ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಗಾಲಿ ಜರ್ನಾದನ ರೆಡ್ಡಿಗೆ `ರಾಜಾತಿಥ್ಯ': ಚಂಚಲಗುಡ ಜೈಲರ್ ಎತ್ತಂಗಡಿ...

ಹೈದರಾಬಾದ್:ಗಣಿ ಹಗರಣದಲ್ಲಿ ಸಿಲುಕಿ ಜೈಲು ಸೇರಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ `ಆಮಿಷ`ಕ್ಕೆ ಬಲಿಯಾದವರ ಪಟ್ಟಿಗೆ ಇದೀಗ ಚಂಚಲಗುಡ ಜೈಲಿನ ಸೂಪರಿಂಟೆಂಡೆಂಟ್ ಅವರೂ ಸೇರ್ಪಡೆಯಾಗಿದ್ದಾರೆ. ಲಂಚ ಪಡೆದು ರೆಡ್ಡಿ ಅವರಿಗೆ `ಜೈಲಿನಲ್ಲಿ ರಾಜಾತಿಥ್ಯ` ನೀಡಿದ ಆರೋಪಕ್ಕಾಗಿ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಜೈಲಿನಲ್ಲಿರುವ ರೆಡ್ಡಿ ಅವರಿಗೆ ಆದ್ಯತೆಯ ಮೇರೆಗೆ ವಿಶೇಷ ಸವಲತ್ತುಗಳನ್ನು ಒದಗಿಸಿದ ಆರೋಪಕ್ಕಾಗಿ ಜೈಲು ಸೂಪರಿಂಟೆಂಡೆಂಟ್ ಕೇಶವ್ ನಾಯ್ಡು ಅವರನ್ನು `ಕೈದಿಗಳ ಮನಃ ಪರಿವರ್ತನಾ ಸಂಸ್ಥೆ`ಗೆ ವರ್ಗಾಯಿಸಲಾಗಿದೆ.

697ನೇ ನಂಬರಿನ ಕೈದಿಗೆ (ಜನಾರ್ದನ ರೆಡ್ಡಿ) ವಿಶೇಷ ಬೆಡ್‌ಶೀಟ್‌ಗಳು,ಟವಲ್‌ಗಳನ್ನು ಕೊಡಲಾಗುತ್ತಿತ್ತು.ಅವನ್ನು ಪ್ರತಿದಿನವೂ ಇಸ್ತ್ರಿ ಮಾಡಿಸಲಾಗುತ್ತಿತ್ತು.ಇದರ ಜತೆಗೆ ಪ್ರತ್ಯೇಕ ಅಡುಗೆ ಪರಿಚಾರಕ,ಸಹಾಯಕ ಹಾಗೂ ವಕೀಲರು ಮತ್ತಿತರರೊಂದಿಗೆ ವ್ಯವಹರಿಸಲು ಅನುಕೂಲವಾಗಲೆಂದು ಕಂಪ್ಯೂಟರ್ ಸಹಾಯಕನ ಸವಲತ್ತು ಒದಗಿಸಲಾಗಿತ್ತು ಎಂದು ಬಂದಿಖಾನೆ  ಇಲಾಖೆ ಮೂಲಗಳು ತಿಳಿಸಿವೆ.

ಅಷ್ಟೇ ಅಲ್ಲ, ರೆಡ್ಡಿ ಅವರಿಗೆ ವಾರಕ್ಕೆ ಎರಡು ಬಾರಿ ಮಸಾಜು ಮಾಡಲು ವ್ಯವಸ್ಥೆ ಕಲ್ಪಿಸಲಾಗಿತ್ತು; ತಾಜಾ ಬ್ರೆಡ್,ಬಿಸ್ಕತ್ತು,ಚಾಕೊಲೇಟ್‌ಗಳ ಜತೆಗೆ ಹಣ್ಣು ಹಂಪಲು ಮತ್ತು ಮಾಂಸಾಹಾರವೂ ಸಿಗುವಂತೆ ನೋಡಿ ಕೊಳ್ಳಲಾಗಿತ್ತು ಎಂದು ವಿವರಿಸಲಾಗಿದೆ.

ರೆಡ್ಡಿ ಅವರ ಹುಟ್ಟಿದ ದಿನವಾದ ಜನವರಿ 11ರಂದು ಜೈಲಿನಲ್ಲಿ ವಿಶೇಷ ಆಚರಣೆಗೆ ಜೈಲರ್ ನಾಯ್ಡು ವ್ಯವಸ್ಥೆ ಮಾಡಿದ್ದರು.

ಅವತ್ತು ಜೈಲಿನ ಆವರಣದಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ವಿಧಿಗಳು ಹಾಗೂ ಪೂಜೆಯನ್ನು ಏರ್ಪಡಿಸಲಾಗಿತ್ತು. 

ಜೈಲಿನ ಎಲ್ಲಾ ಕೈದಿಗಳಿಗೆ ವಿಶೇಷ ಆಹಾರ ವಿತರಿಸಲಾಗಿತ್ತು. ಈ ಎಲ್ಲಾ ಖರ್ಚನ್ನು ರೆಡ್ಡಿ ಅವರೇ ಭರಿಸಿದ್ದರು.ಅದೇ ದಿನ ಜೈಲು ಬಂಗಲೆಯಲ್ಲಿ ರೆಡ್ಡಿ ಅವರಿಗಾಗಿ ವಿಶೇಷ ಕೂಟವನ್ನು ನಡೆಸಲಾಗಿತ್ತು ಎಂದು ತಿಳಿಸಲಾಗಿದೆ.

ಇದೇ ವೇಳೆ,ಚಂಚಲಗುಡ ಜೈಲಿನಲ್ಲಿ,ಅತಿ ಗಣ್ಯ ಕೈದಿಗಳಿಗೆ ಈ ರೀತಿ ವಿಶೇಷ ಆತಿಥ್ಯ ನೀಡುವುದು ಮಾಮೂಲು ಎಂದೂ ಮೂಲಗಳು ಹೇಳಿವೆ.ನಾಯ್ಡು ಅವರ ಜಾಗಕ್ಕೆ ಈಗ ವಾರಂಗಲ್ ಕೇಂದ್ರ ಕಾರಾಗೃಹದಲ್ಲಿ ಜೈಲರ್ ಸಾಯಿದೈ ಅವರನ್ನು ನೇಮಕ ಮಾಡಲಾಗಿತ್ತು.

ಜನಾರ್ದನ ರೆಡ್ಡಿ ಗಣಿ ಹಗರಣದಲ್ಲಿ ಷಾಮೀಲಾದ ಆರೋಪಕ್ಕಾಗಿ ಐಎಎಸ್ ಅಧಿಕಾರಿ ವೈ. ಶ್ರೀಲಕ್ಷ್ಮಿ,ಎಪಿಎಂಡಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಡಿ.ರಾಜಗೋಪಾಲ್ ಈಗಾಗಲೇ ಜೈಲು ಸೇರಿದ್ದಾರೆ.ಅವರಿಂದ ಲಂಚ ಪಡೆದು ಜಾಮೀನು ನೀಡಿದ ಆರೋಪಕ್ಕಾಗಿ ನ್ಯಾಯಾಧೀಶ ಟಿ.ಪಟ್ಟಾಭಿರಾಮ ರಾವ್ ಮತ್ತಿತರ ನ್ಯಾಯಾಧೀಶರು ಜೈಲು ಸೇರಿದ್ದಾರೆ.

ನನಗೂ ಲಂಚದ ಆಮಿಷ: ನ್ಯಾಯಾಧೀಶ ಶರ್ಮ

`ಜಾಮೀನಿಗಾಗಿ ಲಂಚ`ಪ್ರಕರಣದಲ್ಲಿ ಸಿಲುಕಿರುವ ನ್ಯಾಯಾಧೀಶ ಪಟ್ಟಾಭಿರಾಮ್ ರಾವ್ ಅವರಿಗೆ ಲಂಚ ಆಮಿಷ ಒಡ್ಡಿದ ರೀತಿಯಲ್ಲೇ ತಮಗೂ ರೆಡ್ಡಿ ಆಪ್ತರು ಆಮಿಷ ಒಡ್ಡಿದ್ದಾರೆ ಎಂದು ಸಿಬಿಐ ಮಾಜಿ ಪ್ರಧಾನ ನ್ಯಾಯಾಧೀಶ ನಾಗ ಮಾರುತಿ ಶರ್ಮ ಬಹಿರಂಗಗೊಳಿಸಿದ್ದಾರೆ.

ಜೈಲಿನಲ್ಲಿ ರೆಡ್ಡಿ ಅವರಿಗೆ ಜೈಲರ್ ನಾಯ್ಡು `ರಾಜಾತಿಥ್ಯ`ನೀಡಿದ್ದು ಬಹಿರಂಗಗೊಂಡಿರುವ ಸಂದರ್ಭದಲ್ಲೇ ಶರ್ಮ ಅವರು ಸೋಮವಾರ ಇದನ್ನು ಬಯಲು ಮಾಡಿದ್ದಾರೆ.

`ಅವರು ಆಮಿಷ ಒಡ್ಡಿದರು. ಆದರೆ ನಾನು, ಕಾನೂನು ಬಿಟ್ಟು ಅತ್ತಿತ್ತ ಕದಲುವುದಿಲ್ಲ ಎಂದು ಸ್ಪಷ್ಟಪಡಿಸಿದೆ.ನನ್ನ ಪ್ರಕಾರ,ನ್ಯಾಯಾಧೀಶರು ಲಂಚ ತೆಗೆದುಕೊಳ್ಳುವುದು ಆತ್ಮಹತ್ಯೆಗೆ ಸಮಾನ`ಎಂದು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ)ಮುಂದೆ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಶರ್ಮ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ. ಗಾಲಿ ಅವರಿಗೆ ಸಂಬಂಧಿಸಿದ ಪ್ರಕರಣಗಳ ಬಹುತೇಕ ವಿಚಾರಣೆಯನ್ನು ಶರ್ಮ ಅವರು ನಡೆಸಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಪ್ರಜಾವಾಣಿ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-08-29

Tell a Friend

ಪ್ರತಿಸ್ಪಂದನ
Ramesh, Dubai
2012-08-29
...........................( ದನ್ಯವಾದಗಳು - ಸಂಪಾದಕ)
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri