ಸೋಮವಾರ, 23-09-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಶಿಕ್ಷಕರ ದಿನಾಚರಣೆ ಮತ್ತು ಡಾ. ಎಸ್ ರಾಧಾಕೃಷ್ಣನ್

ಗಲ್ಫ್ ಕನ್ನಡಿಗ ನ್ಯೂಸ್ ಓದುಗರೆಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.

ಸೆಪ್ಟೆಂಬರ್ 5ನ್ನು ಭಾರತೀಯರಾದ ನಾವು ಬಹಳ ಸಂಭ್ರಮದಿಂದ ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತೇವೆ. 1962-1966ರ ಅವಧಿಯಲ್ಲಿ ಭಾರತದ ರಾಷ್ಟ್ರಪತಿಗಳಾಗಿದ್ದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರು.

ಶಿಕ್ಷಕರಾಗಿದ್ದ ‘ಡಾ. ಸರ್ವೆಪಲ್ಲಿ ರಾಧಾಕೃಷ್ಣನ್’ 1962 ರಲ್ಲಿ ಭಾರತದ ರಾಷ್ಟ್ರಪತಿಯಾದಾಗ ಇವರ ವಿಧ್ಯಾರ್ಥಿಗಳು ಮತ್ತು ಸಹಪಾಟಿಗಳು ಸೆಪ್ಟೆಂಬರ್ 5 ರಂದು ತಮ್ಮ ಹುಟ್ಟಿದ ದಿನವನ್ನು ಆಚರಿಸಲು ಹೇಳಿದಾಗ ತಮ್ಮ ಶಿಕ್ಷಕ ಹುದ್ದೆಯನ್ನು ಅಪಾರ ಗೌರವಿಸುತಿದ್ದ ರಾಧಾಕೃಷ್ಣನ್ ನೀವು ನನ್ನ ಹುಟ್ಟಿದ ದಿನವನ್ನು ಬೇರೆಯಾಗಿಯೇ ಆಚರಿಸುವುದಾದರೆ ಇಂದಿನಿಂದ “ಸೆಪ್ಟೆಂಬರ್ 5?ನ್ನು ಶಿಕ್ಷಕರ ದಿನವನ್ನಾಗಿ ಆಚಿರಿಸಲು ಹೇಳಿದರು.೧೯೬೨ರಿಂದ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಶಿಕ್ಷಣ ಕ್ಷೇತ್ರಕ್ಕೆ ಕೈಕೊಂಡಿರುವ ಸಾಧನೆಗಳಿಂದ ಇವತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ.

ಡಾ! ರಾಧಾಕೃಷ್ಣನ್ ರವರು ೧೯೬೨ರ ಅವಧಿಯಲ್ಲಿ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದರು,ಅವರ ಪೂರ್ವಾಧಿಕಾರಿಯಾಗಿ ಡಾ.ಬಾಬು ರಾಜೇಂದ್ರ ಪ್ರಸಾದ್ ಹಾಗೂ ಉತ್ತರಾಧಿಕಾರಿಯಾಗಿ ಡಾ.ಜಾಕಿರ್ ಹುಸೇನ್ ಅವರು ಅಧಿಕಾರ ವಹಿಸಿದ್ದನ್ನು ನೆನಪಿಸಬೇಕಾಗುತ್ತದೆ.

ಜನನ ಹಾಗೂ ವಿದ್ಯಾಭ್ಯಾಸ

‘ಸರ್ವಪಲ್ಲಿ ರಾಧಾಕೃಷ್ಣನ್’ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ ತಿರುತ್ತಣಿ ಎಂಬಲ್ಲಿ ಸೆಪ್ಟಂಬರ್ 5, 1888 ರಲ್ಲಿ ಸರ್ವಪಲ್ಲಿ ಎನ್ನವುದು ಮನೆತನದ ಹೆಸರಾದರೆ, ರಾಧಾಕೃಷ್ಣನ್ ಎನ್ನುವುದು ಅವರ ತಂದೆ-ತಾಯಿ ಇತ್ತ ಮುದ್ದಿನ ಹೆಸರು.ತಂದೆ ಸರ್ವಪಲ್ಲಿ ವೀರಸ್ವಾಮಿ ಅವರು ಜಮೀನ್ದಾರರ ಬಳಿ ದಿನಗೂಲಿ ನೌಕರಿ ಮಾಡಿ ಮಗನ ಪಾಲನೆಯಲ್ಲಿ ತೊಡಗಿದ್ದರು,ಬರುವ ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟವಾದ ಸಂದರ್ಭದಲ್ಲಿ ‘ರಾಧಾಕೃಷ್ಣನ್‌’ಗೆ ಓದಬೇಕೆನ್ನುವ ಅಪಾರ ಹಂಬಲ, ‘ಸ್ಕಾಲರ್‌ಶಿಪ್ ಹಣ’ದಲ್ಲಿಯೇ ಎಲ್ಲ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್, ಮದ್ರಾಸ್‌ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್‌ನಲ್ಲಿ ತತ್ವಜ್ಞಾನ ವಿಷಯದಲ್ಲಿ ‘ಬಿ.ಎ’ ಮತ್ತು ‘ಎಂ.ಎ. ಪದವಿ’ಗಳನ್ನು ಸಂಪಾದಿಸಿಕೊಂಡರು.

ವೆಲ್ಲೂರಿನಲ್ಲಿರುವಾಗಲೇ ಕೇವಲ 16 ನೇ ವಯಸ್ಸಿನಲ್ಲಿ ಶಿವಕಾಮಮ್ಮ ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡ ರಾಧಾಕೃಷ್ಣನ್, 1909 ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಹಾಯಕ ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ ಸೇವೆಯನ್ನಾರಂಭಿಸಿದರು.

ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ, ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ, ಪ್ಲೂಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಹಂತ ಹಂತವಾಗಿ ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ ಮೈಸೂರು ವಿಶ್ವವಿದ್ಯಾಲಯದ ತತ್ವಜ್ಞಾನ ವಿಭಾಗದ ಉಪನ್ಯಾಸಕರಾಗಿ ಆಯ್ಕೆಯಾದರು. 1975 ರ ಎಪ್ರಿಲ್ 17ರಂದು ನಿಧನರಾದರು.

ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ,ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ.

ಈ ಶಿಕ್ಷಕರ ದಿನಾಚರನೆಯಿಂದ ಭಾರತೀಯರಾದ ನಮಗೆ ಡಾ.ರಾಧಾಕೃಷ್ಣನ್ ರವರ ನಡೆದು ಬಂದ ದಾರಿ ಜೀವನ ಶೈಲಿ ಮತ್ತು ಅವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು ನಮಗೆ ಮಾರ್ಗದರ್ಶನವಾಗಲಿ ಎಂದು ಹಾರೈಸೋಣ !

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕೃಪೆ: ರಫೀಕ್ ದಲ್ಕಾಜೆ, ಕೋಲ್ಪೆ ವಿಕೆ ನ್ಯೂಸ್
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-09-05

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಶಿಕ್ಷಕರ ದಿನಾಚರಣೆ ಮತ್ತು ಡಾ. ಎಸ್ ರಾಧಾಕೃಷ್ಣನ್
» ಕುಡಿದದ್ದು ಶರಬತ್ತು, ತಂದಿತ್ತು ಆಪತ್ತು !
»ಹಣೆಬರಹಕ್ಕೆ ಹೆದರಲಿಲ್ಲ, ಅದಕ್ಕೇ ಎತ್ತಿದಳು ಮಂಗಳಾರತಿ!
» ಊಹಾಪೋಹ ಮಹಾಪೂರದಲ್ಲಿ ಕೊಚ್ಚಿಹೋಗುವ ಮುನ್ನ...
»ಅಳುವಿನ ಕಾರಣ...
»ಕುಟ್ಟ ಬ್ಯಾರಿಯ ಪಂಜ ಪೇಟೆ...
» ವರ್ಣ ವ್ಯವಸ್ಥೆ: ಸಂಪೂರ್ಣ ಅವ್ಯವಸ್ಥೆ...
» ನಮ್ಮತಾರೆಯರಿಗೆ ಮೇಲ್ಮನೆಯಲ್ಲಿ ಏನು ಕೆಲಸ?...
»ವಧುವಿನ ದಕ್ಷಿಣೆ - 'ವರದಕ್ಷಿಣೆ'....
» ಗರುಡನ ಮಾರ್ಗ...
» ಹೃದಯದಾಳದ ಮಾತು....
»ಹೆಗಡೆ 86, ನೆನಪು ನೂರಾರು: ಜಾತಿ-ಹಣ ಮುಖ ನೋಡದೆ, ರಾಜಕೀಯ ಮಾಡಿದ್ರು...
» ನ್ಯಾಯಾಂಗದ ಗಾಜಿನ ಮನೆಗೆ ಕಲ್ಲು ಹೊಡೆದ ಮಮತಾ
» ಬೇರು ಒಣಗಿದ ಮರ ಗಟ್ಟಿಯಾಗಿ ನಿಂತೀತೇ?....
»ಜೆಪಿ ಹಾದಿಯಲ್ಲಿ ಅಣ್ಣಾ ನಡಿಗೆ ಸಾಧ್ಯವೇ? ...
»ಜಯಕಿರಣ ಪತ್ರಿಕೆಯಲ್ಲಿ ಬ೦ದತಹ ಯುವತಿಯೊಬ್ಬಳ ಮನದಾಳದ ಮಾತು...
»ಅಂತರಂಗದ ದನಿಗೆ ಕಿವುಡಾದವರ ನಡುವೆ...
»ದೇಶಪ್ರೇಮಕ್ಕಿಂತ ದೊಡ್ಡದೇ ಧರ್ಮಪ್ರೇಮ?...
»ಕತ್ತು ಕತ್ತರಿಸುವ ಸಿನಿಮಾಗಳ ಸಂದೇಶವೇನು?...
» ಪಾತ್ರೆಯೊಳಗಿನ ಮೀನು....
»ಸಮಾನತೆ...
» ಹರ್ಷದ ದಾರಿ
»ವೈಧವ್ಯವೆಂಬ ವಿಷವರ್ತುಲದಿಂದ ಇವರಿಗೆ ಬಿಡುಗಡೆ ಎಂದು?
»ಅಂಗಡಿಯಲ್ಲಿ ದೊರಕಿದ ಪವಾಡ...
»ದೊಡ್ಡ ಚಳವಳಿಗಳ ಕಾಲ ಮುಗಿದುಹೋಗಿದೆ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri