ : ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಆರೋಪ ಪಟ್ಟಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri