ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಅಪೌಷ್ಟಿಕತೆಗೆ ಹುಡುಗಿಯರ ಸೌಂದರ್ಯ ಪ್ರಜ್ಞೆಯೇ ಕಾರಣ' ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡ ಮೋದಿ

ಹೊಸದಿಲ್ಲಿ: ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ. ರಾಜ್ಯದಲ್ಲಿ ಹೆಚ್ಚಿರುವ ಅಪೌಷ್ಟಿಕತೆಗೆ ಯುವತಿಯರ ಸೌಂದರ್ಯ ಪ್ರಜ್ಞೆಯೇ ಕಾರಣ ಎನ್ನುವ ಮೂಲಕ ಮೋದಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಅಮೆರಿಕದ ದಿನಪತ್ರಿಕೆ ವಾಲ್‌ ಸ್ಟ್ರೀಟ್‌ ಜರ್ನಲ್‌ಗೆ ಸಂದರ್ಶನ ನೀಡಿದೆ ಮೋದಿ ಅಪೌಷ್ಟಿಕತೆ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ಧಾರೆ. ಗುಜರಾತ್‌ನಲ್ಲಿ ಹೆಚ್ಚಿರುವ ಅಪೌಷ್ಟಿಕೆ ತಡೆಯಲು ಎದುರಾಗಿರುವ ಸವಾಲುಗಳ ಕುರಿತು ಮಾತನಾಡುತ್ತಿದ್ದ ಮೋದಿ, ’ ಗುಜರಾತ್‌ ಸಸ್ಯಾಹಾರ ಪ್ರಧಾನ ರಾಜ್ಯ.ಜೊತೆಗೆ, ಮಧ್ಯಮ ವರ್ಗದವರೇ ಹೆಚ್ಚಿರುವ ರಾಜ್ಯ. ಇಲ್ಲಿನ ಮಧ್ಯಮ ವರ್ಗ, ಆರೋಗ್ಯಕ್ಕಿಂತ ಸೌಂದರ್ಯದ ಬಗ್ಗೆಯೇ ಹೆಚ್ಚು ಕಾಳಜಿ ವಹಿಸುತ್ತದೆ. ತಾಯಿ ಹಾಲು ಕುಡಿಯುವಂತೆ ಮಗಳಿಗೆ ಹೇಳಿದರೆ, ಅವಳು ತಾಯಿಯೊಂದಿಗೆ ಜಗಳವನ್ನೇ ತೆಗೆಯುತ್ತಾಳೆ. ಹಾಲು ಕುಡಿದರೆ ದೇಹದಲ್ಲಿ ಕೊಬ್ಬು ಹೆಚ್ಚುತ್ತದೆ ಎನ್ನುವುದೇ ಇದಕ್ಕೆ ಕಾರಣ’ ಎಂದು ಮೋದಿ ಅಪೌಷ್ಟಿಕೆಯ ಕಾರಣವನ್ನು ವಿಶ್ಲೇಷಿಸಿದ್ದಾರೆ.

ಇತ್ತೀಚಿನ ಸರಕಾರಿ ವರದಿಯ ಪ್ರಕಾರ, ಗುಜರಾತ್‌ನಲ್ಲಿರುವ ಐದು ವರ್ಷದೊಳಗಿನ ಬಹುತೇಕ ಮಕ್ಕಳು ತಮ್ಮ ವಯಸ್ಸಿಗಿಂತ ಕಡಿಮೆ ಬೆಳವಣಿಗೆ ಹೊಂದಿದ್ಧಾರೆ. ಅಥವಾ ಇನ್ನೊಂದು ಅರ್ಥದಲ್ಲಿ, ಅವರ ಬೆಳವಣಿಗೆ ಕುಂಠಿತವಾಗಿದೆ. ಮೋದಿ ಹೇಳುವ ಪ್ರಕಾರ, ಮಕ್ಕಳ ’ಫಿಗರ್‌ ಕಾನ್ಷಿಯಸ್‌’ ಅವರ ಬೆಳವಣಿಗೆ ಕುಂಠಿತವಾಗಲು ಕಾರಣ. ಆದರೆ ಐದು ವರ್ಷದ ಹೆಣ್ಣು ಮಗು ಹೇಗೆ ತಾನೆ ಸೌಂದರ್ಯ ಪ್ರಜ್ಞೆ ಹೊಂದಿರಲು ಸಾಧ್ಯ? ಎಂಬುದು ಎಲ್ಲರ ಪ್ರಶ್ನೆ. ಇದೇ ವಿವಾದದ ಒಟ್ಟು ಸಾರ.

ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಇದೊಂದು ’ಗ್ರೇಟ್‌ ಜೋಕ್‌’ಎಂದಿದೆ. ಅಷ್ಟೇ ಅಲ್ಲದೆ ಇದು ಇಡೀ ಮಹಿಳಾ ಸಮುದಾಯಕ್ಕೇ ಮಾಡಿರುವ ಅವಮಾನ ಎಂದು ಹೇಳಿದೆ. ಅಲ್ಲದೆ ಹೇಳಿಕೆ ವಾಪಸ್‌ ಪಡೆಯುವಂತೆಯೂ ಒತ್ತಾಯಿಸಿದೆ.

ಕಾಂಗ್ರೆಸ್‌ ಪ್ರತಿಕ್ರಿಯೆಗೆ ಬಿಜೆಪಿ ಕೂಡ ತಿರುಗೇಟು ನೀಡಿದ್ದು, ಮೋದಿ ಕಂಡರೆ ಕಾಂಗ್ರೆಸ್‌ಗೆ ಭಯ. ಅದಕ್ಕಾಗಿ ಮೋದಿ ಹೆಸರು ಕೇಳಿದರೆ ಅಥವಾ ಅವರ ಮಾತುಗಳನ್ನು ಕೇಳಿದರೆ ಸಾಕು ಟೀಕಿಸಲು ಆರಂಭಿಸುತ್ತದೆ ಎಂದು ವ್ಯಂಗ್ಯವಾಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಮೋದಿ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : vk
ವರದಿಗಾರರು : ”ಆಶ್ವಿನಿ’
ಪ್ರಕಟಿಸಿದ ದಿನಾಂಕ : 2012-08-30

Tell a Friend

ಪ್ರತಿಸ್ಪಂದನ
ಸಾಮಾನ್ಯ, ಉಡುಪಿ
2012-08-30
ಅಪೌಷ್ಟಿಕತೆಗೆ ಕಾರಣ ಅತಿಯಾದ Industry ಎಂದು ಹೇಳಲು ಧೈರ್ಯ ಬೇಕು ಅಲ್ಲವೇ? ಈ ಕೈಗಾರಿಕೊದ್ಯಮಗಳಿಂದ ಕೃಷಿ ಭೂಮಿ ಕಳೆದುಕೊಂಡ ರೈತ ಮಧ್ಯಮ ವರ್ಗದಲ್ಲಿದ್ದಾನೆಂದರೆ ಹಾಸ್ಯಾಸ್ಪದ ಅಲ್ಲವೇ? ಇವ ದೇಶದ ಚುಕ್ಕಾಣಿ ಹಿಡಿದಲ್ಲಿ ಜನ ಗೆಡ್ಡೆ ಗೆಣಸು ಮತ್ತು ತರಕಾರಿ ಮಾತ್ರ ತಿನ್ನಿ ಎಂದು ಕಾನೂನು ಜಾರಿಗೊಳಿಸುವುದನ್ನು ತಳ್ಳಿ ಹಾಕುವಂತಿಲ್ಲ ಮತ್ತು ಹೋಂ ಸ್ಟೇ ಪ್ರಕರಣಗಳು ನಿಮಿಷಕ್ಕೊಂದು ನಡೆಯುವುದನ್ನು ಅಲ್ಲಗೆಳೆಯುವಂತಿಲ್ಲ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ: ಕಠಿಣ ಕ್ರಮ ತೆಗೆದುಕೊಳ್ಳಲು ಶಿಂಧೆ ಆಗ್ರಹ
»ನಾಳೆ ಏರ್ ಇಂಡಿಯಾಕ್ಕೆ ಡ್ರೀಮ್‌ಲೈನರ್
»ವಿಶ್ವದ ಅತ್ಯಂತ ದ್ವೇಷಿಸುವ ನಗರಗಳ ಸಾಲಿಗೆ ದಿಲ್ಲಿ
»ಮನಮೋಹನ್ ಸಿಂಗ್ ದುರಂತ ನಾಯಕ: ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನಿಗೆ ಪ್ರಧಾನಿ ಕಾರ್ಯಾಲಯ ತರಾಟೆ
»ಮಹಿಳಾ ಸಬಲೀಕರಣಕ್ಕೆ ಎನ್‌ಜಿಒದಿಂದ ‘ಉಮ್ಮೀದ್ ಕಿ ರಿಕ್ಷಾ’ ಯೋಜನೆಗೆ ಚಾಲನೆ
»ಸೊಹ್ರಾಬುದ್ದಿನ್ ನಕಲಿ ಎನ್‌ಕೌಂಟರ್ ಪ್ರಕರಣ: ಸಮಸ್ಯೆಯ ಸುಳಿಯಲ್ಲಿ ಮತ್ತಷ್ಟು ಪೊಲೀಸರು, ರಾಜಕಾರಣಿಗಳು
»ಪ.ಬಂಗಳಾದಲ್ಲಿ ದಿಢೀರ್ ಪ್ರವಾಹ: ಕೊಚ್ಚಿ ಹೋದ ಬಸ್, 100 ಮಂದಿ ನಾಪತ್ತೆ
»ಶಾಕಿಂಗ್ ರ್ಯಾಗಿಂಗ್‌ ವಿಡಿಯೋ: ಕೇಸ್‌ ದಾಖಲಿಸದ ಪೊಲೀಸ್‌
»ಸೆ 26ರಿಂದ ಯುಎಸ್ ವೀಸಾ ಶುಲ್ಕ ಪಾವತಿ ಸರಳ
»‘ಕೋಲ್’ಹಲ: ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ
»ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೂರು ಪ್ರತ್ಯೇಕ ತಂಡಗಳಿಂದ ತನಿಖೆ; ಆರು ಮಂದಿಯ ಬಂಧನ
»ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
»ಎಸ್ಸಿ-ಎಸ್ಟಿ ಭಡ್ತಿ ಮೀಸಲು ಮಸೂದೆ ಮಂಡನೆ:ರಣರಂಗವಾದ ರಾಜ್ಯಸಭೆ
»ಪ್ರಧಾನಿ ಸಿಂಗ್ ದುರಂತ ನಾಯಕ: ವರದಿಗೆ ಗಂಟುಬಿದ್ದ ವಾಷಿಂಗ್ಟನ್ ಪೋಸ್ಟ್
»ಹಿರಿಯರ ಕಿತ್ತಾಟ:ಸದಸ್ಯರಿಂದಲೇ ಮೇಲ್ಮನೆ ಗೌರವ ಮಣ್ಣುಪಾಲು| ಎಸ್‌ಪಿ-ಬಿ‌ಎಸ್‌ಪಿ ಸಂಸದರ ನಡುವೆ ಗುದ್ದಾಟ
»ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
»23 ಭಾರತೀಯ ನಾವಿಕರಿದ್ದ 'ಅಬುಧಾಬಿ ಸ್ಟಾರ್‌' ನೌಕೆ ಅಪಹರಣ: ನೈಜೀರಿಯಾ ನೌಕಾಪಡೆ ಕಾರ್ಯಾಚಾರಣೆ - ನಾವಿಕರ ಸುರಕ್ಷಿತ ಬಿಡುಗಡೆ
»ಶ್ರೀಲಂಕಾ ಪ್ರವಾಸಿಗರ ಮೇಲಿನ ದಾಳಿಗೆ ಜಯಾ ಹೊಣೆ: ಕರುಣಾನಿಧಿ
»ಬಳ್ಳಾರಿ ಲೋಕಸಭಾ ಕ್ಷೇತ್ರ: ಸೆ.15ರಂದು ಮರು ಮತ ಎಣಿಕೆ
»ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 52ಮಂದಿ ಬಲಿ, 70ಗಾಯಾಳು
»ಉದ್ಬವ್ ಹೇಳಿಕೆಯನ್ನು ತಳ್ಳಿ ಹಾಕಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ
»ರಾಜ್ಯಸಭೆಯಲ್ಲಿ ಕೈ ಕೈ ಮಿಲಾಯಿಸಿದ ಸಂಸದರು
»ತೆಲಂಗಾಣ ರಾಜ್ಯ ರಚನೆಗೆ ಬಿಜೆಪಿ ಬದ್ಧ: ಸುಷ್ಮಾ
»ಭಾರತದ 'ಮೌನ' ಪ್ರಧಾನಿ ದುರಂತ ವ್ಯಕ್ತಿ: ವಾಷಿಂಗ್ಟನ್ ಪೋಸ್ಟ್
»ಪ್ರಜಾಪತಿ ನಕಲಿ ಎನ್‌ಕೌಂಟರ್ : ಅಮಿತ್‌ಶಾ ಸಹಿತ 20 ಮಂದಿಯ ವಿರುದ್ಧ ಆರೋಪ ಪಟ್ಟಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri