ಸೋಮವಾರ, 09-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಕಿರಿಯ-ಹಿರಿಯ ವಕೀಲರ ಮಧ್ಯೆ ಸಾಮರಸ್ಯವಿರಲಿ: 5.19 ಕೋಟಿ ರೂ. ವೆಚ್ಚದ ವಕೀಲ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಸಚಿವ ಉದಾಸಿ

ಮಂಗಳೂರು,ಸೆ.1:ಹಿರಿಯ ಮತ್ತು ಕಿರಿಯ ವಕೀಲರ ನಡುವೆ ಸಾಮರಸ್ಯವಿದ್ದಲ್ಲಿ ಕಕ್ಷಿದಾರರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸಲು ಸಹಕಾರಿಯಾಗುತ್ತದೆ.ಇದು ನ್ಯಾಯದಾನ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಎಂ.ಉದಾಸಿ ವಕೀಲರಿಗೆ ಸಲಹೆ ನೀಡಿದ್ದಾರೆ.ಕೊಡಿಯಾಲ್‌ಬೈಲ್‌ನಲ್ಲಿ ಇಂದು ನೂತನ ವಕೀಲ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.


ನ್ಯಾಯದಾನವಿಂದು ತ್ವರಿತವಾಗುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ನ್ಯಾಯಾಂಗದ ಬಗ್ಗೆ ವಿಶ್ವಾಸ,ಅಭಿಮಾನ ಹೆಚ್ಚುತ್ತಿದೆ.ಈ ಕಾರಣ ದಿಂದ ಇಂದು ನ್ಯಾಯಾಲಯಕ್ಕೆ ಬರುವವರ ಸಂಖ್ಯೆಯೂ ಹೆಚ್ಚುತ್ತಿದೆ.ಇಂತಹ ಸಂದರ್ಭದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವುದು ಸರಕಾರದ ಜವಾಬ್ಧಾರಿ. ಕಳೆದ ನಾಲ್ಕು ವರ್ಷಗಳಲ್ಲಿ ತಮ್ಮ ಸರಕಾರವು ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದೆ.ದ.ಕ.ಜಿಲ್ಲೆಗೆ ವಕೀಲರ ಭವನ,ವಕೀಲರ ಚೇಂಬರ್,ವಕೀಲರ ನಿವೇಶನ ಸೇರಿ ದಂತೆ ಒಟ್ಟು 53ಕೋಟಿ ರೂ.ಗಳ ಅನುದಾನ ವನ್ನು ನೀಡಲಾಗಿದೆ ಎಂದವರು ಹೇಳಿದರು. ನೂತನ ವಕೀಲರ ಭವನ ನಿರ್ಮಾಣಕ್ಕೆ ಎರಡು ವರ್ಷಗಳ ಗಡುವು ನೀಡಲಾಗಿದ್ದು,ಆದಷ್ಟು ಶೀಘ್ರವಾಗಿ ಟೆಂಡರ್ ಕರೆದು ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಉದಾಸಿ ಭರವಸೆ ನೀಡಿದರು.


ಲೋಕ ಅದಾಲತ್‌ನಲ್ಲಿ 1,61,962 ವ್ಯಾಜ್ಯಗಳ ಇತ್ಯರ್ಥ
2011-12ನೆ ಸಾಲಿನಲ್ಲಿ ಲೋಕ ಅದಾಲತ್ ಮೂಲಕ ರಾಜ್ಯದಲ್ಲಿ 1,61,962 ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಲಾಗಿರುವುದು ನ್ಯಾಯಾಂಗ ವ್ಯವಸ್ಥೆಯಲ್ಲಿ ಆಗಿರುವ ಬದಲಾವಣೆಗೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅಭಿಪ್ರಾಯಿಸಿದರು.

ರಾಜ್ಯ ಸರಕಾರದ ಅಪೆಂಡಿಕ್ಸ್ ಇಯಡಿ ಈಗಾಗಲೇ 53ಕೋಟಿ ರೂ.ಗಳನ್ನು ಮಂಗಳೂರು ಸೇರಿದಂತೆ ಈ ವರ್ಷ ರಾಜ್ಯದ ವಿವಿಧ ಕಾಮಗಾರಿಗಳಿಗೆ 2,125 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ವಕೀಲರ ಬೇಡಿಕೆಯಂತೆ ಇ- ಲೈಬ್ರರಿಯನ್ನು ಒದಗಿಸುವ ಬಗ್ಗೆಯೂ ಸರಕಾರ ಕ್ರಮ ಕೈಗೊಳ್ಳಲಿದೆ. ನ್ಯಾಯಾಲಯಗಳಲ್ಲಿ ದಾವೆಗಳು ಹೆಚ್ಚುತ್ತಿದ್ದು,ಶೀಘ್ರ ನ್ಯಾಯ ಇತ್ಯರ್ಥ ವಕೀಲರ ಜವಾಬ್ದಾರಿ ಯಾಗಬೇಕು.ಜನಸಾಮಾನ್ಯರಿಗೆ ನ್ಯಾಯಾಲಯದ ಮೇಲೆ ವಿಶ್ವಾಸ ಮೂಡುವಲ್ಲಿ ವಕೀಲರ ಪಾತ್ರ ಕೂಡಾ ಮಹತ್ವದ್ದು ಎಂದವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೈಕೋರ್ಟ್ ನ್ಯಾಯಾಧೀಶ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ನ್ಯಾಯಮೂರ್ತಿ ಡಾ.ಕೆ.ಭಕ್ತವತ್ಸಲ ಮಾತನಾಡಿ,ವಕೀಲರು ವಿನಾಕಾರಣ ಕಾಲಹರಣ ಮಾಡದೆ ತಮ್ಮ ವೃತ್ತಿಯಲ್ಲಿ ಬದ್ಧತೆಯೊಂದಿಗೆ ತಾವು ಕೈಗೆತ್ತಿಕೊಂಡ ಪ್ರಕರಣ ಶೀಘ್ರವಾಗಿ ತೀರ್ಮಾನಕ್ಕೆ ಬರುವಲ್ಲಿ ಸಕ್ರಿಯರಾಗಬೇಕೆಂದು ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೈಕೋರ್ಟ್ ನ್ಯಾಯಾಧೀಶ ನ್ಯಾ.ಕೆ.ಎಲ್. ಮಂಜುನಾಥ್,ಹೆಚ್ಚುವರಿ ಅಡ್ವಕೇಟ್ ಜನರಲ್ ಕೆ.ಎಂ.ನಟರಾಜ್,ಶಾಸಕ ಯೋಗೀಶ್ ಭಟ್ ಮಾತನಾಡಿದರು.ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಅಶೋಕ್‌ಜಿ.ನಿಜಗಣವರ್,ಶಾಸಕ ಮೋನಪ್ಪ ಭಂಡಾರಿ,ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸದಸ್ಯ ಪದ್ಮ ಪ್ರಸಾದ್ ಹೆಗ್ಡೆ, ರವೀಂದ್ರನಾಥ ರೈ ಬಿ.,ರಂಗನಾಥ ಕಿಣಿ ಉಪಸ್ಥಿತರಿದ್ದರು.ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಣೈ ವಂದಿಸಿದರು.

5.19 ಕೋಟಿ ರೂ. ವೆಚ್ಚದಲ್ಲಿ ವಕೀಲರ ಭವನ

ಕೊಡಿಯಾಲ್‌ಬೈಲ್‌ನ ಸೈಂಟ್ ಅಲೋಶಿಯಸ್ ಕಾಲೇಜು ಸಮೀಪದ 25 ಸೆಂಟ್ಸ್ ಜಾಗದಲ್ಲಿ ಐದು ಮಹಡಿಗಳ ಕಟ್ಟಡವು 5 ಕೋಟಿ 19 ಲಕ್ಷ ರೂ. ವೆಚ್ಚದಲ್ಲಿ ತಲೆ ಎತ್ತಲಿದೆ.ಕಟ್ಟಡದ ಎರಡು ಅಂತಸ್ತುಗಳಲ್ಲಿ 35ಕ್ಕೂ ಅಧಿಕ ಕಾರ್ ಪಾರ್ಕಿಂಗ್ ವ್ಯವಸ್ಥೆ,ಮೇಲಿನ ಅಂತಸ್ತುಗಳಲ್ಲಿ ಸಂಘದ ಮುಖ್ಯ ಸಭಾಂಗಣ,ಮಹಿಳಾ ವಕೀಲರಿಗೆ ಪ್ರತ್ಯೇಕ ಸಭಾಂಗಣ, ಗ್ರಂಥಾಲಯ, ಕ್ಯಾಂಟೀನ್,400ಮಂದಿ ಆಸೀನರಾಗಬಲ್ಲ ಕಾರ್ಯಕ್ರಮ ನಡೆಸಲು ಯೋಗ್ಯವಾದ ಸಭಾಂಗಣ,ಪ್ರತಿ ಮಹಡಿಯಲ್ಲಿ ಗಂಡಸರು, ಹೆಂಗಸರಿಗೆ ಪ್ರತ್ಯೇಕ ಶೌಚಾಲಯ,ಬದಲಿ ಕೋಣೆಗಳು,ಲಿಫ್ಟ್, ಕೋರ್ಟ್ ಬಳಿಯಿಂದ ಒಳ ಪ್ರವೇಶಕ್ಕೆ ರ್ಯಾಂಪ್ ಮತ್ತು ಇತರ ಆಧುನಿಕ ವ್ಯವಸ್ಥೆಯನ್ನು ವಕೀಲರ ಭವನ ಹೊಂದಲಿದೆ.ಲೋಕೋಪಯೋಗಿ ಇಲಾಖೆಯ ಮೂಲಕ ಕಟ್ಟಡದ ರೂಪುರೇಷೆ ನೀಡಲಾಗುತ್ತಿದ್ದು,ಕಟ್ಟಡಕ್ಕೆ ರಾಜ್ಯ ಸರಕಾರ ಈಗಾಗಲೇ ಅಪೆಂಡಿಕ್ಸ್ ಇನಲ್ಲಿ 6 ಕೋಟಿ ರೂ. ಮೀಸಲಿರಿಸಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : varthabharthi
ವರದಿಗಾರರು : ಕರ್ನಾಟಕ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-02

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಕೊಂಕಣಿ ಕವಿ ಜೆ.ಬಿ.ಸಿಕ್ವೇರಾ ವಿಧಿವಶ
»‘ಬ್ಯಾರಿ ಗಾದೆರೊ ಚೆಲ್ತ್’ ಕಾರ್ಯಕ್ರಮ
»ಪಶು ಸಂಗೋಪನಾ ಇಲಾಖೆಯಿಂದ ಎಣಿಕೆದಾರರು, ಮೇಲ್ವಿಚಾರಕರಿಗೆ ತರಬೇತಿ
»ಪೊಲೀಸ್ ವ್ಯವಸ್ಥೆ ಎಬಿವಿಪಿಯೊಂದಿಗೆ ಶಾಮೀಲು: ಬೆಳ್ಳಾರೆ ಕಾಲೇಜ್ ವಿದ್ಯಾರ್ಥಿನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆಯಲ್ಲಿ ಜಿ. ರಾಜಶೇಖರ್
»‘ವೈಟ್‌ಸ್ಟೋನ್ ಶಮಾ ಕೋರ್ಟ್’ ವಸತಿ ಸಮುಚ್ಚಯ ಉದ್ಘಾಟನೆ
»ವಿಶ್ವಾಸದ ಮನೆಗೆ ಕಾನೂನುಬದ್ಧ ಪರವಾನಿಗೆ ನೀಡಲು ಮನವಿ
»ಕರಂದಕ್ಕಾಡ್: ಸಾವಯವ ಫಾರ್ಮ್ ಸ್ಕೂಲ್‌ಗೆ ಶಿಲಾನ್ಯಾಸ
»ಅಂತಾರಾಷ್ಟ್ರೀಯ ಸಾಧಕಿಗೆ ಪ್ಲಾಸ್ಟಿಕ್ ನಿಷೇಧದ ಆತಂಕ!
»ಮೆಲ್ಕಾರ್-ರಂಗೇಲು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
»ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
»ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
»ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
»ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
»ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
»ಸೆ.9.,ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಷ - ಮೈಸೂರು ವಿಭಾಗೀಯ ಮಟ್ಟದ ವಿಕ್ಷಕ,ಸಚಿವ ಕೆ.ಎಚ್ ಮುನಿಯಪ್ಪರಿಂದ ಮಾರ್ಗದರ್ಶನ
»ಸೆ9. ರ೦ದು ಜಿಲ್ಲಾ ಬಿ.ಜೆ.ಪಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಟ್ಲ್ಪಿಂಡಿಯ ಪ್ರಯುಕ್ತ ‘ಆಲಾರೆ ಗೋವಿಂದ’ ಕಾರ್ಯಕ್ರಮ
»ಮಡಿಕೇರಿ ದಸರಾ: ಅದ್ಧೂರಿಯಾಗಿ ಆಚರಿಸಲು ಸಭೆ ನಿರ್ಧಾರ
»ನಕ್ಸಲರಿಗಾಗಿ ಮುಂದುವರಿದ ಕಾರ್ಯಾಚರಣೆ: ಎಎನ್‌ಎಫ್‌ನಿಂದ ವ್ಯಾಪಕ ಕೂಂಬಿಂಗ್; ಅಲೋಕ್‌ಕುಮಾರ್
»ಶಿಕ್ಷಣದ ಹೆಸರಿನಲ್ಲಿ ಭಾವನೆ ಚಿವುಟುವ ಕೆಲಸವಾಗದಿರಲಿ: ಡಾ. ಎಚ್. ಮಾಧವ ಭಟ್
»ಗುರುವಿನಲ್ಲಿ ಮುಗ್ಧ್ದತೆ, ಅಂತಃಕರಣವಿರಬೇಕು: ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ
»ಶಿಕ್ಷಣ ಸಾಮೂಹಿಕ ಜವಾಬ್ದಾರಿ: ಡಾ.ಬಿ.ಜೆ. ಸುವರ್ಣ
»ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
»ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
»ಕುಂದಾಪುರ: ಶಿಕ್ಷಕ -ಶಿಕ್ಷಣ ಸಪ್ತಾಹ ಉದ್ಘಾಟನೆ
»ಮಕ್ಕಳ ಮೇಲೆ ವೌಲ್ಯಗಳ ಹೇರಿಕೆ ಬೇಡ: ಡಾ.ಮಹಾಬಲೇಶ್ವರ ರಾವ್ (updated news)

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri