ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮೈಸೂರು ರಸ್ತೆ ಸಂಚಾರ ನಿತ್ಯ ನರಕ: ಆಮೆಗತಿಯ ವಾಹನ ಸಂಚಾರ

ಬೆಂಗಳೂರು: ಸದಾ ದೂಳುಮಯವಾಗಿರುವ ಈ ವೃತ್ತವನ್ನು ಕೂಡುವ ಎಲ್ಲ ರಸ್ತೆಗಳಲ್ಲೂ ಆಮೆಗತಿಯ ವಾಹನ ಸಂಚಾರ; ಪಾದಚಾರಿಗಳು ನಡೆದಾಡಲು ಎಡೆಯೇ ಇಲ್ಲದಿರುವಂತೆ ಕಿರಿದಾಗಿರುವ ರಸ್ತೆಗಳು; ದೂಳು ಮತ್ತು  ವಿಲೇವಾರಿಯಾಗದ ತ್ಯಾಜ್ಯದ ದುರ್ನಾತದಿಂದಾಗಿ ಸದಾ ಮೂಗು ಮುಚ್ಚಿಕೊಂಡೇ ಸಂಚರಿಸುವ ಪ್ರಯಾಣಿಕರು!


-ಇದು ನಗರದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನ ಚಿತ್ರಣ. ಬಿಡಿ‌ಎ, ಬಿಬಿ‌ಎಂಪಿ ಮತ್ತು ಮೆಟ್ರೊ ರೈಲು ಕಾಮಗಾರಿಗಳು ಒಟ್ಟೊಟ್ಟಿಗೆ ನಡೆದಿರುವ ಬಹುತೇಕ ಕಡೆ ಮೂಲಸೌಕರ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವುದಿಲ್ಲ ಎಂಬ ಜನತೆಯ ಆರೋಪವನ್ನು ಸಾಬೀತುಪಡಿಸುವಂತಿದೆ ಈ ಜಂಕ್ಷನ್.

ತುಮಕೂರು, ಕನಕಪುರ ಮತ್ತು ಮೈಸೂರಿಗೆ ಸಂಪರ್ಕ ಕಲ್ಪಿಸುವ ಈ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಪ್ರತಿನಿತ್ಯ ನಾಲ್ಕು ಲಕ್ಷಕ್ಕೂ ಅಧಿಕ ವಾಹನಗಳು ಹಾದು ಹೋಗುತ್ತವೆ. ಸೂರ್ಯೋದಯಕ್ಕೂ ಮೊದಲೇ  ಆರಂಭವಾಗುವ ವಾಹನ ಸಂಚಾರ ದಟ್ಟಣೆ ಮಧ್ಯರಾತ್ರಿಯಾದರೂ ಮುಗಿಯುವುದಿಲ್ಲ. ಪರಿಸ್ಥಿತಿ ಹೀಗಿದ್ದರೂ ಸ್ಥಳೀಯ ಸಂಸ್ಥೆಗಳು ಕೈಗೊಳ್ಳುವ ಕಾಮಗಾರಿಗಳು ನಾಗರಿಕರ ಹಿತಾಸಕ್ತಿಯನ್ನು ಸಂಪೂರ್ಣ ಕಡೆಗಣಿಸಿ ತೆವಳುತ್ತಲೇ ಸಾಗಿವೆ.


ಸಮಸ್ಯೆಗಳೇನು?: ನಾಲ್ಕು ರಸ್ತೆಗಳು ಕೂಡುವ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಎರಡು ಹಂತದ ಮೇಲ್ಸೇತುವೆ ಕಾಮಗಾರಿ ಚಾಲನೆಯಲ್ಲಿದ್ದು, ಇದರೊಂದಿಗೆ ಮೆಟ್ರೊ ಕಾಮಗಾರಿಯೂ ಪ್ರಗತಿಯಲ್ಲಿದೆ.

ಹೊಸಕೆರೆಹಳ್ಳಿ, ನೈಸ್ ರಸ್ತೆ ಕಡೆಯಿಂದ ಬರುವ ವಾಹನಗಳು ಒಂದು ಮೇಲ್ಸೇತುವೆಯ ಮೂಲಕ ಮಾಗಡಿ ರಸ್ತೆಗೆ ಸಂಪರ್ಕ ಪಡೆದರೆ, ಮತ್ತೊಂದು ಮೇಲ್ಸೇತುವೆ ವಿಜಯನಗರ ರಸ್ತೆಯಿಂದ ಬರುವ ವಾಹನಗಳಿಗೆ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ. ಸದ್ಯಕ್ಕೆ ಈ ಕಾಮಗಾರಿ ಸ್ಥಗಿತಗೊಂಡಿದೆ. ಮೊದಲ ಹಂತದ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ನಿತ್ಯ ವಾಹನ ದಟ್ಟಣೆ ಸಮಸ್ಯೆ ಕಾಡುತ್ತಿದೆ. ಇನ್ನು ಜಂಕ್ಷನ್‌ನಿಂದ ಸುಮಾರು 2 ಕಿ.ಮೀ. ದೂರದವರೆಗೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಹೊಂಡ ಬಿದ್ದಿವೆ. ಇದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.


 ವಿಳಂಬಗೊಂಡ ಕಾಮಗಾರಿಯೊಂದಿಗೆ ಹದಗೆಟ್ಟ ರಸ್ತೆ ಇರುವುದರಿಂದ ಪ್ರಯಾಣಿಕರಿಗೆ ಗಾಯದ ಮೇಲೆ ಬರ ಎಳೆದಂತಾಗಿದೆ. ದ್ವಿಚಕ್ರ, ನಾಲ್ಕು ಚಕ್ರವಾಹನಗಳು, ಬಿ‌ಎಂಟಿಸಿ ಮತ್ತು ಕೆ‌ಎಸ್‌ಆರ್‌ಟಿಸಿ ಬಸ್‌ಗಳು ಹೊಂಡ ಬಿದ್ದ ರಸ್ತೆಯಲ್ಲೇ ಸಾಗರೋಪಾದಿಯಲ್ಲಿ ಸಂಚರಿಸುತ್ತವೆ. ವಾಹನ ದಟ್ಟಣೆ ವೇಳೆಯಲ್ಲಂತೂ ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಈ ಒಂದೇ ರಸ್ತೆಯಲ್ಲಿ ಮೂರು ಕಾಮಗಾರಿಗಳು ನಡೆಯುತ್ತಿರುವುದರಿಂದ ಕಬ್ಬಿಣದ ಸರಳುಗಳು ಸೇರಿದಂತೆ ಕಾಮಗಾರಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಲಾಗಿದೆ. ಇದರಿಂದ ಪಾದಚಾರಿ ಮಾರ್ಗಕ್ಕೂ ಕಲ್ಲು ಬಿದ್ದಿದೆ. ಇನ್ನು, ಕಸದ ರಾಶಿಯನ್ನು ಅಲ್ಲಲ್ಲಿ ಹಾಕಲಾಗಿದೆ.

`ಹೊಂಡ, ಕಲ್ಲುಗಳ ರಾಶಿ ಇರುವ ಈ ರಸ್ತೆಯಲ್ಲಿ ಬಿ‌ಎಂಟಿಸಿ ಬಸ್‌ಗಳು ಪಂಕ್ಚರ್ ಆಗಿ ನಿಲ್ಲುವ ಪ್ರಕರಣಗಳು ಸಾಮಾನ್ಯವಾಗಿ ಬಿಟ್ಟಿವೆ. ಒಂದು ಬಸ್ ಚಲಿಸಲು ಮಾತ್ರ ಸ್ಥಳಾವಕಾಶವಿರುವ ಈ ರಸ್ತೆಯಲ್ಲಿ ವಾಹನಗಳು ಪಂಕ್ಚರ್ ಆಗಿ ನಿಂತು ಬಿಟ್ಟರೆ, ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ. ವಾಹನವನ್ನು ಬೇರೆಡೆಗೆ ಸಾಗಿಸುವವರೆಗೂ ಸಂಚಾರ ದಟ್ಟಣೆ ಇದ್ದೇ ಇರುತ್ತದೆ` ಎಂದು ಸಂಚಾರ ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿದರು.


ಕಾಮಗಾರಿ ಬಗ್ಗೆ: `86.75 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಮೇಲ್ಸೇತುವೆಗಳ ಕಾಮಗಾರಿಯನ್ನು ಮೂರು ವರ್ಷಗಳ ಹಿಂದೆಯೇ ಕೈಗೆತ್ತಿಕೊಳ್ಳಲಾಗಿತ್ತು. ಮೊದಲನೇ ಹಂತದ ಮೇಲ್ಸೇತುವೆ 470 ಮೀಟರ್ ಉದ್ದವಿದ್ದು, ಅದರ ಕಾಮಗಾರಿ ಕೆಲವೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಎರಡನೇ ಹಂತದ ಮೇಲ್ಸೇತುವೆ 960 ಮೀಟರ್ ಉದ್ದವಿದ್ದು, ಪಿಲ್ಲರ್‌ಗಳನ್ನು ಹಾಕಲಾಗಿದೆ. ಅದರ ಕಾಮಗಾರಿಯನ್ನು ಸದ್ಯದಲ್ಲೇ ಕೈಗೆತ್ತಿಕೊಳ್ಳಲಾಗುವುದು` ಎಂದು ಬಿಡಿ‌ಎ ಅಧಿಕಾರಿಯೊಬ್ಬರು ತಿಳಿಸಿದರು.

ಕಾಮಗಾರಿ ಚಾಲ್ತಿಯಿದ್ದೆಡೆ ನಿರ್ಲಕ್ಷ್ಯ?

ಬನಶಂಕರಿ, ಜಯನಗರ, ರಾಜಾಜಿನಗರ,  ಸಿಟಿ ಮಾರುಕಟ್ಟೆ ಸೇರಿದಂತೆ ಮೆಟ್ರೊ, ಬಿಬಿ‌ಎಂಪಿ ಮತ್ತು ಬಿಡಿ‌ಎ ವತಿಯಿಂದ ನಡೆಯುತ್ತಿರುವ ಕಾಮಗಾರಿ ಸ್ಥಳಗಳಲ್ಲಿ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ, ಸಮರ್ಪಕ ರಸ್ತೆಗಳು ಇಲ್ಲದೇ ಇರುವುದು ಸಾಮಾನ್ಯವಾಗಿದೆ. ಇದಕ್ಕೆ ನಾಯಂಡಹಳ್ಳಿ ಜಂಕ್ಷನ್ ಹೊರತಲ್ಲ. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಬಿಬಿ‌ಎಂಪಿ ರಸ್ತೆ ನಿರ್ವಹಣೆ, ತ್ಯಾಜ್ಯ ವಿಲೇವಾರಿಯಂತಹ ಕಾರ್ಯ ಕೈಗೊಳ್ಳದೆ ಜವಾಬ್ದಾರಿ ಮರೆತಂತಿದೆ.

ಈ ಬಗ್ಗೆ ಮಾತನಾಡಿದ ಮೇಯರ್ ಡಿ.ವೆಂಕಟೇಶಮೂರ್ತಿ, `ಇತ್ತೀಚೆಗೆ ಬಿ‌ಎಂಟಿ‌ಎಫ್ ಅಧಿಕಾರಿಗಳು ಎಂಜಿನಿಯರ್‌ಗಳ ಮೇಲೆ ಒಂದಲ್ಲ ಒಂದು ಕೇಸು ಜಡಿಯುತ್ತಿರುವುದರಿಂದ ಕರ್ತವ್ಯ ಪಾಲನೆಗೆ ಸಮಸ್ಯೆಯಾಗಿರುವುದು ನಿಜ. ಕಾಮಗಾರಿ ಸ್ಥಳದಲ್ಲಿ ಪರಿಸರ ಸಂರಕ್ಷಿಸುವಂತಹ ಕಾರ್ಯ ಮಾಡಬೇಕಾಗಿರುವುದು ಎಂಜಿನಿಯರ್‌ಗಳ ಜವಾಬ್ದಾರಿ. ಸದ್ಯದಲ್ಲೇ ಬೆಂಗಳೂರು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಕರೆದು ಎಲ್ಲ ಅಧಿಕಾರಿಗಳಿಗೆ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗುತ್ತದೆ` ಎಂದು ಹೇಳಿದರು.

`ನಿರ್ದೇಶನ ಪಾಲಿಸುತ್ತಿಲ್ಲ`

ಯಾವ ಭಾಗದಲ್ಲಿ ಕಾಮಗಾರಿ ನಡೆಯುತ್ತಿದೆಯೋ ಆ ಭಾಗದಲ್ಲಿ ಸಹಜವಾಗಿ ದೂಳು ಏಳುವುದರಿಂದ ದೊಡ್ಡ ಪ್ರಮಾಣದಲ್ಲಿ ರಸ್ತೆಗೆ ನೀರು ಚುಮುಕಿಸಬೇಕು ಎಂಬ ನಿರ್ದೇಶನವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುತ್ತಾ ಬಂದಿದೆ. ಆದರೆ ಇದನ್ನು ಸಂಬಂಧಪಟ್ಟವರು ಸಮರ್ಪಕವಾಗಿ ಪಾಲಿಸುತ್ತಿಲ್ಲ ಎಂಬುದು ನಾಯಂಡಹಳ್ಳಿ ಸೇರಿದಂತೆ ಇತರೆ ಕಡೆ ನಡೆಯುತ್ತಿರುವ ಕಾಮಗಾರಿಗಳ ಸ್ಥಳವನ್ನು ಒಮ್ಮೆ ನೋಡಿದರೆ ತಿಳಿದು ಬರುತ್ತದೆ. ಜನರ ಆರೋಗ್ಯದ ಜತೆ ಆಟವಾಡುವ ಹಕ್ಕು ಯಾರಿಗೂ ಇಲ್ಲ. ಹಾಗಾಗಿ ಪಾಲಿಕೆಯು ನೀರಿನ ಟ್ಯಾಂಕರ್‌ಗಳಿಗೆ ನೀರು ಸಿಂಚನ ಕೊಳವೆಗಳನ್ನು ಅಳವಡಿಸಿ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮೂರು ದಿನಗಳಿಗೊಮ್ಮೆ ನೀರು ಚುಮುಕಿಸುವ ಕಾರ್ಯ ಕೈಗೊಳ್ಳಬೇಕು.

-ಎ.ಎಸ್.ಸದಾಶಿವಯ್ಯ, ರಾಜ್ಯ  ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷ


`ಕಟ್ಟುನಿಟ್ಟಿನ ಆದೇಶ ಅಗತ್ಯ`

ಪರಿಸರದಲ್ಲಿ ಸುಮಾರು ಹತ್ತು ಬಗೆಯ ದೂಳಿನ ಕಣಗಳಿವೆ. ಕೆಲವು ಬಗೆಯ ದೂಳು ದಪ್ಪನೆಯ ಕಣಗಳನ್ನು ಹೊಂದಿರುವುದರಿಂದ ನಿರ್ಜೀವ ವಸ್ತುಗಳನ್ನು ಸೇರುತ್ತವೆ. ಆದರೆ, ಸಿಮೆಂಟ್‌ನ ದೂಳು 3ರಿಂದ 4 ಮೈಕ್ರಾನ್‌ಗಿಂತ ಕಡಿಮೆ ತೂಕ ಹೊಂದಿರುವುದರಿಂದ ಬಹಳ ಸೂಕ್ಷ್ಮವಾಗಿರುತ್ತದೆ. ಇದರೊಂದಿಗೆ ವಾಹನಗಳ ಕಪ್ಪು ಹೊಗೆ ಸೇರಿಕೊಂಡು ಶ್ವಾಸಕೋಶವನ್ನು ಹಾಳುಮಾಡುತ್ತದೆ. ನಾಗರಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಬಿಬಿ‌ಎಂಪಿಯು ಕಾಮಗಾರಿ ಗುತ್ತಿಗೆದಾರರಿಗೆ ಕೆಲವೊಂದು ನಿಯಮಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಬಿಡಿ‌ಎ ಮತ್ತು ಬಿಬಿ‌ಎಂಪಿ ಎಂಜಿನಿಯರ್‌ಗಳು ಸದಾ ಗುತ್ತಿಗೆದಾರರ ಹಿತಾಸಕ್ತಿಯನ್ನು ಕಾಪಾಡುತ್ತಾರೆ ವಿನಃ ನಾಗರಿಕರದ್ದಲ್ಲ. ಕಾಮಗಾರಿಗಳಿಂದ ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಸರ್ಕಾರಕ್ಕೆ ತಿಳಿ ಹೇಳಲು ಮಾಲಿನ್ಯ ನಿಯಂತ್ರಣ ಮಂಡಳಿಗೂ ಸಾಧ್ಯವಾಗಿಲ್ಲ.
 -ಅ. ನ. ಯಲ್ಲಪ್ಪರೆಡ್ಡಿ, ಪರಿಸರವಾದಿ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಪ್ರಜಾವಾಣಿ
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri