ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಶಿಕ್ಷಕರ ಬಗ್ಗೆ ಸರಕಾರದ ಮನೋಧರ್ಮ ಬದಲಾಗಲಿ: ಮನಶಾಸ್ತ್ರಜ್ಞ ಗಂಗಾಧರ ಬೆಳ್ಳಾರೆ

ಬಂಟ್ವಾಳ, ಸೆ.5: ಶಾಲಾ ಶಿಕ್ಷಕರನ್ನು ಯಂತ್ರಗಳಂತೆ ನೋಡುವ ಸರಕಾರದ ಮನೋಧರ್ಮ ಬದಲಾಗಬೇಕಿದೆ. ಅವರ ಕಾರ್ಯಕ್ಷಮತೆಯನ್ನು ಗೌರವಿಸುವ ಕೆಲಸ ಸರಕಾರ ಹಾಗೂ ಜನಪ್ರತಿನಿಧಿಗಳಿಂದಾಗಬೇಕಿದೆ ಎಂದು ಪುತ್ತೂರಿನ ಮನಶಾಸ್ತ್ರಜ್ಞ ಗಂಗಾಧರ ಬೆಳ್ಳಾರೆ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕ ದಿನಾಚರಣೆ ಆಚರಣಾ ಸಮಿತಿಯ ಆಶ್ರಯದಲ್ಲಿ ಬುಧವಾರ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಗುರುವಂದನಾ -2012 ಕಾರ್ಯಕ್ರಮದಲ್ಲಿ ಅವರು ನುಡಿವಂದನೆ ನೀಡುತ್ತಿದ್ದರು.


ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುವುದಕ್ಕೆ ಶಿಕ್ಷಕರನ್ನು ಹೊಣೆಮಾಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ ಅವರು, ಶಿಕ್ಷಣದ ಬಗ್ಗೆ ಜ್ಞಾನವಿಲ್ಲದ ರಾಜಕೀಯ ನಾಯಕರು ಮಕ್ಕಳ ಹಿತಾಸಕ್ತಿಗೆ ಪೂರಕವಾದ ಶಿಕ್ಷಣ ನೀತಿಗಳನ್ನು ರೂಪಿಸುವಲ್ಲಿ ಸೋತಿ ದ್ದಾರೆ. ಕಾಲಕಾಲಕ್ಕೆ ಆಗಬೇಕಾದ ಪಠ್ಯಪುಸ್ತಕಗಳ ಬದಲಾವಣೆಯೇ ನಡೆಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.


ಮಕ್ಕಳು ಶಾಲೆಯಲ್ಲಿ ಕಡಿಮೆ ಅಂಕ ಪಡೆದುದಕ್ಕೆ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ಪೋಷಕರ ನಿಲುವನ್ನು ಖಂಡಿಸಿದ ಅವರು, ಈ ಆರೋಪವನ್ನು ಹೊರಿಸುವ ಮೊದಲು ಪೋಷಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕೆಂದು ತಿಳಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನು ಬಂಟ್ವಾಳ ಶಾಸಕ ಬಿ.ರಮಾನಾಥ ರೈ ಉದ್ಘಾಟಿಸಿದರು. ವೇದಿಕೆಯಲ್ಲಿ ಬಂಟ್ವಾಳ ಪುರಸಭಾ ಅಧ್ಯಕ್ಷ ಬಿ.ದಿನೇಶ್ ಭಂಡಾರಿ, ತಾ.ಪಂ. ಉಪಾಧ್ಯಕ್ಷ ದಿನೇಶ್ ಅಮ್ಟೂರು, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಸಂತೋಷ್‌ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಗಿರಿಜ, ನಳಿನಿ ಶೆಟ್ಟಿ, ಮಮತಾ ಗಟ್ಟಿ, ಚೆನ್ನಪ್ಪ ಕೋಟ್ಯಾನ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ, ಬಂಟ್ವಾಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ತಾ.ಪಂ.ಸದಸ್ಯ ಆನಂದ ಶಂಭೂರು, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಕೆ., ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಫ್ರಾನ್ಸಿಸ್ ಡೇಸಾ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮತ್ತಿತರರಿದ್ದರು.

  
ಗುರುವಂದನಾ ಕಾರ್ಯಕ್ರಮದಲ್ಲಿ 43 ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಕನ್ನಡ ಮಾಧ್ಯಮದಲ್ಲಿ ಅಧಿಕ ಅಂಕ ಗಳಿಸಿದ ಶಿಕ್ಷಕರ ಮಕ್ಕಳನ್ನು ಗುರುತಿಸಲಾಯಿತು. ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ನವ್ಯ.ಆರ್ ಶೆಟ್ಟಿ ಹಾಗೂ ಚಿನ್ನದ ಪದಕ ವಿಜೇತ ವಿಕಲಚೇತನ ವಿದ್ಯಾರ್ಥಿನಿ ರಫೀಝಾಳನ್ನು ಅಭಿನಂದಿಸಲಾಯಿತು.

ಕಳೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ಫಲಿತಾಂಶ ದಾಖಲಿಸಿದ 16 ಶಾಲೆಗಳನ್ನು ಗೌರವಿಸಲಾಯಿತು. ಸಮನ್ವಯಾಧಿಕಾರಿ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿದರು. ಸುನಿಲ್ ಸಿಕ್ವೇರಾ ವಂದಿಸಿದರು. ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಮಚಂದ್ರ ರಾವ್ ಹಾಗೂ ಶಿಕ್ಷಣ ಸಂಯೋಜಕಿ ಸುಜಾತ.ಎಸ್. ಕಾರ್ಯಕ್ರಮ ನಿರ್ವಹಿಸಿದರು.

ಸಭಾಕಾರ್ಯಕ್ರಮಕ್ಕೆ ಮುನ್ನ ತಾಲೂ ಕಿನ ಪ್ರತಿಭಾನ್ವಿತ ಶಿಕ್ಷಕರಿಂದ ‘ನೃತ್ಯ ವಂದನಾ’ ಕಾರ್ಯಕ್ರಮ ನಡೆಯಿತು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri