ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಆಸ್ಕರ್ ಫೆರ್ನಾ೦ಡೀಸ್ರವರ ಉಡುಪಿಯ ಆಪ್ತ ಕಾರ್ಯದರ್ಶಿ ಮ೦ಜುನಾಥ ಉದ್ಯಾವರ ನಿಧನ

ಉಡುಪಿ: ಅ,29.ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಜಿಲ್ಲೆಯ ಪಕ್ಷದ ಕಾರ್ಯಕರ್ತರ ಪ್ರೀತಿಯ ನಾಯಕರಾಗಿ, ಎ‌ಐಸಿಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್ ರವರ ಆಪ್ತ ಕಾರ್ಯದರ್ಶಿಯಾಗಿ, ಜನಪರ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ 56 ವರ್ಷದ ಮಂಜುನಾಥ ಉದ್ಯಾವರ ರವರು ಸುಮಾರು ಒಂದು ವರ್ಷದಿಂದ ಅನಾರೋಗ್ಯದಲ್ಲಿದ್ದವರಾಗಿದ್ದು, ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ (ಬುಧವಾರ)ಇಂದು ಮುಂಜಾನೆ 5ಗಂಟೆ 45 ನಿಮಿಷಕ್ಕೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಶ್ರಿಯುತರು ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಗೌರವ ಅಧ್ಯಕ್ಷರಾಗಿ, ಉದ್ಯಾವರ ಸಾರ್ವಜನಿಕ ಹಿಂದೂ ರುದ್ರಭೂಮಿಯ ಸಾರ್ವಜನಿಕ ಪ್ರತಿಷ್ಠಾನದ ನಿರ್ವಹಣಾ ಅಧ್ಯಕ್ಷರಾಗಿ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಶ್ರೀ ಬೃಹ್ಮಲಿಂಗೇಶ್ವರ ದೇವಸ್ಥಾನ ಕೇದಾರ ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಗುಡ್ಡೆಯಂಗಡಿ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಹಿಂದೂ ಹಿರಿಯ ಪ್ರಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾಗಿ, ಪಿತ್ರೋಡಿ ಶ್ರೀ ಮಹಾಕಾಳಿ ಶನೀಶ್ವರ ದೇವಸ್ಥಾನ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ, ಉದ್ಯಾವರ ಸ್ಪೋರ್ಟ್ಸ್ ಕ್ಲಬ್ ತುಳುವರ ಬಳಗ ಮೇಲ್ಪೇಟೆ ಇದರ ನಿರ್ದೇಶಕರಾಗಿ, ಉಡುಪಿಯ ಭಕ್ತವೃಂದ ಮತ್ತು ರಿಕ್ಷಾ ಚಾಲಕರ ಗಣೇಶೋತ್ಸವ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ, ಉಡುಪಿ ಅಟೋ ರಿಕ್ಷಾ ಸಹಕಾರಿ ಸಂಘದ ನಿರ್ದೇಶಕರಾಗಿ, ರೇಲ್ವೆ ಸಲಹಾ ಸಮಿತಿಯ ಸದಸ್ಯರಾಗಿ, ಪ್ರಸ್ತುತ ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಅಲ್ಲದೇ ಇನ್ನೂ ಹತ್ತಾರು ಸಂಘಟನೆಯ ಸಲಹೆಗಾರರಾಗಿ ಸದಾ ಜನರ ಸಮಸ್ಯೆಗೆ ತನ್ನನು ತೊಡಗಿಸಿಕೊಂಡಿದ್ದ, ಶ್ರೀಯುತರ ತಂದೆ ದಿವಂಗತ ರಾಮ ಶೆಟ್ಟಿಗಾರ್, ತಾಯಿ ದಿವಂಗತ ಅಪ್ಪಿ ಶೆಟ್ಟಿಗಾರ್, ಪತ್ನಿ ಶ್ರೀಮತಿ ರಾಧಾ ಮಂಜುನಾಥ್, ಮಗಳು ಕುಮಾರಿ ಸರ್ವಮಂಗಳ ಮತ್ತು ನಾಲ್ಕು ಸೋದರರು, ಮೂರು ಸೋದರಿಯರನ್ನು, ಅಲ್ಲದೇ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಮಸ್ತ ಕಾರ್ಯಕರ್ತರನ್ನು ಬಿಟ್ಟು ಅಗಲಿದ್ದಾರೆ.

ಶ್ರೀಯುತರ ಮಂಜುನಾಥ ಉದ್ಯಾವರ ರವರ ಅಂತ್ಯ ಸಂಸ್ಕಾರವು ನಾಳೆ ದಿನಾಂಕ 30 ರಂದು ಬೆಳಿಗ್ಗೆ 11.30ಕ್ಕೆ ಉದ್ಯಾವರದ ಸಾರ್ವಜನಿಕ ರುದ್ರಭೂಮಿ ಮುಕ್ತಿಧಾಮದಲ್ಲಿ ಜರಗಲಿದೆ. ಬೆಳಿಗ್ಗೆ 10.30 ರಿಂದ ಉದ್ಯಾವರದ ಸಾರ್ವಜನಿಕ ಕ್ರೀಡಾಂಗಣದಲ್ಲಿ ಸಾರ್ವಜನಿಕರ ವೀಕ್ಷಣೆ ಅವರ ಪಾರ್ಥೀವ ಶರೀರವನ್ನು ಇಡಲಾಗುವುದು. ಅಲ್ಲದೇ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶೃದ್ಧಾಂಜಲಿ ಸಭೆ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.

ದಿವಂಗತರ ನಿಧನಕ್ಕೆ ಎ‌ಐಸಿಸಿ ಪ್ರಧಾನ ಕಾರ್ಯದರ್ಶಿ ಓಸ್ಕರ್ ಫೆರ್ನಾಂಡಿಸ್, ಶ್ರಿಮತಿ ಬ್ಲೋಸಮ್ ಫೆರ್ನಾಂಡಿಸ್, ಉಡುಪಿ ಮಾಜಿ ಶಾಸಕರಾದ ಯು.ಆರ್ ಸಭಾಪತಿ, ಕೇಂದ್ರ ಸಚಿವ ಎಂ. ವೀರಪ್ಪ ಮೊಲಿ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ವಿಧಾನ ಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಅಭಯಚಂದ್ರ ಜೈನ್, ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಸದಸ್ಯರಾದ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಚಂದ್ರ ಶೆಟ್ಟಿ, ಎ‌ಐಸಿಸಿ ಕಾರ್ಯದರ್ಶಿ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಮಾಜಿ ಸಚಿವ ವಸಂತ ವಿ. ಸಾಲ್ಯಾನ್, ವಿಧಾನ ಸಭಾ ಸದಸ್ಯರಾದ ಗೋಪಾಲ ಭಂಡಾರಿ, ಮಾಜಿ ಶಾಸಕ ಪಿ. ಬಸವರಾಜ್, ಉಡುಪಿ (ನಗರ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಸೇವಾದಳ ಮುಖ್ಯಸಂಘಟಕರಾದ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಸದಸ್ಯ ದಿನೇಶ್ ಪುತ್ರನ್, ಉದ್ಯಾವರ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ತಾಲೂಕು ಪಂಚಾಯತ್ ಸದಸ್ಯರಾದ ಗಿರೀಶ್ ಕುಮಾರ್ ಉದ್ಯಾವರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹಮೂರ್ತಿ, ಡಿಸಿಸಿ ಸದಸ್ಯ ಸಿ. ರಘುಪತಿ ಬಲ್ಲಾಳ್, ಉಡುಪಿ ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಬಿ. ರಮಾನಂದಮೂರ್ತಿ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಯತೀಶ್ ಕರ್ಕೇರಾ, ತಾ.ಪ೦ ಮಾಜಿ ಸದಸ್ಯೆ, ಮಣಿಪಾಲ ಪವರ್ ಮಹಿಳಾ ಉದ್ಯಮಿದಾರರ ಸ೦ಘ ಅಧ್ಯಕ್ಷೆ ಶ್ರೀಮತಿ ಸಾಧನಾ ಕಿಣಿ, ಶ್ರೀಮತಿ ಇ೦ದಿರಾ ಸುವರ್ಣ, ಲಕ್ಷ್ಮೀಕಾ೦ತ್ ಬೆಸ್ಕೂರು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹರೀಶ್ ಕಿಣಿ ಮೊದಲಾದವರು ಶ್ರಿಯುತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾತ್ರವಲ್ಲದೇ ಗಲ್ಫ್ ಕನ್ನಡಿಗ ಡಾಟ್ ಕಾ೦ ಬಳಗವು ಇವರ ನಿಧನಕ್ಕೆ ಸ೦ತಾಪವನ್ನು ವ್ಯಕ್ತ ಪಡಿಸಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2012-08-29

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri