ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕೋಸಳ್ಳಿ ನದಿಯಿಂದ ಕುಡಿಯುವ ನೀರು ಸರಬರಾಜು; ಗುಂಡೂರಿನ 80ಕೋಟಿ ರೂ.ವೆಚ್ಚದ ನೀರಾವರಿ ಅಣೆಕಟ್ಟಿನಿಂದ 4500 ಎಕರೆ ಕೃಷಿಭೂಮಿ ಹಸನು: ಸಂಸದ ಬಿ.ವೈ.ರಾಘವೇಂದ್ರ

ಕುಂದಾಪುರ: ಪಶ್ಚಿಮಘಟ್ಟವನ್ನು ಯುನೆಸ್ಕೊ ವಿಶ್ವಪರಂಪರೆ ಪಟ್ಟಿಗೆ ಸೇರಿಸುವ ಮೊದಲು ಅದರ ಸಾಧಕ ಬಾಧಕ ಬಗ್ಗೆ ಚರ್ಚೆ ನಡೆಸಿ, ಅಲ್ಲಿನ ನಿವಾಸಿಗಳ ಜನಜೀವನ ಬಗ್ಗೆ ಗಮನಹರಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುಂದಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕವಾಗಿ ಇದಕ್ಕೆ ತನ್ನ ವಿರೋಧವಿದೆ ಎಂದು ಹೇಳಿದರು.

ಕೇಂದ್ರ ಸರಕಾರದ ತಾರತಮ್ಯ ನೀತಿ ರಾಜ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಕಳೆದ 3 ವರ್ಷಗಳಿಂದ ರಾಜ್ಯಕ್ಕೆ ಚಿಕ್ಕಾಸು ಬಂದಿಲ್ಲ. ಹಿಂದುಳಿದ ರಾಜ್ಯಗಳಿಗೆ ಮೊದಲ ಆದ್ಯತೆ ನೀಡಬೇಕೆಂಬ ನೆಲೆಯಲ್ಲಿ ಕರ್ನಾಟಕವನ್ನು ಕೇಂದ್ರ ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಅವರು, ಬೈಂದೂರು ಕ್ಷೇತ್ರದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಯಿಂದ ಕೃಷಿ, ತೋಟಗಾರಿಕೆ, ಪ್ರಾಣಹಾನಿ ಸೇರಿದಂತೆ ಒಟ್ಟು 8 ಕೋಟಿ ರೂ. ನಷ್ಟ ಸಂಭವಿಸಿದೆ. ಕೇಂದ್ರ ಬೆಳೆಹಾನಿಗೆ ನೀಡುವ ಪರಿಹಾರ ಏನೇನೂ ಸಾಲದು. ಹೆಕ್ಟೇರ್‌ಗೆ 1000ರೂ.ಪರಿಹಾರದಿಂದ ರೈತನ ಕಣ್ಣೀರು ಒರೆಸಲು ಸಾಧ್ಯವಿಲ್ಲ. ರಾಜ್ಯದ 16ಲಕ್ಷ ಕುಟುಂಬಗಳ 3500 ಕೋಟಿ ರೂ. ಸಹಕಾರಿ ಸಾಲ ಮನ್ನಾ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಕೇಂದ್ರ ಸರಕಾರ ಕೂಡ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2ಲಕ್ಷ ರೂ. ಸಾಲ ಮನ್ನಾ ಮಾಡಲು ತೀರ್ಮಾನ ತೆಗೆದುಕೊಳ್ಳಬೇಕು. ಈ ಬಗ್ಗೆ ಕೇಂದ್ರ ಸಚಿವ ಜೈರಾಮ್‌ರಮೇಶ್ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿ ಆಗಬೇಕು. ಅರಣ್ಯ ಹಕ್ಕು ಕಾಯಿದೆ ಹಕ್ಕುಪತ್ರ ಪಡೆಯಲು 3 ತಲೆಮಾರುಗಳ ದಾಖಲೆ ಸಲ್ಲಿಸಬೇಕೆನ್ನುವುದು ತರವಲ್ಲ. ಇದು ಸಾಧ್ಯವೂ ಇಲ್ಲ.ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದೇನೆ ಎಂದರು.

ಬೈಂದೂರು ಕ್ಷೇತ್ರದ ಗುಂಡೂರು ಎಂಬಲ್ಲಿ 80ಕೋಟಿ ರೂ.ವೆಚ್ಚದಲ್ಲಿ ನೀರಾವರಿ ಅಣೆಕಟ್ಟು ನಿರ್ಮಾಣ ಆಗುತ್ತಿದ್ದು ಇದರಿಂದ ಆ ಭಾಗದ 4500 ಎಕರೆ ಕೃಷಿಭೂಮಿ ಹಸನಾಗಲಿದೆ. 1730 ಹೆಕ್ಟೇರ್ ಭೂಮಿಗೆ ಏತನೀರಾವರಿ ಪ್ರಯೋಜನ ಲಭಿಸಲಿದೆ. 780 ಎಚ್‌ಪಿಯ 4 ಪಂಪ್‌ಸೆಟ್ ಮೂಲಕ ನೀರು ಮೇಲೆತ್ತುವ ಬೃಹತ್ ಯೋಜನೆ ಇಲ್ಲಿ ಜಾರಿಯಾಗುತ್ತಿದೆ. ಈ ಯೋಜನೆಯ ಮೂಲಕ ಪರಿಸರದ 10 ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಿಗೆ ನೀರಿನ ಸೌಕರ್ಯ ಕಲ್ಪಿಸಲಾಗುತ್ತಿದೆ.

ಬೈಂದೂರು, ಯಡ್ತರೆ, ಪಡುವರಿ ಮತ್ತು ಶಿರೂರು ಗ್ರಾಮಗಳಿಗೆ ಅನುಕೂಲವಾಗುವಂತೆ ಕೋಸಳ್ಳಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಮಂಜೂರಾತಿ ದೊರೆತಿದೆ. 27ಕೋಟಿ ರೂ.ಯೋಜನೆಯ ದ್ವಿತೀಯ ಹಂತದ ಸರ್ವೆ ಕಾರ್ಯ ಮುಗಿಸಲಾಗಿದೆ. ಅಲ್ಲದೆ ನಾಡಾ, ಸೇನಾಪುರ, ಬಡಾಕೆರೆ ಮತ್ತು ಹಡವು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ 15ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಸೌಪರ್ಣಿಕಾ ನದಿಯಿಂದ ಇಲ್ಲಿನ 24 ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ ಎಂದರು.

ಬೈಂದೂರು ಮತ್ತು ವಂಡ್ಸೆ ಹೋಬಳಿಯ 11,423 ರೈತರ 5.36ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ. ಬೈಂದೂರು ಕ್ಷೇತ್ರದ ಕಡಲ್ಕೊರೆತ ಪ್ರದೇಶಗಳಲ್ಲಿ ಶಾಶ್ವತ ತಡೆಗೋಡೆ ರಚನೆಗೆ 100ಕೋಟಿ ರೂ.ಯೋಜನೆ ರೂಪಿಸಲಾಗಿದೆ. ರಾಜೀವಗಾಂಧಿ ವಿದ್ಯುದ್ದೀಕರಣ ಯೋಜನೆಯಡಿ ಬಹುತೇಕ ವಿದ್ಯುತ್ ವಂಚಿತ ಪ್ರದೇಶಗಳಿಗೆ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿದೆ. ಅಲ್ಲದೆ ಬೈಂದೂರಿನಲ್ಲಿ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೈಂದೂರು ಶಾಸಕ ಕೆ.ಲಕ್ಷ್ಮೀನಾರಾಯಣ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ಕಿಶೋರ್‌ಕುಮಾರ್, ಬೈಂದೂರು ಬಿಜೆಪಿ ಬ್ಲಾಕ್ ಅಧ್ಯಕ್ಷ ವೈ.ಪ್ರಣಯ್‌ಕುಮಾರ ಶೆಟ್ಟಿ, ತಾ.ಪಂ.ಅಧ್ಯಕ್ಷ ಬೆಳ್ಳಾಡಿ ಶಂಕರ ಶೆಟ್ಟಿ, ಸದಾಶಿವ ಪಡುವರಿ, ರಾಜೇಶ್ ಕಾವೇರಿ, ಕೆ.ಬಿ.ಶೆಟ್ಟಿ ಉಪಸ್ಥಿತರಿದ್ದರು.

ಹಾಲಾಡಿ ನಿವಾಸಕ್ಕೆ ಭೇಟಿ
ಸಂಸದ ಬಿ.ವೈ.ರಾಘವೇಂದ್ರ ಸೋಮವಾರ ಬೆಳಗ್ಗೆ ಕುಂದಾಪುರ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಿದರು. ಸಹೋದರನ ಸಾವಿನ ಬಗ್ಗೆ ಸಾಂತ್ವನ ಹೇಳಿದ ಅವರು, ಬಳಿಕ ನಾನಾವಿಷಯಗಳ ಬಗ್ಗೆ ಅರ್ಧ ತಾಸಿಗೂ ಮಿಕ್ಕಿ ಚರ್ಚಿಸಿದರು. ಈ ಸಂದರ್ಭ ಮಾತನಾಡಿ, ಹಾಲಾಡಿ ಒಬ್ಬ ಪಕ್ಷಾತೀತ ನಾಯಕ. ಅವರನ್ನು ನಾವು ತುಂಬು ಗೌರವಿಸುತ್ತೇವೆ. ಕುಂದಾಪುರದ ವಾಜಪೇಯಿ ಎಂದೆ ಬಿಂಬಿತವಾಗಿರುವ ಅವರ ನಡೆನುಡಿ ನಮಗೆಲ್ಲಾ ಮಾರ್ಗದರ್ಶಕವಾಗಿದೆ. ಹಾಲಾಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವೆವು

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಅವಮಾನ ಆಗಿದೆ. ವೈಯಕ್ತಿಕವಾಗಿ ನನಗೆ ನೋವಿದೆ. ಅವರೆಂದೂ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಅವರ ನಿಲುವುಗಳು ನಮಗೆ ಸ್ಫೂರ್ತಿಯಾಗಿದೆ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವೆವು. ಯಡಿಯೂರಪ್ಪ ಹಾಲಾಡಿ ಅವರನ್ನು 2 ಬಾರಿ ಭೇಟಿ ಮಾಡಿದ್ದಾರೆ. ನಾನು 3 ಬಾರಿ ಭೇಟಿ ಮಾಡಿದ್ದೇನೆ. ಕರಾವಳಿಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿಬೆಳೆಸಿದವರು ಅವರು ಎಂದು ಹೇಳಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : vk
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-28

Tell a Friend

ಪ್ರತಿಸ್ಪಂದನ
Naresh Shetty, Kandlur
2012-08-28
ಹಾಲಾಡಿ ಅವರು ಸ್ವಾರ್ಥ ರಾಜಕಾರಣಿ ಅಲ್ಲ ವೆಂದು ಅವರ ಮನೆ ನೋಡಿ ಗಮನಿಸಿ ಗೊತ್ತಾಗುತ್ತೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri