ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ

ಶಿವಮೊಗ್ಗ, ಸೆ. 5: ಇತ್ತೀಚೆಗೆ ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ರಾಜಕಾರಣ ಹೊಲಸಾಗಿದ್ದು, ರಾಜಕಾರಣಿಗಳು ಎಂದು ಬಹಿರಂಗವಾಗಿ ಹೇಳಿಕೊಳ್ಳಲು ನಾಚಿಕೆಯಾಗುತ್ತದೆ ಎಂದಿದ್ದ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಮತ್ತೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ.

‘ಜನರ ಸಮಸ್ಯೆಗಳಿಗೆ ಪರಿಹಾರ ನೀಡದ ರಾಜಕಾರಣಿಗಳು ದ್ರೋಹಿಗಳಿದ್ದಂತೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ, ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ರಾಜಕಾರಣಿಗಳೆಂದ ಮೇಲೆ ದಿನನಿತ್ಯ ಸಾರ್ವಜನಿಕರ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ. ಈ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಕೆಲಸ ಮಾಡಬೇಕು. ಈ ಗುರುತರ ಜವಾಬ್ದಾರಿ ರಾಜಕಾರಣಿಗಳ ಮೇಲಿದೆ. ಇದನ್ನು ಮರೆತರೆ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ತಿಳಿಸಿದರು.

ಶಿಕ್ಷಕರ ಮೇಲೆಯೂ ಗುರುತರ ಜವಾಬ್ದಾರಿಯಿದೆ. ಸಮಾಜ, ದೇಶದ ಉತ್ತಮ ಭವಿಷ್ಯ ರೂಪಿಸುವ ಹೊಣೆಗಾರಿಕೆಯಿದೆ. ಶಿಕ್ಷಕರು ಇದನ್ನು ಅರಿತು ನಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದುದಾಗಿದ್ದು, ಈ ವೃತ್ತಿಗೆ ದೇಶದಲ್ಲಿ ಅತೀ ಹೆಚ್ಚಿನ ಗೌರವವಿದೆ. ದೇವರ ರೂಪದಲ್ಲಿ ಪೂಜಿಸಲಾಗುತ್ತದೆ. ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದಾದುದಾಗಿದೆ ಎಂದು ಅವರು ಗುಣಗಾನ ಮಾಡಿದರು.

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಗಣನೀಯವಾದುದಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಜೀವನ ಶಿಕ್ಷಣವನ್ನು ನೀಡಬೇಕು. ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು. ಉತ್ತಮ ವ್ಯಕ್ತಿಗಳಾಗಿ ರೂಪಿಸಿ ಒಳ್ಳೆಯ ಗುಣ, ವೌಲ್ಯಗಳನ್ನು ಬೆಳೆಸಬೇಕು ಎಂದು ಅವರು ತಿಳಿಸಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕ ವೃತ್ತಿಯ ಪಾವಿತ್ರತೆಯನ್ನು ಹೆಚ್ಚಿಸಿದರು. ಅವರ ಜನ್ಮ ದಿನವನ್ನು ರಾಷ್ಟ್ರಾದಾದ್ಯಂತ ಶಿಕ್ಷಕ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ರಾಧಾಕೃಷ್ಣನ್‌ರವರ ತತ್ವಾದರ್ಶ, ವ್ಯಕ್ತಿತ್ವ, ವೌಲ್ಯಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಉಳಿಸಿ, ಬೆಳೆಸಿಕೊಂಡು ಹೋಗಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ಎಲ್ಲ ರಂಗಗಳಲ್ಲಿಯೂ ದೇಶ ಅಭಿವೃದ್ಧಿಯಾಗುತ್ತಿದೆ. ಆದರೆ ್ರಷ್ಟಾಚಾರ ಇನ್ನಿಲ್ಲದಂತೆ ಕಾಡುತ್ತಿದ್ದು, ಇದರ ನಿರ್ಮೂಲನೆಗೆ ಮುಂದಾಗಬೇಕಾಗಿದೆ. ಜೊತೆಗೆ ವಿದೇಶಿ ಬ್ಯಾಂಕ್‌ಗಳಲ್ಲಿಟ್ಟಿರುವ ಕಪ್ಪು ಹಣವನ್ನು ಸ್ವದೇಶಕ್ಕೆ ವಾಪಾಸ್ ತರಬೇಕಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಜಿ.ಕುಮಾರಸ್ವಾಮಿ ವಹಿಸಿದ್ದರು. ಸಾಹಿತಿಗಳಾದ ಪ್ರೊ. ಎಜಾಜುದ್ದೀನ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, ಜಿಲ್ಲಾಧಿಕಾರಿ ವೇದಮೂರ್ತಿ, ಜಿ.ಪಂ. ಸಿಇಓ ಸಂಜಯ್ ಬಿಜ್ಜೂರು, ಡಿಡಿಪಿಐ ಎನ್.ಎಸ್.ಕುಮಾರ್ ಸೇರಿದಂತೆ ಮೊದಲಾದವರಿದ್ದರು.

ವಿಶ್ವೇಶ್ವರಯ್ಯ ನೆನಪು... ಶಿಕ್ಷಕರು ತಬ್ಬಿಬ್ಬು...!
‘ಈ ದಿನ ಸರ್.ಎಂ.ವಿಶ್ವೇಶ್ವರಯ್ಯನವರನ್ನು ನೆನೆಪಿಸಿಕೊಳ್ಳುತ್ತಿದ್ದೇವೆ... ಅಲ್ಲ ರಾಧಾಕೃಷ್ಣನ್‌ರವರನ್ನು ನೆನೆಪಿಸಿಕೊಳ್ಳುತ್ತಿದ್ದೇವೆ...’

ಇದು ಉಪ ಮುಖ್ಯಮಂತ್ರಿ ಈಶ್ವರಪ್ಪರ ಮಾತುಗಳು. ಸಮಾರಂಭ ಉದ್ಘಾಟಿಸಿದ ನಂತರ ಅವರು ಶಿಕ್ಷಕರನ್ನುದ್ದೇಶಿಸಿ ಮಾತನಾಡುವ ವೇಳೆ, ಸರ್.ಎಂ.ವಿಶ್ವೇಶ್ವರಯ್ಯನವರನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಈ ರೀತಿ ಹೇಳುತ್ತಿದ್ದಂತೆ ಸಮಾರಂಭದಲ್ಲಿದ್ದ ಶಿಕ್ಷಕರು ಮುಸಿಮುಸಿ ನಗಲಾರಂಭಿಸಿದರು. ಕೆಲವರು ಗಲಿಬಿಲಿಗೊಂಡರು. ಸರ್.ಎಂ.ವಿಶ್ವೇಶ್ವರಯ್ಯ ಅಲ್ಲ.. ಡಾ. ಸರ್ವಪಲ್ಲಿ ರಾಧಾಕೃಷ್ಣರ ಜನ್ಮದಿನ ಎಂದು ಶಿಕ್ಷಕರು ಹೇಳಿದರು. ತಪ್ಪಿನ ಅರಿವಾದ ಈಶ್ವರಪ್ಪ ‘ರಾಧಾಕೃಷ್ಣರನ್ನು ನೆನೆಪಿಸಿಕೊಳ್ಳುತ್ತಿದ್ದೇವೆ’ ಎಂದು ತಿದ್ದಿಕೊಂಡು ಭಾಷಣ ಮುಂದುವರಿಸಿದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri