ಶುಕ್ರವಾರ, 18-10-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!

-ಸತ್ಯಾ ಕೆ.
ಮಂಗಳೂರು, ಸೆ.6: ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ನೊಂದಿಗೆ ರಾಷ್ಟ್ರ ಮಟ್ಟದಲ್ಲಿ ಹಲವು ಪದಕಗಳನ್ನು ಗಳಿಸಿದ್ದರೂ ಪ್ಲಾಸ್ಟಿಕ್ ಕವರ್‌ಗಳನ್ನು ಮಾರಿ ಜೀವನ ನಿರ್ವಹಿಸುತ್ತಿರುವ ಅಂತಾರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಗೀತಾ ಬಾಯಿಗೆ ಪ್ಲಾಸ್ಟಿಕ್ ನಿಷೇಧದ ಸರಕಾರದ ಚಿಂತನೆ ಆಘಾತ ನೀಡಿದೆ.

ಪರಿಸರ ಮಾಲಿನ್ಯದ ದೃಷ್ಟಿಯಿಂದ ಪ್ಲಾಸ್ಟಿಕ್ ನಿಷೇಧಕ್ಕೆ ಚಿಂತನೆ ನಡೆದಿದೆಯಾದರೂ 1999ರಲ್ಲಿ ಫಿನ್‌ಲ್ಯಾಂಡ್‌ನಲ್ಲಿ ನಡೆದ ಅಂತಾ ರಾಷ್ಟ್ರೀಯ ಮಟ್ಟದ ಸ್ಪರ್ಧೆಯ ಪವರ್ ಲಿಫ್ಟಿಂಗ್‌ನಲ್ಲಿ ಚಾಂಪಿಯನ್‌ಶಿಪ್ ಗಳಿಸಿರುವ ಗೀತಾ ಬಾಯಿ ತಮ್ಮ ಜೀವನೋಪಾಯಕ್ಕಾಗಿ ನಿರ್ವಹಿಸುತ್ತಿರುವುದು ಪ್ಲಾಸ್ಟಿಕ್ ಕವರ್‌ಗಳ ಮಾರಾಟ.

ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆಯ ಒಂದು ಪಾರ್ಶ್ವದಲ್ಲಿ ಕಳೆದ 12 ವರ್ಷಗಳಿಂದ ವಿವಿಧ ರೀತಿಯ ಪ್ಲಾಸ್ಟಿಕ್ ಕವರ್‌ಗಳನ್ನಿಟ್ಟು ಬೆಳಗ್ಗಿನಿಂದ ರಾತ್ರಿಯ ವರೆಗೆ ಗ್ರಾಹಕರಿಗೆ ಮಾರಾಟ ಮಾಡುವ ಗೀತಾ ಬಾಯಿ, ಒಂದೊಮ್ಮೆ ಸರಕಾರ ಪ್ಲಾಸ್ಟಿಕ್ ನಿಷೇಧ ಮಾಡಿದ್ದಲ್ಲಿ ತನ್ನ ಭವಿಷ್ಯದ ಗತಿ ಯೇನು ಎಂಬ ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದಲ್ಲೂ ಕ್ರಮ ಕೈಗೊಳ್ಳಲಾಗಿದ್ದು, ಮೂಡುಬಿದಿರೆಯಲ್ಲಿ ಸೆ.1ರಿಂದ ಪ್ರಾಯೋಗಿಕ ನೆಲೆಯಲ್ಲಿ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಇದು ಯಶಸ್ವಿಯಾದಲ್ಲಿ ಜಿಲ್ಲಾ ಮಟ್ಟದಲ್ಲೂ ವಿಸ್ತರಣೆಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಆರ್ಥಿಕ ಮುಗ್ಗಟ್ಟಿನ ಹೊರತಾಗಿಯೂ ಪವರ್ ಲಿಫ್ಟಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್‌ಶಿಪ್ ಪಡೆದ ಸಾಧಕಿ ಗೀತಾ ಬಾಯಿ. ಕಳೆದ ಸುಮಾರು 18 ವರ್ಷಗಳಿಂದೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ 3 ಚಿನ್ನದ ಪದಕ, 11 ಬೆಳ್ಳಿ ಪದಕ ಹಾಗೂ 16 ಕಂಚಿನ ಪದಕಗಳನ್ನು ಗಳಿಸುತ್ತಾ ಬಂದಿರುವ ಇವರು, ದಕ್ಷಿಣ ವಲಯ ಮಟ್ಟದಲ್ಲಿ 7ಕ್ಕೂ ಅಧಿಕ ಚಿನ್ನ, ಬೆಳ್ಳಿ ಹಾಗೂ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್‌ನಲ್ಲಿ 27 ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ಮಾತ್ರವಲ್ಲದೆ ಕಳೆದ 14 ವರ್ಷ ಗಳಿಂದ ರಾಜ್ಯ ಮಟ್ಟದ ಹಗ್ಗ ಜಗ್ಗಾಟ ಸ್ಪರ್ಧೆ ಯಲ್ಲಿ ಚಾಂಪಿಯನ್ ಆಗಿದ್ದರೂ ರಾಜ್ಯ ಸರಕಾರ ಮಾತ್ರ ಇವರ ಸಾಧನೆಗೆ ಮನ್ನಣೆಯೇ ನೀಡಿಲ್ಲ. ಸೂಕ್ತ ವಿದ್ಯಾಭ್ಯಾಸ ಇಲ್ಲ ಎಂಬ ಕಾರಣಕ್ಕೆ ಸರಕಾರಿ ನೌಕರಿಯಿನ್ನೂ ಇವರ ಪಾಲಿಗೆ ಮರೀಚಿಕೆಯಾಗಿಯೇ ಉಳಿದಿದೆ. ರೈಲ್ವೇ ನಿಲ್ದಾಣದಲ್ಲಿ ಕನಿಷ್ಠ ತನಗೊಂದು ಗೇಟ್ ಕಾಯುವ ಕೆಲಸವಾದರೂ ಸಿಗಲಿ ಎಂಬ ನಿರೀಕ್ಷೆಯೊಂದಿಗೆ ಕಳೆದ ಹಲವಾರು ವರ್ಷ ಗಳಿಂದ ಸಚಿವರಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸುತ್ತಿರುವ ಇವರು, ಕಳೆದ ಬಾರಿ ಯಾವುದೇ ಕೋಚಿಂಗ್‌ನ ವ್ಯವಸ್ಥೆಯಿಲ್ಲದೆ ಎಸೆಸೆಲ್ಸಿ ಪರೀಕ್ಷೆ ಬರೆದು 3 ವಿಷಯಗಳಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ಎಸ್ಸೆಸ್ಸೆಲ್ಸಿ ಮುಗಿಸಬೇಕೆಂದಿದ್ದ ಗೀತಾ ಬಾಯಿಗೆ ಅವರ ಅಣ್ಣನ ನಿಧನದಿಂದ ಸಾಧ್ಯ ವಾಗಿಲ್ಲ. ಮುಂದಿನ ವರ್ಷ ಎಸೆಸೆಲ್ಸಿ ಪೂರ್ಣ ಗೊಳಿಸುವ ವಿಶ್ವಾಸವನ್ನು ಅವರು ಹೊಂದಿದ್ದಾರೆ. ಮಂಗಳೂರು ತೊಕ್ಕೊಟ್ಟಿನ ದಿ. ಪಾಂಡುರಂಗ ಪ್ರಭು ಮತ್ತು ದಿ. ಸುಮತಿ ದಂಪತಿಯ ಪುತ್ರಿಯಾಗಿರುವ ಗೀತಾ ಬಾಯಿ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್‌ಗೆ 16 ಬಾರಿ ಆಯ್ಕೆಯಾಗಿದ್ದರೂ ಪ್ರಯಾಣ ವೆಚ್ಚ ಹಾಗೂ ಇತರ ಖರ್ಚುಗಳನ್ನು ಭರಿಸಲಾಗಿದೆ ಹಿಂದೆ ಸರಿಯಬೇಕಾಯಿತು. ‘‘ಅಣ್ಣನ ಮೂವರು ಮಕ್ಕಳೊಂದಿಗೆ ಅವರ ಜೀವನ ನಿರ್ವಹಣೆಯ ಜೊತೆಗೆ ಈ ಪ್ಲಾಸ್ಟಿಕ್ ಮಾರಿ ನನ್ನ ಜೀವನ ಸಾಗಿಸುತ್ತಿದ್ದೇನೆ. ಹಲವು ವರ್ಷಗಳಿಂದ ಕ್ರೀಡಾಪ್ರಿಯರು ನೀಡಿದ ಪ್ರೋತ್ಸಾಹದಿಂದಾಗಿ ನಾನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕಡೆಗಳಿಗೆ ತೆರಳಿ ಸ್ಪರ್ಧಿಸಿ ಪದಕ ಗಳಿಸಲು ಸಾಧ್ಯವಾಗಿದೆ.

ಆದರೆ ರಾಜ್ಯ ಸರಕಾರ ಮಾತ್ರ ನನಗೆ ಯಾವುದೇ ರೀತಿಯ ಪ್ರೋತ್ಸಾಹ ನೀಡಿಲ್ಲ. ಪ್ರತಿ ಬಾರಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದಾಗಲೂ ಅಧಿಕಾರಿಗಳ ಬಳಿ ನೆರವಿಗೆ ಮನವಿ ಮಾಡಿದರೆ ಭಾಗವಹಿಸಿದ ಬಳಿಕ ನೀಡಲಾಗುವುದು ಎಂಬ ಉತ್ತರ. ಪ್ರಯಾಣ ವೆಚ್ಚ ಭರಿಸಲು ನನ್ನಿಂದ ಸಾಧ್ಯವಾದರೆ ನಾನ್ಯಾಕೆ ಅಧಿಕಾರಿಗಳನ್ನು ಬೇಡಬೇಕು. ರಾಜ್ಯ ಸರಕಾರ ಕನಿಷ್ಠ ಏಕಲವ್ಯ ಪ್ರಶಸ್ತಿಯನ್ನೂ ನೀಡಿ ಗೌರವಿಸಿಲ್ಲ. 2002ರಿಂದ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿದ್ದೇನೆ. ಆದರೆ ಪ್ರಶಸ್ತಿ ಬಂದಿಲ್ಲ. ಈ ವರ್ಷವೂ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದೆ’ ಎಂದು ಗೀತಾ ಬಾಯಿ ‘ವಾರ್ತಾಭಾರತಿ’ ಜೊತೆ ಬೇಸರ ವ್ಯಕ್ತಪಡಿಸಿದ್ದಾರೆ.

‘‘ಈಗಾಗಲೇ 40 ಮೈಕ್ರಾನ್‌ಗಿಂತ ಕಡಿಮೆಯ ಪ್ಲಾಸ್ಟಿಕ್‌ಗೆ ನಿಷೇಧ ಹೇರಲಾಗಿದೆ. ಇದೀಗ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಎಂದು ಹೇಳ ಲಾಗುತ್ತಿದೆ. ಹಾಗಾದಲ್ಲಿ ನಾನೇನು ಮಾಡ ಬೇಕು ತೋಚುತ್ತಿಲ್ಲ. ರೈಲ್ವೆ ಗೇಟ್ ಕಾಯುವ ಕೆಲಸವಾದರೂ ಕೊಟ್ಟಿದ್ದರೆ ನಾನು ನಿರ್ವ ಹಿಸಲು ಸಿದ್ಧ’’ ಎನ್ನುತ್ತಾರೆ 38ರ ಹರೆಯದ ಗೀತಾ ಬಾಯಿ.

ತನ್ನ ಜೀವನದ ಹಲವು ವರ್ಷಗಳನ್ನು ಪವರ್ ಲಿಫ್ಟಿಂಗ್, ಬೆಂಚ್‌ಪ್ರೆಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳನ್ನು ಜಯಿಸುವುದರಲ್ಲೇ ಕಳೆದು ದೇಶ, ರಾಜ್ಯ ಹಾಗೂ ಜಿಲ್ಲೆಗೆ ಹೆಸರು ತಂದಿರುವ ಸಾಧಕಿ ಬಗ್ಗೆ ರಾಜ್ಯ ಸರಕಾರ ಯಾವುದೇ ಇಲಾಖೆ ಯಲ್ಲಾದರೂ ಮಹಿಳೆಯೊಬ್ಬರು ಜೀವನ ನಿರ್ವಹಣೆಗೆ ಸಾಧ್ಯವಾ ಗುವ ರೀತಿಯ ಉದ್ಯೋಗವನ್ನಾದರೂ ಕಲ್ಪಿಸಿದ್ದಲ್ಲಿ ಗೀತಾ ತನ್ನ ಭವಿಷ್ಯಕ್ಕಾಗಿ ಇದೀಗ ಚಿಂತಿಸುವ ಅಗತ್ಯವಿರಲಿಲ್ಲ.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-07

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri