ಶುಕ್ರವಾರದ ನಂತ್ರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ ಸಾಧ್ಯತೆ |
ಪ್ರಕಟಿಸಿದ ದಿನಾಂಕ : 2012-09-05
ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ದರವನ್ನು ಶುಕ್ರವಾರದ ನಂತರ ಮತ್ತೆ ಏರಿಕೆ ಮಾಡುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.
ತೈಲೋತ್ಪನ್ನಗಳಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿಗೆ ಹಣಕಾಸು ಇಲಾಖೆಯಲ್ಲಿ ಹಣಕಾಸಿನ ಕೊರತೆ ಉಂಟಾಗಿರುವುದೇ ದರ ಏರಿಕೆಗೆ ಪ್ರಮುಖ ಕಾರಣವೆಂದು ಇಲಾಖೆಯ ಮೂಲಗಳು ಹೇಳಿವೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಶುಕ್ರವಾರ ಕೊನೆಗೊಳ್ಳಲಿದ್ದು, ಶುಕ್ರವಾರದ ನಂತರ ಪೆಟ್ರೋಲ್ ಬೆಲೆ ಏರಿಕೆ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ತೈಲದ ದರದಲ್ಲಿ ಶೇ.28ರಷ್ಟು ಬೆಲೆ ಏರಿಕೆಯಾಗಿದ್ದು, ತೈಲ ಕಂಪನಿಗಳು ಅನುಭವಿಸುತ್ತಿರುವ ನಷ್ಟವನ್ನು ತಡೆಯಲು ಕೇಂದ್ರ ಈ ನಿರ್ಧಾರಕ್ಕೆ ಬಂದಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.
ಕಳೆದ 2011ರ ಜೂನ್ 11ರಿಂದ ಡೀಸೆಲ್, ಎಲ್ಪಿಜಿ ಮತ್ತು ಸೀಮೆಎಣ್ಣೆ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಆದರೆ ಈಗ ಅವುಗಳಿಗೆ ಸಬ್ಸಿಡಿ ನೀಡಲು ಹಣಕಾಸು ಇಲಾಖೆಯಲ್ಲಿ ಹಣವಿಲ್ಲ. ಆದ್ದರಿಂದ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹಣಕಾಸು ಇಲಾಖೆಯ ಮೂಲಗಳು ಹೇಳಿವೆ. ದರ ಏರಿಕೆ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ.
ವರದಿಯ ವಿವರಗಳು |
 |
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2012-09-05
|
|
|