ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!

ಬೆಂಗಳೂರು, ಸೆ.5: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ತನ್ನ ಅವ್ಯವಹಾರಗಳನ್ನು ಮುಚ್ಚಿಕೊಳ್ಳಲಾಗದೆ ಸಾರ್ವಜನಿಕರ ಮನಸ್ಸನ್ನು ಬೇರೆಡೆ ಸೆಳೆದು ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಅಮಾಯಕ ಮುಸ್ಲಿಮ್ ಯುವಕರನ್ನು ಉಗ್ರರ ಪಟ್ಟಕಟ್ಟಿ ಬಂಧಿಸಿದೆ ಎಂದು ಮಾಜಿ ಶಾಸಕ ಎ.ಕೆ. ಸುಬ್ಬಯ್ಯ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.29ರ ಬೆಳಗ್ಗೆ 8.30ಕ್ಕೆ ಜೆ.ಸಿ. ನಗರದ ಮನೆ ಯೊಂದರಲ್ಲಿ 5 ಜನ ಯುವ ಕರನ್ನು ಬಂಧಿಸಿರುವುದು ಸ್ಪಷ್ಟವಾಗಿದೆ. ಆದರೆ, ಪೊಲೀಸರು ನೀಡಿರುವ ಎಫ್‌ಐಆರ್‌ನಲ್ಲಿ ಅದೇ ದಿನ ಬೆಳಗ್ಗೆ 11ಕ್ಕೆ ಬಸವೇಶ್ವರನಗರದ ನಿವಾಸಿ ಪತ್ರಿಕೆಯ ಅಂಕಣಕಾರರೊಬ್ಬರ ಕೊಲೆಗೆ ಸಂಚು ರೂಪಿಸುತ್ತಿದ್ದ ವೇಳೆ ಬಂಧಿಸಿರುವುದಾಗಿ ತಿಳಿಸಲಾಗಿದೆ. ಈ ವರದಿಯಲ್ಲಿ ಸಂಶಯಗಳಿದ್ದು, ಪ್ರಕರಣದ ಬಗ್ಗೆ ವಿಶೇಷ ತನಿಖಾ ಸಂಸ್ಥೆ ಯೊಂದರ ಮೂಲಕ ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ಒತ್ತಾಯಿಸಿದರು.

15 ಶಂಕಿತ ಉಗ್ರರನ್ನು ಬಂಧಿಸಿರುವ ಪೊಲೀಸರು ಎಫ್‌ಐಆರ್ ವರದಿಯಲ್ಲಿನ ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ, ಆದೆ ಪೊಲೀಸರು ಪತ್ರಿಕಾಗೋಷ್ಠಿ ನಡೆಸಿ ತನಿಖೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ರಾಜ್ಯದ ಪೊಲೀಸರು ಸಂಘ ಪರಿವಾರದ ಕೈ ಗೊಂಬೆಗಳಂತೆ ವರ್ತಿಸುತ್ತಿದ್ದು ಇವರಿಂದ ನಿಷ್ಪಕ್ಷವಾದ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ಸುಬ್ಬಯ್ಯ ಅನುಮಾನ ವ್ಯಕ್ತಪಡಿಸಿದರು.

ಕೆಲವು ಮಾಧ್ಯಮಗಳ ಅತಿ ರಂಜಿತ ವರದಿಯಿಂದ ಮುಸ್ಲಿಮ್ ಸಮುದಾಯ ಆತಂಕದ ವಾತವರಣದಲ್ಲಿ ಬದುಕುತ್ತಿದೆೆ. ಶಂಕಿತ ಉಗ್ರರು ಅಪರಾಧಿಗಳೆಂದು ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ಮಾಧ್ಯಮಗಳು ಆರೋಪಿಗಳನ್ನು ಅಪರಾಧಿಗಳೆಂಬಂತೆ ಬಿಂಬಿಸುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಶಂಕಿತ ಬಂಧಿತರು ಉಗ್ರರೇ ಆಗಿದ್ದಲ್ಲಿ ಅವರಿಗೆ ಕಠಿಣ ಶಿಕ್ಷೆಯಾಗಲಿ. ಅದೇ ರೀತಿ ಪ್ರಕರಣದ ಹಿಂದೆ ಪೊಲೀಸರು ತಪ್ಪಿತಸ್ಥರಾ ದರೆ ಅವರಿಗೂ ಕಠಿಣ ಶಿಕ್ಷೆಯಾಗ ಬೇಕು. ಮಾಜಿ ಮುಖ್ಯಮಂತ್ರಿಯೊಬ್ಬರು ಹಲವಾರು ಆರೋಪಗಳನ್ನು ಎದುರಿಸುತ್ತಿದ್ದು ಜೈಲಿಗೂ ಹೋಗಿ ಬಂದಿದ್ದಾರೆ. ಆದರೂ ತಾನು ಆರೋಪಿ ಮಾತ್ರ ಅಪರಾಧಿಯಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಸುಬ್ಬಯ್ಯ ಅಭಿಪ್ರಾಯಪಟ್ಟರು.

ಆ.26ರಂದು ಗುಪ್ತಚರ ಇಲಾಖೆಗೆ ನಂಬಲರ್ಹ ಮೂಲಗಳಿಂದ ಈ ಬಗ್ಗೆ ಮಾಹಿತಿ ಬಂದಿದ್ದು ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಈ ಬಗ್ಗೆ ಯಾವ ಸಂಸ್ಥೆ ಮಾಹಿತಿ ನೀಡಿದೆ ಎಂಬುದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದರು.ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಒಬ್ಬ ಮಾಧ್ಯಮದ ಸಂಪಾದಕ ಹಾಗೂ ಅಂಕಣಕಾರನ ಮೇಲೆ ಯಾವುದೇ ರೀತಿಯ ದ್ವೇಷ ಉಂಟಾಗುವುದಕ್ಕೆ ಸಾಧ್ಯವೆ ಇಲ್ಲ. ಬಂಧಿತನಾಗಿರುವ ಶಂಕಿತ ಉಗ್ರ ಮತಿಉರ್ ರೆಹಮಾನ್ ಸಿದ್ಧಿಕಿ, ತನ್ನ ಅಂಕಣವೊಂದರಲ್ಲಿ ವಿಶ್ವೇಶ್ವರ ಭಟ್ಟರ ವಿರುದ್ಧ ಬರೆದಿದ್ದು, ಇದರಿಂದ ಕುಪಿತಗೊಂಡ ಭಟ್ಟ ಆರೆಸೆಸ್ಸ್ ಜೊತೆಗೂಡಿ ಈ ರೀತಿಯ ಕಾರ್ಯಕ್ಕೆ ಮುಂದಾಗಿದ್ದಾರೆ.

ಇದೆ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ ಸರಕಾರ ಮುಸ್ಲಿಮರ ಮೇಲೆ ಗೂಬೆ ಕೂರಿಸಿ ಚುನಾವಣೆಯಲ್ಲಿ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಸುಬ್ಬಯ್ಯ ಆರೋಪಿಸಿದರು. ಬಂಧಿಸಲ್ಪಟ್ಟಿರುವ ಶಂಕಿತ ಉಗ್ರರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳುವುದನ್ನೆ ಸತ್ಯ ಎಂದು ಮಾಧ್ಯಮಗಳು ಅತಿರಂಜಿತವಾಗಿ ಪ್ರಕಟಿಸುತ್ತಿವೆ. ಇದರಿಂದ ಅಮಾಯಕ ಯುವಕರ ಬದುಕು ನಾಶವಾಗುತ್ತಿದೆ. ಆದರೆ, ಈ ಎಲ್ಲ ಆರೋಪಗಳನ್ನು ಮಾಧ್ಯಮಗಳ ಮುಂದೆ ಆರೋಪಿಗಳು ಒಪ್ಪಿಕೊಂಡರೆ ಅದು ಸತ್ಯ.

ಪೊಲೀಸರು ಹೇಳುವುದೆಲ್ಲ ಸತ್ಯವಲ್ಲ. ಬಂಧಿತ ಯುವಕರು ಯಾವುದೇ ರೀತಿಯ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲದಿದ್ದರೂ ಅವರಿಗೆ ಉಗ್ರರ ಪಟ್ಟ ಕಟ್ಟಲಾಗುತ್ತಿದೆ. ಇದು ಸಂವಿಧಾನ ವಿರೋಧಿ ಎಂದು ಅವರು ಕಿಡಿಗಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಕೋಮು ಸೌಹಾರ್ದ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ಜಿಲ್ಲಾಧ್ಯಕ್ಷ ಹೈದರ್ ಬೇಗ್, ದಸಂಸದ ಎನ್.ವೆಂಕಟೇಶ್, ಪಿಎಫ್‌ಐನ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಎಸ್‌ಡಿಪಿಐನ ಅಫ್ಸರ್‌ಪಾಷ,  ಸಾಮಾಜಿಕ ಕಾರ್ಯಕರ್ತ ಇರ್ಷಾದ್ ಅಹ್ಮದ್ ದೇಸಾಯಿ ಮತ್ತಿತರರು ಹಾಜರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ಪ್ರತಿಸ್ಪಂದನ
Saif, Udupi
2012-09-06
ಇನ್ನು ಕೆಲವೇ ದಿನಗಳಲ್ಲಿ BJP ಯ ಎಲ್ಲಾ ಮನೆ ಹಾಳು ಕೆಲಸ ಗಳು ಜನರ ಮುಂದೆ ಬರಲಿದೆ. ಇವರ ಹಲ್ಕಾ ಕೆಲಸಗಳನ್ನು ಮುಚ್ಚಿ ಹಾಕಲು ಈಗ ಒಂದು ಹೊಸ ನಾಟಕ. ಸಿಕ್ಕ ಸಿಕ್ಕ ಮುಸ್ಲಿಂ ಹುಡುಗರನ್ನು ಉಗ್ರ ಎಂದು ಜೈಲಿಗೆ ತಳ್ಳುವುದು. . ಪ್ರತಿಯೊಂದಕ್ಕೂ ಒಂದು ಕಾಲವಿದೆ. ಗುಜರಾತಿ ನ ಬಾಬು ಭಜರಂಗಿ ಮತ್ತು ಕೊಡ್ನಾನಿ ಯವರು ಬಹುಶ ಕನಸಿ ನಲ್ಲಿಯೂ ಎಣಿಸಿರಲಿಕ್ಕಿಲ್ಲ ಮುಂದೆ ಒಂದು ದಿನ ತಮ್ಮ ಪಾಪದ ಶಿಕ್ಷೆ ಯನ್ನು ಅನುಭವಿಸುತ್ತಾರೆ ಎಂದು. ಬರೋಬ್ಬರಿ ೧೨ ವರ್ಷದ ನಂತರ ವಾದರೂ ಅವರಿಗೆ ಶಿಕ್ಷೆ ಪ್ರಕಟ ವಾಯಿತು. ಮುಂದೆ ನರೇಂದ್ರ ಮೋದಿಯೂ ಬರುತ್ತಾನೆ ಇವರ ಹಿಂದೆ. ಅವನೂ ಎಲ್ಲಿಗೂ ಹೋಗಲ್ಲ. ನಿಜ ಸತ್ಯಕ್ಕೆ ಒಂದು ಕಾಲವಿದೆ. ದೇವರು ನೋಡುತ್ತಾ ಇದ್ದಾನೆ. ಎಲ್ಲ ಸತ್ಯ ಬೇಗನೆ ಬಹಿರಂಗವಾಗುತ್ತದೆ. ರಾಜಕಾರಣಿಗಳ ಹಿತಾಸಕ್ತಿ ಗಾಗಿ ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಉಗ್ರ ಎಂದು ಬಂದಿಸುತ್ತರೋ ಅವರೆಲ್ಲರಿಗೂ ಒಂದು ದಿನ ದೇವರ ಶಿಕ್ಷೆ ಪ್ರಕಟ ವಾಗುತ್ತದೆ. ಕಾದು ನೋಡೋಣ.
Saleem, Camp Buehring, Kuwait
2012-09-06
ಮೆಣಸಿನಕಾಯಿ ತಾಗ ಬಾರದ ಜಾಗಕ್ಕೆ ತಾಗುವ ಎಲ್ಲ ಲಕ್ಷಣಗಳು ಮತ್ತು ಮುಂಬರುವ ದಿನಗಳಲ್ಲಿ ಎಲ್ಲ ಜಾಗಕ್ಕೆ ಪಸರಿಸುವುದು ಖಂಡಿತ ಹುಬ್ಬಲ್ಲಿಯಾವ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri