ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ

ಮಡಿಕೇರಿ, ಸೆ. 5: ಪ್ರಸಕ್ತ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಉತ್ಸವವನ್ನು ಹೆಚ್ಚುವರಿ ಆಕರ್ಷಕ ಕಾರ್ಯಕ್ರಮಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಸಲು ಮಡಿಕೇರಿ ನಗರ ದಸರಾ ಸಮಿತಿ ತೀರ್ಮಾನ ಕೈಗೊಂಡಿದೆ.

ದಸರಾ ಸಮಿತಿಯ ವಾರ್ಷಿಕ ಸಭೆಯ ಮುನ್ನ ಪದ್ಧತಿ ಹಾಗೂ ಪರಂಪರೆಯಾಗಿ ನಡೆದು ಕೊಂಡು ಬಂದಂತೆ ಪೇಟೆ ಶ್ರೀ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕಾವೇರಿ ಕಲಾ ಕ್ಷೇತ್ರದಲ್ಲಿ ಬುಧವಾರ ಸಂಜೆ ನಗರ ದಸರಾ ಸಮಿತಿ, ದಶಮಂಟಪ ಸಮಿತಿ, ವಿವಿಧ ಸಮಿತಿಗಳ ಪದಾಧಿಕಾರಿಗಳ ವಾರ್ಷಿಕ ಸಭೆ ನಡೆದು ಈ ಬಾರಿ ದಸರಾ ಉತ್ಸವವನ್ನು ಅತ್ಯಂತ ಆಕರ್ಷಕ ಹಾಗೂ ಅದ್ಧೂರಿಯಾಗಿ ನಡೆಸುವಂತೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಮಡಿಕೇರಿ ನಗರ ದಸರಾ ಸಮಿತಿಯ ಅಧ್ಯ ಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಎಚ್.ಎಂ. ನಂದಕುಮಾರ್ ಮಾತನಾಡಿ, ಈ ಬಾರಿಯ ದಸರಾಕ್ಕೆ ಮಳೆಯ ಅಡಚಣೆಯಾಗುವ ಸಂಭವವಿದ್ದರೂ ನಗರದ ನಾಲ್ಕು ಶಕ್ತಿ ಮಾತೆಗಳ ಆಶೀರ್ವಾದದಿಂದ ಮಳೆಯಿಲ್ಲದೆ ದಸರಾ ಉತ್ಸವ ಯಶಸ್ವಿಯಾಗಿ ನಡೆಯಲು ಪ್ರಾರ್ಥಿಸುವಂತೆ ಕೋರಿದರು.

ಈ ಬಾರಿ ರಾಜ್ಯದಾದ್ಯಂತ ಮಳೆಯ ಅಭಾವ ತಾಂಡವವಾಡಿ ಬರ ಪರಿಸ್ಥಿತಿಯನ್ನುಂಟು ಮಾಡಿತ್ತು. ಆದರೆ, ಅದೃಷ್ಟವಶಾತ್ ರಾಜ್ಯದಲ್ಲಿ ಉತ್ತಮ ಮಳೆ ಬಂದುದರಿಂದ ಬರ ಪರಿಸ್ಥಿತಿ ಕೊಂಚ ಮಟ್ಟಿಗೆ ದೂರವಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದಿಂದ ಹೆಚ್ಚಿನ ಅನುದಾನ ತರಲು ದಸರಾ ಸಮಿತಿಯಿಂದ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಹೆಚ್ಚಿನ ಅನುದಾನವನ್ನು ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು. ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿನ ಅನುದಾನ ಸಿಗುವ ಸಂಭವವಿರುವುದರಿಂದ ಹೆಚ್ಚಿನ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಇನ್ನಿತರ ಕಾರ್ಯಕ್ರಮಗಳನ್ನು ರೂಪಿಸಿ ಇನ್ನಷ್ಟು ಅದ್ಧೂರಿಯ ದಸರಾ ಉತ್ಸವವನ್ನು ಆಚರಿಸುವ ಅಭಿಲಾಷೆಯಿದೆ ಎಂದರು.

ದಸರಾ ಉತ್ಸವದ ಕೇಂದ್ರ ಬಿಂದುವಾದ ಬನ್ನಿ ಮಂಟಪ ನಿರ್ಮಾಣ ಪೂರ್ಣಗೊಳ್ಳಲಿಲ್ಲ. ಅನು ದಾನದ ಅಭಾವವಿದ್ದ ಕಾರಣ ಬನ್ನಿ ಮಂಟಪ ವನ್ನು ಪೂರ್ಣಗೊಳಿಸಲಾಗಲಿಲ್ಲ. ಈ ಬಾರಿ ನಗರಸಭೆಯ ಅನುದಾನದಿಂದ ಪೂರ್ಣಗೊಳಿ ಸುವುದಾಗಿ ಭರವಸೆ ನೀಡಿದರು. ವರ್ಷಂ ಪ್ರತೀ ತುಲಾ ಸಂಕ್ರಮಣದಂದು ಮಡಿಕೇರಿಯಲ್ಲಿ ಕಾವೇರಿ ಮಂಟಪವನ್ನು ಸಮಿತಿಯವರು ಹೊರಡಿಸುತ್ತಿದ್ದು, ಈ ಬಾರಿ ಅನುದಾನದ ಪರಿಸ್ಥಿತಿಯನ್ನು ಪರಿಗಣಿಸಿ 20 ಸಾವಿರಗಳನ್ನು ನೀಡುವ ಚಿಂತನೆಯಿದೆ ಎಂದರು.

ಈ ಬಾರಿ ದಸರಾ ಉತ್ಸವದಲ್ಲಿ ಭಾಗವಹಿಸುವ ದಶಮಂಟಪಗಳಿಗೆ ಪ್ರಥಮ ಹಂತದಲ್ಲಿ ಶೇ.50ರಷ್ಟು ಅನುದಾನವನ್ನು ನೀಡಿ ಉಳಿದ ಶೇ.50ರಷ್ಟು ಅನುದಾನವನ್ನು ದಸರಾ ನಡೆದ ಮರುದಿನವೇ ನೀಡಲಾಗುವುದು ಎಂದ ಅವರು, ಕಳೆದ ಬಾರಿ ಮಂಟಪಗಳಿಗೆ ಬಹುಮಾನ ನೀಡುವ ಸಂದರ್ಭ ಅಹಿತಕರ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮತ್ತೆ ಅಂತಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಅನುದಾನವನ್ನು ದಸರಾ ಕಳೆದ ನಂತರ ನೀಡಲಾಗುವುದು. ಯಾವ ಮಂಟಪದವರು ಅಹಿತಕರ ಘಟನೆಗಳಿಗೆ ಕಾರಣರಾಗುವರೋ ಅವರಿಗೆ ನೀಡುವ ಅನುದಾನವನ್ನು ಕಡಿತಗೊಳಿ ಸಲಾಗುವುದು ಎಂಬುದಾಗಿ ಎಚ್ಚರಿಕೆ ನೀಡಿದರು.

ಆರಂಭದಲ್ಲಿ ಪ್ರಸ್ತಾವಿಕವಾಗಿ ನುಡಿದ ದಸರಾ ಸಮಿತಿಯ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಇಂದಿನ ಸಭೆಯನ್ನು ಈ ಮೊದಲೇ ನಡೆಸ ಬೇಕಾಗಿತ್ತು. ಆದರೆ, ಅನಿವಾರ್ಯ ಕಾರಣ ಗಳಿಂದ ನಡೆಸಲಾಗದೆ ಇಂದು ನಡೆಸಲಾಗುತ್ತಿದೆ. ಕಳೆದ ಬಾರಿ ದಸರಾ ಉತ್ಸವದ ಯಶಸ್ವಿಗೆ ಕಾರಣರಾದ ತಾವೆಲ್ಲರೂ ಈ ಬಾರಿಯೂ ಸಹಕರಿಸುವಂತೆ ಮನವಿ ಮಾಡಿಕೊಂಡರು.

ಆದರೆ, ಕಳೆದ ಬಾರಿ ಘಟಿಸಿದ ಅಹಿತಕರ ಘಟನೆ ಈ ಬಾರಿಂುೂ ಮರುಕಳಿಸದಂತೆ ದಶಮಂಟಪದವರು ಸಹಕರಿಸುವಂತೆ ಕೋರಿ ಕೊಂಡರು. 2011ನೆ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದ ದಸರಾ ಸಮಿತಿಯ ಖಜಾಂಚಿ ಬಿ.ಕೆ. ಅರುಣ್ ಕುಮಾರ್, ‘51,77,615.00 ರೂ. ಗಳು ವೆಚ್ಚವಾಗಿದ್ದು, ಕಳೆದ ಬಾರಿ ಸರಕಾರದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ‘50 ಲಕ್ಷ ಅನುದಾನವನ್ನು ಆಗಿನ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ನೀಡಿದ್ದು, ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಈಗಿನ ಉಸ್ತುವಾರಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್‌ರವರ ಪ್ರಯತ್ನದಿಂದ ಈ ಅನುದಾನ ದೊರಕಿರುವು ದಾಗಿ ತಿಳಿಸಿದರು. ಈ ವರ್ಷದ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಳಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಹಾಗೂ ಸಚಿವ ಅಪ್ಪಚ್ಚು ರಂಜನ್‌ರವರ ಮೂಲಕ ನಿಯೋಗ ತೆರಳಿ’ ಒಂದು ಕೋಟಿ ರೂ. ಅನುದಾನವನ್ನು ನೀಡುವಂತೆ ಮನವಿ ಮಾಡಿ ಕೊಳ್ಳುವುದಾಗಿ ತಿಳಿಸಿದರು.

ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಪಿ. ಪ್ರದೀಪ್ ವರದಿಯನ್ನು ಸಭೆಯ ಮುಂದೆ ಮಂಡಿಸಿದರು. ಕ್ರೀಡಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ಮಾತನಾಡಿ, ಕಾವೇರಿ ಮಂಟಪಕ್ಕೆ ‘20 ಸಾವಿರ ಅನುದಾನವನ್ನು ನೀಡುವಂತೆ ಮನವಿ ಮಾಡಿಕೊಂಡರು. ಹಿರಿಯ ಉಪಾಧ್ಯಕ್ಷ ಎಂ.ಬಿ. ದೇವಯ್ಯ, ಮಂಟಪ ಸಮಿತಿಯ ಆರ್.ಬಿ. ಶಿವಕುಮಾರ್, ಉಪಾಧ್ಯಕ್ಷ ಸತೀಶ್ ಪೈ ಇನ್ನಿತರರು ಸಲಹೆ ಸೂಚನೆಗಳನ್ನು ನೀಡಿದರು. ಕೊನೆಗೆ ಚುಮ್ಮಿ ದೇವಯ್ಯ ವಂದಿಸಿದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-06

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri