ಶುಕ್ರವಾರ, 06-12-2019
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾದಾತ ಕನ್ನಡಿಗನೇ..?
Latest news item ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
Latest news item ಶಾಸಕ ರಘುಪತಿ ಭಟ್‌ ರಿಗೆ ಬೆದರಿಕೆ ಕರೆ
Latest news item ಕಡೇಶ್ವಾಲ್ಯದಲ್ಲಿ ನರೇಗಾದಡಿ ಸಾಲು ಮರ ಗಿಡ ನೆಡುವ ಕಾಮಗಾರಿಗೆ ಚಾಲನೆ
Latest news item ಖ್ಯಾತ ಕಲಾವಿದ ನೆಬ್ಬೂರು ನಾರಾಯಣ ಭಾಗವತರಿಗೆ ದೇರಾಜೆ ಪ್ರಶಸ್ತಿ
Latest news item ದ.ಕ.ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ
Latest news item ಅಂದು ಸ್ವಾತಂತ್ರಕ್ಕಾಗಿ... ಇಂದು ತುಂಡು ಭೂಮಿಗಾಗಿ!: ಕರುಣಾಕರ ಉಚ್ಚಿಲ್‌ರ ಮುಗಿಯದ ಹೋರಾಟ
Latest news item ಶಿರೂರು: ‘ಗ್ರೀನ್ ವ್ಯಾಲಿ’ಯಲ್ಲಿ ಶಿಕ್ಷಕರ ದಿನಾಚರಣೆ
Latest news item ಕುದಿ ವಸಂತ ಶೆಟ್ಟಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನಿಸಿದ ರಾಷ್ಟ್ರಪತಿ
Latest news item ಬಿಲ್ಲವ ಜಾಗೃತಿ ಬಳಗದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ
Latest news item ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
Latest news item ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
Latest news item ವಿದ್ಯಾರ್ಥಿನಿ ಮೇಲಿನ ಎಬಿವಿಪಿ ಹಲ್ಲೆ ಖಂಡಿಸಿ ಬೆಳ್ಳಾರೆಯಲ್ಲಿ ಸಿಎಫ್‌ಐ ಪ್ರತಿಭಟನೆ
Latest news item ಹೆಚ್ಚಾಯ್ತು ಸಿಂಗ್ ಸಂಪುಟದ ಕುಬೇರರ ಸಂಪತ್ತು: ರಾಜೀವ್ ಶುಕ್ಲಾ ಸಂಪತ್ತಿನಲ್ಲಿ ಗಣನೀಯ ಏರಿಕೆ, ಖರ್ಗೆ, ಕೃಷ್ಣ ಕೋಟ್ಯಧಿಪತಿಗಳು, ಮೊಯ್ಲಿ ಲಕ್ಷಾಧೀಶ್ವರ... ಪತ್ನಿ ಕೋಟ್ಯಧೀಶೆ
Latest news item ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
Latest news item ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ
Latest news item ನಕ್ಸಲ್ ನಿಗ್ರಹ ಪಡೆ ಗುಂಡಿಗೆ ನಕ್ಸಲ್ ಬಲಿ
Latest news item



 

 
ಲೋಕಾಯುಕ್ತ ಕೋರ್ಟಿನಲ್ಲಿ ಯಡಿಯೂರಪ್ಪಗೆ ಆಘಾತ; ಅವರು ಮತ್ತು ಪುತ್ರರಿಗೆ ಸಮನ್ಸ್

ಲೋಕಾಯುಕ್ತ ಜಡ್ಜ್ ನ್ಯಾ.ಸುಧೀಂದ್ರರಾವ್

ಬೆಂಗಳೂರು, 22: ಭದ್ರಾ ಮೇಲ್ದಂಡೆ ಯೋಜನೆ ಅಕ್ರಮ ಪ್ರಕರಣ ಸಂಬಂಧ ಎರಡನೆಯ ಬಾರಿಯೂ ಬಿ ರಿಪೋರ್ಟ್ ಸಲ್ಲಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಕರಣದಿಂದ ಮುಕ್ತಗೊಳಿಸುವ ಲೋಕಾಯುಕ್ತ ಪೊಲೀಸರ ಯತ್ನಕ್ಕೆ ಲೋಕಾಯುಕ್ತ ಕೋರ್ಟ್ ಮರ್ಮಾಘಾತ ನೀಡಿದೆ.

ಇದೇ ವೇಳೆ, ಶಿವಮೊಗ್ಗದಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಅವರಿಗೆ ಖುದ್ದು ಹಾಜರಾಗುವಂತೆ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಸೆ. 25ರಂದು ಇಬ್ಬರೂ ಕೋರ್ಟಿಗೆ ಹಾಜರಾಗಬೇಕೆಂದು ಸಮನ್ಸ್ ನೀಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ ಅಕ್ರಮದ ಸಂಬಂಧ ಲೋಕಾಯುಕ್ತ ಪೊಲೀಸರು ಎರಡನೆಯ ಬಾರಿಯೂ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಲೋಕಾಯುಕ್ತ ಜಡ್ಜ್ ನ್ಯಾ. ಸುಧೀಂದ್ರರಾವ್ ತಿರಸ್ಕರಿಸಿದ್ದಾರೆ. ಸೆ. 22ರಂದು ಕೋರ್ಟಿಗೆ ಹಾಜರಾಗುವಂತೆಯೂ ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದ್ದಾರೆ. ಇದರಿಂದ ಪ್ರಕರಣ ಮತ್ತೊಮ್ಮೆ ಕುತೂಹಲ ಕೆರಳಿಸಿದೆ.

ಈ ಹಿಂದೆಯೂ, ತನಿಖಾ ಪ್ರಗತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾ ಸುಧೀಂದ್ರರಾವ್ ಅವರು, 'ಲೋಕಾಯುಕ್ತ ಎಸ್ ಪಿ ಅವರು ಪೂರ್ವಾಗ್ರಹ ಪೀಡಿತರಾಗಿ ವರದಿ ನೀಡಿದ್ದಾರೆ. ಹಾಗಾಗಿ ಈ ವರದಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ಈ ವರದಿ ಆಧಾರಿಸಿ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲು ಕಷ್ಟ. ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಹೊಸದಾಗಿ ಬಿ ರಿಪೋರ್ಟ್ ಸಲ್ಲಿಸುವಂತೆ ಆದೇಶಿಸಿದ್ದರು.

ಭದ್ರಾ ಮೇಲ್ದಂಡೆ ಯೋಜನೆ ಅಕ್ರಮದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಪಾತ್ರವೇನೂ ಇಲ್ಲ ಎಂದು ಸಾಬೀತುಪಡಿಸುವ ಹೆಚ್ಚುವರಿ ಬಿ ರಿಪೋರ್ಟ್ ಅನ್ನು ಕಳೆದ ತಿಂಗಳು ಸಲ್ಲಿಸಿದ್ದರು. ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಸಲ್ಲಿಸಿದ್ದ ದೂರಿನಂತೆ ಯಡಿಯೂರಪ್ಪ ಅವರ ವಿರುದ್ಧದ ಆರೋಪ ನಿರೂಪಿಸಲು ಯಾವುದೇ ಸಾಕ್ಷ್ಯವಿಲ್ಲವೆಂದು ಲೋಕಾಯುಕ್ತ ಪೊಲೀಸರು ಕಳೆದ ಡಿಸೆಂಬರಿನಲ್ಲಿಯೇ ಹೇಳಿದ್ದರು.

ಲೋಕಾಯುಕ್ತದ ಡೆಪ್ಯುಟಿ ಪೊಲೀಸ್ ಸೂಪರಿಂಟೆಂಡೆಂಟ್ ಗಿರೀಶ್ ಅವರು ಜನವರಿಯಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಸಮರ್ಥಿಸಿಕೊಂಡು 250 ಪುಟಗಳ ಮತ್ತೊಂದು ವರದಿಯನ್ನು ಸಲ್ಲಿಸಿದ್ದರು. ಈ ಮಧ್ಯೆ, ಡೆಪ್ಯುಟಿ ಪೊಲೀಸ್ ಸೂಪರಿಂಟೆಂಡೆಂಟ್ ಗಿರೀಶ್ ಅವರು ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ಬಡ್ತಿ ಪಡೆದಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಧಿಕ ಮೊತ್ತದ ಬಿಡ್ ಸಲ್ಲಿಸಿದ್ದ ಕಂಪನಿಗೆ (RNS Infrastructure) ಟೆಂಡರ್ ಅನುಮೋದಿಸುವ ಮುನ್ನ ಆ ಕಂಪನಿಯಿಂದ ಯಡಿಯೂರಪ್ಪ ಕುಟುಂಬದವರ ಕಂಪನಿಗೆ (Dhavalgiri Properties and Sahyadri Healthcare) ಲಂಚ ಸಂದಾಯವಾಗಿದೆ ಎಂಬುದು ಪ್ರಕರಣದ ಪ್ರಮುಖ ದೂರಾಗಿದೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಒನ್ ಇಂಡಿಯಾ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-04

Tell a Friend

ಪ್ರತಿಸ್ಪಂದನ
Ronald, Udupi
2012-09-05
ಇಂಥಹ ನ್ಯಾಯಾದೀಶರಿಂದ ಮಾತ್ರ ಬ್ರಷ್ಟಚಾರ್ಯ ಕಡಿವಾಣ ಸಾಧ್ಯ! ಎಡ್ಡಿ ಮತ್ತು ಮಗನ್ದಿರಿಗೆ ಸಾವರಾರು ಕೋಟಿ ಚಿತಿಕೆಯಲ್ಲಿ ಲಭ್ಯ! ಪಾಪದ ಜನರ ದುಡ್ಡು!! ಇವರದ್ದು management! ಕರ್ನಾಟಕದ ಜನತೆಯ Bad luck!! ಲಕ್ಷಾಂತರ ಬೆಂಬಲಿಗರು ಇಂಥವರಿಗೆ ಇನ್ನೊಂದು ಕೇಡು!!
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ರೈತರ ಜಮೀನಿಗೆ 35 ಲಕ್ಷ ರೂ. ನಿಗದಿಗೆ ಸಂಪುಟ ಒಪ್ಪಿಗೆ: ಪ್ರತಿಭಟನೆಗೆ ಮಣಿದ ಸರಕಾರ: ಸುದರ್ಶನ್ ಸ್ವಾಗತ
»ಕುಸಿದ ಹುಲಿಕೆರೆ ಸುರಂಗ: ರೈತರಲ್ಲಿ ಆತಂಕ
»ಸಫಾಯಿ ಕರ್ಮಚಾರಿ ಆಯೋಗ ರಚನೆಗೆ ಚಿಂತನೆ: ಸಚಿವ ಸುರೇಶ್‌ಕುಮಾರ್
»ರಾಷ್ಟ್ರೋತ್ಥಾನ ಪರಿಷತ್‌ಗೆ ಭೂಮಿ ಮಂಜೂರು; ಹೈಕೋರ್ಟ್ ತಡೆ
»ನಂದಿನಿಯ ಮೇವು ತಿಂದವರು ಯಾರು?;ತನಿಖೆಗೆ ಆದೇಶ
»ಕೃಷಿ ಭೂಮಿಗೆ 25ರಿಂದ 35 ಲಕ್ಷ ಅನುದಾನ: ಸುರೇಶ್‌ಕುಮಾರ್
»ಗುಟ್ಕಾ ತಿಂದರೂ ತಲಾಖ್ !...
»ಬಿಜೆಪಿ ಭ್ರಷ್ಟಾಚಾರದಲ್ಲೇ ಕಾಲಹರಣ ಮಾಡ್ತಿದೆ: ಕಾಂಗ್ರೆಸ್
»ಅಕ್ರಮ-ಸಕ್ರಮ: ರಾಜ್ಯಪಾಲರನ್ನು ಭೇಟಿ ಮಾಡಿದ ಸಿ‌ಎಂ ಶೆಟ್ಟರ್
»ಅನಧಿಕೃತ ಆಂಗ್ಲ ಮಾಧ್ಯಮ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆಯಿಂದ ಧರಣಿ
»ಪ್ರೌಢಶಿಕ್ಷಣದೊಂದಿಗೆ ಪದವಿ ಪೂರ್ವ ಇಲಾಖೆ ವಿಲೀನ ವಿರೋಧಿಸಿ ಪಿಯು ಕಾಲೇಜು ನೌಕರರ ಸಂಘದಿಂದ ಮನವಿ
»ಜಗತ್ತಿಗೆ ನೋನಿ ಸಸ್ಯ ಔಷಧಿ ಗುಣವುಳ್ಳ ಅಮೂಲ್ಯ ಕೊಡುಗೆ: ಕೃಷಿತಜ್ಞ ಸಚ್ಚಿದಾನಂದ
»ಸಂಗಮೇಶ್ವರಪೇಟೆ ಸಹಕಾರ ಸಂಘಕ್ಕೆ 50 ಲಕ್ಷ ಲಾಭ: ಸಚಿವ ಜೀವರಾಜ್
»ವಿದ್ಯಾರ್ಥಿಗಳು ಹೊಣೆಗಾರಿಕೆಯ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಬೋಪಯ್ಯ
»ಜನರ ಸಮಸ್ಯೆಗೆ ಸ್ಪಂದಿಸದ ರಾಜಕಾರಣಿಗಳು ದ್ರೋಹಿಗಳು: ಮತ್ತೆ ಗುಡುಗಿದ ಈಶ್ವರಪ್ಪ
»ಎರಡನೆ ದಿನಕ್ಕೆ ಕಾಲಿಟ್ಟ ಬಗರ್ ಹುಕುಂ ರೈತರ ಪಾದಯಾತ್ರೆ
» ಕನ್ನಡ ವಿಕಿ ಡಿಂಡಿಮ!...
» ಎಂಜಿ ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಕೊಳ, ಕಾರಂಜಿ ಸೊಬಗು
»ಗಂಗಾವತಿ: ಎಚ್ಚೆತ್ತ ಆರೋಗ್ಯ ಇಲಾಖೆ, ನಗರಸಭೆ ಜಿಲ್ಲೆಯಲ್ಲಿ 270 ಡೆಂಗ್ ಪ್ರಕರಣ ಪತ್ತೆ: 2 ಸಾವು
»ಅಮಾಯಕರಿಗೆ ಉಗ್ರರ ಪಟ್ಟ :ಎ.ಕೆ. ಸುಬ್ಬಯ್ಯ ಆರೋಪ; *ಪೊಲೀಸರ ಮಾಹಿತಿಯ ಕುರಿತಂತೆ ಸಂಶಯ!
»Plea to remove Karnataka judge for alleged sexist remarks
»ಮೈಸೂರು: ಮನೆ ಮನೆಗೆ ಅಂಬೇಡ್ಕರ್'ಗೆ ಚಾಲನೆ
»ಉದ್ಯಾನ ನಗರಿಯಲ್ಲಿ ನಕಲಿ ವೈದ್ಯರು: ರಹಸ್ಯ ಕಾರ್ಯಾಚರಣೆಯಲ್ಲಿ ವಿವರ ಬಯಲು
»ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ವಿದೇಶಕ್ಕೆ ಹಾರಲು ಮತ್ತೊಂದು ತಂಡ ತಯಾರಿ: 16 ಶಾಸಕರು, 7 ಅಧಿಕಾರಿಗಳ ವಿದೇಶ ಪ್ರವಾಸ ಪಟ್ಟಿ ಸಿದ್ಧ
»ಡಾ.ಜಾಫರ್ ಪಾಸ್‌ಪೋರ್ಟ್ ಪೊಲೀಸ್ ವಶಕ್ಕೆ | ಗೋವಾ ನಂಟಿನ ತನಿಖೆ | ನಯೀಮ್ ಸಿದ್ದಿಕಿ ವಿಚಾರಣೆ ಸ್ಥಳ ಬದಲು | ಕಾರವಾಳಿ ಪ್ರದೇಶಕ್ಕೆ ಹೊರಟ ಸಿಸಿಬಿ ತಂಡ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri